Asianet Suvarna News Asianet Suvarna News

'RR ನಗರ ಬಿಜೆಪಿ ಅಭ್ಯರ್ಥಿಯಾಗಿರೋ ಮುನಿರತ್ನಗೆ ಒಲಿಯುಲಿದೆ ಧಮಾಕ'

ಉಪ ಚುನಾವಣೆ ಎದುರಿಸುತ್ತಿರುವ ಆರ್ ಆರ್ ನಗರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿರುವ ಮುನಿರತ್ನಗೆ ಧಮಾಕ ಒಲಿಯಲಿದೆ ಎನ್ನಲಾಗಿದೆ. 

Muniratna will win in RR Nagara By Election Says ST Somashekar snr
Author
Bengaluru, First Published Oct 15, 2020, 2:08 PM IST
  • Facebook
  • Twitter
  • Whatsapp

ಮೈಸೂರು (ಅ.15) : ಮೈಸೂರು ಮೃಗಾಲಯಕ್ಕೆ ಆಫ್ರಿಕಾದಿಂದ ಕರೆತರಲಾಗಿರುವ ಮೂರು ಚೀತಾಗಳನ್ನು ಸಾರ್ವಜನಿಕ ವೀಕ್ಷಣೆಗೆ ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್  ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು. 

ಈ ವೇಳೆ ಮಾತನಾಡಿದ ಸಚಿವ ಸೋಮಶೇಖರ್ ಮೈಸೂರು ಮೃಗಾಲಯಕ್ಕೆ ಮೂರು ಹೊಸ ಚೀತಾಗಳನ್ನು ಕರೆತರಲಾಗಿದೆ. ದೇಶದಲ್ಲಿ ಹೈದರಾಬಾದ್ ಬಿಟ್ಟರೆ ಮೈಸೂರಿನಲ್ಲಿ ಮಾತ್ರ  ಈ ಚೀತಾಗಳಿದ್ದು, ಆಗಸ್ಟ್ 17 ರಂದು ಪ್ರಾಣಿ ವಿನಿಮಯ ಯೋಜನೆಯಡಿ ದಕ್ಷಿಣ ಆಫ್ರಿಕಾದಿಂದ ಒಂದು ಗಂಡು, ಎರಡು ಹೆಣ್ಣು ಚೀತಾಗಳು  ಆಗಮಿಸಿದ್ದವು ಎಂದು  ತಿಳಿಸಿದರು.

ಸರಳ ದಸರಾವನ್ನು ಮಾತ್ರ ಆಚರಿಸಲಾಗುವುದು. ನಾಳೆ ಮೈಸೂರಿಗೆ ಮುಖ್ಯಮಂತ್ರಿಗಳು ಆಗಮಿಸುತ್ತಿದ್ದಾರೆ. ಜಿಲ್ಲಾಡಾಳಿತದಿಂದ ಈಗಾಗಲೇ ಎಲ್ಲ ಸಿದ್ಧತೆಗಳು ಆಗಿವೆ. ನಾಡಿದ್ದು ಮುಖ್ಯಮಂತ್ರಿಗಳು ನಾಡಹಬ್ಬ ದಸರಾಕ್ಕೆ ಚಾಲನೆ ನೀಡಲಿದ್ದಾರೆ ಎಂದು ಸಚಿವರು ತಿಳಿಸಿದರು.

ಬಿಜೆಪಿ ಅಭ್ಯರ್ಥಿ ಮುನಿರತ್ನ ಆಸ್ತಿ ಮೊತ್ತ ಎಷ್ಟಿದೆ..? ಕ್ರಿಮಿನಲ್ ಕೇಸು ಇದೆ

ಮೈಸೂರು ಮೃಗಾಲಯ, ಚಾಮುಂಡಿ ಬೆಟ್ಟ ಹಾಗೂ ದಸರಾ ಕಾರ್ಯಕ್ರಮಕ್ಕೆ ಹೆಚ್ಚಿನ ಜನ ಬರುವ ಹಿನ್ನೆಲೆಯಲ್ಲಿ ನಿರ್ಬಂಧವನ್ನು ಹೇರಲಾಗುತ್ತದೆ. ಕೇಂದ್ರ ಸರ್ಕಾರ ಹಾಗೂ ತಜ್ಞರ ತಂಡ ನೀಡಿರುವ ನಿಬಂಧನೆಗಳನ್ನು ಕಡ್ಡಾಯವಾಗಿ ಪಾಲನೆ ಮಾಡುತ್ತೇವೆ. ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರುವ ಕಾರಣ. ಸಾರ್ವಜನಿಕ ನಿರ್ಬಂಧ ಅನಿವಾರ್ಯ. ಈ ಹಿನ್ನೆಲೆಯಲ್ಲಿ ಕೆಲವು ಕಟ್ಟುನಿಟ್ಟಿನ ಕ್ರಮ ಅನಿವಾರ್ಯ ಎಂದು ಸಚಿವ ಸೋಮಶೇಖರ್ ತಿಳಿಸಿದರು. 

ಮುನಿರತ್ನಗೆ ಗೆಲುವು ಖಚಿತ 

ರಾಜರಾಜೇಶ್ವರಿ ನಗರ ಚುನಾವಣೆ ಸಂಬಂಧ ಪಕ್ಷದ ಅಭ್ಯರ್ಥಿಗಳಾದ ಮುನಿರತ್ನ ಅವರ ನಾಮಪತ್ರ ಸಲ್ಲಕೆ ವೇಳೆ ನಾನು ಉಪಸ್ಥಿತನಿದ್ದೆ. ಚುನಾವಣೆಯಲ್ಲಿ ಅವರು 30ರಿಂದ 40 ಸಾವಿರ ಲೀಡ್ ನೊಂದಿಗೆ ಗೆಲುವು ಸಾಧಿಸಲಿದ್ದಾರೆ. ಇದರಲ್ಲಿ ಯಾವುದೇ ಅನುಮಾನ ಬೇಡ. ನನಗೆ ದಸರಾ ಇರುವುದರಿಂದ ಎಲ್ಲ ಸಮಯ ಅಲ್ಲಿ ಇರಲು ಆಗುತ್ತಿಲ್ಲ. ರಾಜರಾಜೇಶ್ವರಿ ನಗರ ಸಹ ನನ್ನ ಕ್ಷೇತ್ರದ ಪಕ್ಕವೇ ಇರುವುದರಿಂದ ಗೆಲುವಿಗೆ ಇನ್ನಷ್ಟು ಹೆಚ್ಚಿಗೆ ಕೆಲಸ ಮಾಡಬಹುದಾಗಿದೆ ಎಂದರು.

ಸಚಿವ ಸ್ಥಾನ ಸಿಎಂಗೆ ಬಿಟ್ಟಿದ್ದು

ವಿಶ್ವನಾಥ್ ಅವರಿಗೆ ಅವರಿಗೆ ವಿಧಾನಪರಿಷತ್ ಸದಸ್ಯ ಸ್ಥಾನ ಸಿಗಲು ನಾನು ಸಹ ಬಹಳಷ್ಟು ಪ್ರಯತ್ನಪಟ್ಟಿರುವುದು ಎಲ್ಲರಿಗೂ ತಿಳಿದಿರುವ ವಿಚಾರ. ಅವರಿಗೆ ಸಚಿವ ಸ್ಥಾನ ಕೊಡುವುದು ಮುಖ್ಯಮಂತ್ರಿಗಳ ಪರಮಾಧಿಕಾರ ಎಂದು ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

Follow Us:
Download App:
  • android
  • ios