ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು 'ನಮ್ಮೂರು ನಮ್ಮಕೆರೆ' ಕಾರ್ಯಕ್ರಮದಡಿ ಐತಿಹಾಸಿಕ ಕೆರೆ ಅಭಿವೃದ್ಧಿಗೆ ಚಾಲನೆ ನೀಡಿದೆ. ಈ ಪುನಶ್ಚೇತನ ಕಾಮಗಾರಿಯಿಂದ 180 ಎಕರೆ ಕೃಷಿಭೂಮಿಗೆ ನೀರಾವರಿ ಮತ್ತು ಸಾವಿರಾರು ಜಾನುವಾರುಗಳಿಗೆ ಕುಡಿಯುವ ನೀರಿನ ಅನುಕೂಲವಾಗಲಿದೆ.

ದಾವಣಗೆರೆ: ಚನ್ನಗಿರಿ ತಾಲೂಕಿನ ಮುದ್ದೇನಹಳ್ಳಿ ಗ್ರಾಮದ ದೇವರ ಕಟ್ಟೆ ಹೆಸರಿನ ಕೆರೆ ಅಭಿವೃದ್ಧಿ ಮತ್ತು ಪುನಶ್ಚೇತನ ಕಾಮಗಾರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಚನ್ನಗಿರಿ ಯೋಜನಾ ಕಚೇರಿಯ ವ್ಯಾಪ್ತಿಯಲ್ಲಿ ಮಂಗಳವಾರ ನಮ್ಮೂರು ನಮ್ಮಕೆರೆ ಕಾರ್ಯಕ್ರಮದಲ್ಲಿ ಶ್ರೀ ಮೌದ್ಗಲ್ ಆಂಜನೇಯ ಸ್ವಾಮಿ ಟ್ರಸ್ಟ್‌ ಅಧ್ಯಕ್ಷ ಶಿವಲಿಂಗಪ್ಪ ನೆರವೇರಿಸಿದರು.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

180 ಎಕರೆ ಕೃಷಿಭೂಮಿಗೆ ಅನುಕೂಲ

250 ವರ್ಷಗಳ ಇತಿಹಾಸದ ಕೆರೆಯಿದು. ಈ ಕೆರೆ ಅಭಿವೃದ್ಧಿಪಡಿಸಲು ಮುಂದಾಗುತ್ತಿರುವುದು ನೋಡಿದರೆ, ಶ್ರೀ ಮಂಜುನಾಥ ಸ್ವಾಮಿ ಕೃಪೆ ನಮ್ಮ ಗ್ರಾಮದ ಮೇಲೆ ಇದೆ ಅನಿಸಿದೆ. ಈ ಕೆರೆ ಅಭಿವೃದ್ಧಿಯಿಂದ 180 ಎಕರೆ ಕೃಷಿಭೂಮಿಗೆ ಅನುಕೂಲವಾಗಲಿದೆ. 2 ಸಾವಿರ ಜಾನುವಾರುಗಳಿಗೆ ಕುಡಿಯುವ ನೀರಿಗೆ ಆಸರೆ ಆಗಲಿದೆ ಎಂದು ಹೇಳಿದರು.

17 ಕೆರೆಗಳ ಅಭಿವೃದ್ಧಿ

ಯೋಜನಾಧಿಕಾರಿ ರೂಪ ಮಾತನಾಡಿ 2016ರಿಂದ ಕೆರೆಗಳ ಪುನಶ್ಚೇತನ ಕಾರ್ಯಕ್ರಮ ಶ್ರೀ ಕ್ಷೇತ್ರ ಗ್ರಾಮಾಭಿವೃದ್ಧಿ ಯೋಜನೆಯಿಂದ ಆರಂಭವಾಗಿದೆ. ಇದುವರೆಗೂ ರಾಜ್ಯದಲ್ಲಿ 936 ಕೆರೆಗಳು ಆಭಿವೃದ್ಧಿಗೊಂಡಿದೆ. ಜಿಲ್ಲೆಯಲ್ಲಿ 31 ಕೆರೆ ಚನ್ನಗಿರಿ ತಾಲೂಕಿನಲ್ಲಿ 17 ಕೆರೆಗಳನ್ನು ಅಭಿವೃದ್ಧಿಪಡಿಸಲಾಗಿದೆ ಎಂದು ತಿಳಿಸಿದರು.

ಇದನ್ನೂ ಓದಿ: ₹27.72 ಕೋಟಿ ಮೌಲ್ಯದ ಸರ್ಕಾರಿ ಜಮೀನು ವಶಕ್ಕೆ ಪಡೆದ ಬೆಂಗಳೂರು ನಗರ ಜಿಲ್ಲಾಡಳಿತ

ಮುಖ್ಯ ಅತಿಥಿಗಳಾಗಿ ಪ್ರಾದೇಶಿಕ ನಿರ್ದೇಶಕಿ ಗೀತಾ, ಗ್ರಾಪಂ ಮಾಜಿ ಸದಸ್ಯ ಹಾಲೇಶಪ್ಪ, ಅಭಿಯಂತರ ಹರೀಶ್, ಕೆರೆ ಅಭಿವೃದ್ಧಿ ಸಮಿತಿ ಅಧ್ಯಕ್ಷ ಶಿವಕುಮಾರ್, ಕೃಷಿ ಅಧಿಕಾರಿ ಹನುಮಂತಪ್ಪ, ವಲಯ ಮೇಲ್ವಿಚಾರಕ ನಾಗರಾಜ್, ಸೇವಾ ಪ್ರತಿನಿಧಿ ಪುಷ್ಪಲತಾ, ಗ್ರಾಮಸ್ಥರು ಹಾಜರಿದ್ದರು.

ಇದನ್ನೂ ಓದಿ: 59 ದಿನಗಳ ಬಳಿಕ ಕೊನೆಗೂ ಹುತ್ತೂರು, ಶ್ಯಾನಡ್ರಹಳ್ಳಿ ಕೆರೆಗೆ ನೀರು ಬಂತು; ರೈತರಲ್ಲಿ ಸಂತಸ