Pocso case: ಮುರುಘಾಶ್ರೀ ಪೋಕ್ಸೋ ಪ್ರಕರಣ: ನ್ಯಾಯಾಂಗ ತನಿಖೆಗೆ ಆಗ್ರಹ

  • ಮುರುಘಾಶ್ರೀ ಪೋಕ್ಸೋ ಪ್ರಕರಣ: ನ್ಯಾಯಾಂಗ ತನಿಖೆಗೆ ಆಗ್ರಹ
  • ಬಿಎಸ್ಪಿ ರಾಜ್ಯ ಉಸ್ತುವಾರಿ ಮಾರಸಂದ್ರ ಮುನಿಯಪ್ಪ ಒತ್ತಾಯ
  • 21ರಂದು ಚಿತ್ರದುರ್ಗದಲ್ಲಿ ಧರಣಿ
Murughashree POCSO case Demand for judicial probe chitradurga rav

ಚಿತ್ರದುರ್ಗ (ಡಿ.1\5) : ಮುರುಘಾ ಶರಣರ ವಿರುದ್ಧ ಪೋಕ್ಸೋ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಒಳಪಡಿಸುವಂತೆ ಒತ್ತಾಯಿಸಿ ಬಹುಜನ ಸಮಾಜ ಪಾರ್ಟಿಯಿಂದ ಡಿ.21 ರಂದು ಬೆಳಗ್ಗೆ 11 ಗಂಟೆಗೆ ಒನಕೆ ಓಬವ್ವ ಸರ್ಕಲ್‌ನಲ್ಲಿ ಬೃಹತ್‌ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಬಿಎಸ್‌ಪಿ ರಾಜ್ಯ ಉಸ್ತುವಾರಿ ಮಾರಸಂದ್ರ ಮುನಿಯಪ್ಪ ತಿಳಿಸಿದರು.

ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುರುಘಾ ಶರಣರ ವಿರುದ್ದ ದೂರು ನೀಡಿದ ಸಂತ್ರಸ್ತ ಬಾಲಕಿಯ ತಾಯಿಯನ್ನು ಪೊಲೀಸರು 21 ದಿನಗಳ ಕಾಲ ವಶದಲ್ಲಿಟ್ಟುಕೊಂಡು ಮಾನಸಿಕವಾಗಿ ಹಿಂಸೆ ನೀಡಿದ್ದಾರೆ. ನಿವೃತ್ತ ಪೊಲೀಸ್‌ ಮಹಾ ನಿರ್ದೇಶಕ ಶಂಕರ್‌ಬಿದರಿ ಹಾಗೂ ನಿವೃತ್ತ ಪೊಲೀಸ್‌ ಅಧಿಕಾರಿ ಜ್ಯೋತಿ ಪ್ರಕಾಶ್‌ ಮಿರ್ಜಿ ಅವರು ಈ ಹಗರಣಕ್ಕೆ ಸಂಬಂಧಿಸಿದಂತೆ ಜಿಲ್ಲೆಯ ಪೊಲೀಸರ ಮೇಲೆ ಒತ್ತಡ ಹಾಕಿ ಕೇಸನ್ನು ಮುಚ್ಚಿ ಹಾಕಿಸುವ ಕುತಂತ್ರ ನಡೆಸುತ್ತಿದ್ದಾರೆ ಎಂದು ದೂರಿದರು.

ಜಿಲ್ಲೆಯ ಜನಪ್ರತಿನಿಧಿಗಳು ಹಾಗೂ ಕೇಂದ್ರ ಮಂತ್ರಿಗಳ್ಯಾರು ಶರಣರ ವಿರುದ್ಧ ಧ್ವನಿ ಎತ್ತುತ್ತಿಲ್ಲ. ದೂರುದಾರರ ಮೇಲೆಯೇ ಪೊಲೀಸ್‌ ದೌರ್ಜನ್ಯ ನಡೆಯುತ್ತಿರುವುದು ಖಂಡನೀಯ. ಅಪ್ರಾಪ್ತರ ಮೇಲೆ ಲೈಂಗಿಕ ದೌರ್ಜನ್ಯವೆಸಗಿ ಪೋಕ್ಸೋ ಕಾಯಿದೆಯಡಿ ಬಂಧನಕ್ಕೊಳಗಾಗಿರುವ ಮುರುಘಾ ಶರಣರಿಗೆ ಸೂಕ್ತ ಶಿಕ್ಷೆ ವಿಧಿಸಬೇಕು ಎಂದು ಒತ್ತಾಯಿಸಿದರು.

ಮುರುಘಾ ಮಠಕ್ಕೆ ಸರ್ಕಾರದ ನೂತನ ಆಡಳಿತಾಧಿಕಾರಿ ಎಸ್.ಬಿ ವಸ್ತ್ರದ್ ಆಗಮನ

ಮುರುಘಾ ಶರಣರು ಹಣಬಲ, ರಾಜಕೀಯ ಬಲ, ಮಠಬಲವಿಟ್ಟುಕೊಂಡು ಕೇಸು ಮುಚ್ಚಿಹಾಕಲು ಹೊರಟಿದ್ದಾರೆ. ಉಚ್ಛ ನ್ಯಾಯಾಲಯದ ಲಿಂಗಾಯಿತರಲ್ಲದ ಹಾಲಿ ನ್ಯಾಯಾಧೀಶರೊಬ್ಬರಿಂದ ಹಗರಣದ ಸಂಪೂರ್ಣ ತನಿಖೆಯಾಗಬೇಕೆಂದು ಆಗ್ರಹಿಸಿ ನಡೆಸುತ್ತಿರುವ ಬೃಹತ್‌ ಪ್ರತಿಭಟನೆಯಲ್ಲಿ ನಾಲ್ಕೈದು ಸಾವಿರ ಜನ ಸೇರುವ ನಿರೀಕ್ಷೆಯಿದೆ. ವಿವಿಧ ಸಂಘಟನೆಗಳು ನಮ್ಮ ಹೋರಾಟಕ್ಕೆ ಬೆಂಬಲಿಸಲಿವೆ ಎಂದು ಹೇಳಿದರು. ಬಹುಜನ ಸಮಾಜ ಪಾರ್ಟಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್‌.ಪ್ರಕಾಶ್‌, ತಾಳಿಕೆರೆ ಮಂಜುನಾಥ್‌, ಎಲ್‌.ಅವಿನಾಶ್‌ ಇದ್ದರು. 

Murugha Shree Case: ಮುರುಘಾ ಶ್ರೀ ವಿರುದ್ದ ಸುಳ್ಳು ಕೇಸ್ ದಾಖಲಿಸಲು ಪಿತೂರಿ

Latest Videos
Follow Us:
Download App:
  • android
  • ios