ಅರಣ್ಯಾಧಿಕಾರಿಗೆ ಬಿಜೆಪಿ ಶಾಸಕ ಅವಾಜ್: ವೈರಲ್ ಆಯ್ತು ಧಮ್ಕಿ ವಿಡಿಯೋ
ಅರಣ್ಯಾಧಿಕಾರಿಗೆ ಬಿಜೆಪಿ ಶಾಸಕ ಅವಾಜ್: ವೈರಲ್ ಆಯ್ತು ಧಮ್ಕಿ ವಿಡಿಯೋ
ಮೂಡಿಗೇರೆ ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿ ಚಿಕ್ಕಮಗಳೂರುಅರಣ್ಯ ಇಲಾಖೆ ಕಚೇರಿಯಲ್ಲಿ ರಂಪಾಟ ಮಾಡಿರುವುದು ಬೆಳಕಿಗೆ ಬಂದಿದೆ.
ಹುಲಿ ಉಗುರು ಕಳ್ಳತನ ಪ್ರಕರಣದಲ್ಲಿ ತನ್ನ ಬೆಂಬಲಿಗರ ವಿರುದ್ಧ ಚಿಕ್ಕಮಗಳೂರು ಅರಣ್ಯ ಇಲಾಖೆ ಅಧಿಕಾರಿಗಳು ಪ್ರಕರಣ ದಾಖಲಿಸಿದ್ದರಿಂದ ರೊಚ್ಚಿಗೆದ್ದ ಶಾಸಕ ಎಂ.ಪಿ.ಕುಮಾರಸ್ವಾಮಿ ರಂಪಾಟ ಮಾಡಿದ್ದಾರೆ. ತಮ್ಮ ಪೋನ್ ಸ್ವೀಕರಿಸದ ಹಿನ್ನಲೆಯಲ್ಲಿ ಕುಡಿದ ಮತ್ತಿನಲ್ಲಿಯೇ ಅರಣ್ಯ ಇಲಾಖೆ ಕಚೇರಿಗೆ ತೆರಳಿ ಮನಬಂದಂತೆ ತರಾಟೆಗೆ ತೆಗೆದುಕೊಂಡಿದ್ದಾರೆ. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.