ಕೊರೋನಾ ಮಹಾಮಾರಿಯಿಂದ ಮೃತಪಟ್ಟ ಹಿಂದೂ ಯುವಕನ ಅಂತ್ಯಸಂಸ್ಕಾರವನ್ನು ಮುಸ್ಲಿಂ ಯುವಕರು ನೆರವೇರಿಸಿ ಮಾನವೀಯತೆ ಮೆರೆದಿದ್ದಾರೆ.

ಹಾಸನ (ಸೆ.20) : ಕೊರೋನಾ ಮಹಾಮಾರಿಯಿಂದ ಮೃತಪಟ್ಟಿದ್ದ ಹಿಂದೂ ವ್ಯಕ್ತಿಯ ಅಂತ್ಯಕ್ರಿಯೆಯನ್ನು ಮುಸ್ಲಿಂ ಯುವಕರು ನೆರವೇರಿಸಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ನಮಾಜ್ ಬಿಟ್ಟು ಬಂದು ಹಿಂದೂ ಧರ್ಮದ ವಿಧಿ ವಿಧಾನದಂತೆ ಅಂತ್ಯಕ್ರಿಯೆ ನಡೆಸಿದ್ದಾರೆ. ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಕ್ಯಾಮನಹಳ್ಳಿಯಲ್ಲಿ ಈ ಘಟನೆ ನಡೆದಿದೆ. 

ಆಚಂಗಿ ಗ್ರಾಮದ ಮೋಹಿದ್ದೀನ್, ಮಸೀದಿ ಸಮಿತಿ ಕಾರ್ಯಕರ್ತರಾದ ಸಮೀರ್, ಆರೀಫ್, ಅಜೀಜ್, ಅಬ್ದುಲ್ ಮಜೀದ್, ಮಹಾಝ್, ಹಮೀದ್ ಕುಡುಗರಹಳ್ಳಿ ಸೇರಿ ಅಂತ್ಯಕ್ರಿಯೆ ನೆರವೇರಿಸಿದ್ದಾರೆ. ಈ ಮೂಲಕ ಧಾರ್ಮಿಕ ಸಾಮರಸ್ಯದ ಮೂಲಕ ಮಾನವೀಯತೆ ಮೆರೆದಿದ್ದಾರೆ. 

ಇದನ್ನೂ ಓದಿ: ಯಾದಗಿರಿ: ಮುಸ್ಲಿಂ ಯುವಕರಿಂದ ಹಿಂದೂ ವ್ಯಕ್ತಿ ಅಂತ್ಯಸಂಸ್ಕಾರ

ಹಾಸನದ ಚಂಪಕನಗರದ ರುದ್ರಭೂಮಿಯಲ್ಲಿ ಅಂತ್ಯಕ್ರಿಯೆ ನಡೆಸಿದ್ದಾರೆ. ಮುಸ್ಲಿಂ ಯುವಕರ ಕಾರ್ಯಕ್ಕೆ ಅಪಾರ ಮೆಚ್ಚುಗೆ ವ್ಯಕ್ತವಾಗಿದೆ.

ಬೆಳಗಾವಿಯಲ್ಲಿ ಮುಸ್ಲಿಂ ಯುವಕರಿಂದ ಹಿಂದೂ ವ್ಯಕ್ತಿಯ ಅಂತ್ಯಕ್ರಿಯೆ

"