Asianet Suvarna News Asianet Suvarna News

ಬೆಂಗಳೂರು ಗ್ರಾಮಾಂತರದಲ್ಲಿ ಡಾ.ಮಂಜುನಾಥ್ ಗೆದ್ದಿದ್ದಕ್ಕೆ ಮಲೆ ಮಾದಪ್ಪನಿಗೆ ಹರಕೆ ತೀರಿಸಿದ ಮುಸ್ಲಿಂ ವ್ಯಕ್ತಿ!

ಡಾ.ಸಿ.ಎನ್. ಮಂಜುನಾಥ್ ಅವರು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದಕ್ಕೆ ರಾಮನಗರದ ಮುಸ್ಲಿಂ ವ್ಯಕ್ತಿ ಯೂನಸ್ ಖಾನ್ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ತೀರಿಸಿದ್ದಾರೆ.

Muslim Yunus Khan special prey to Hindu god Male Mahadeshwara for Dr cn Manjunath victory sat
Author
First Published Jun 5, 2024, 8:21 PM IST

ಬೆಂಗಳೂರು/ರಾಮನಗರ (ಜೂ.05): ರಾಜ್ಯದಲ್ಲಿ ಅತ್ಯಂತ ಕಡಿಮೆ ಬೆಲೆಗೆ ಹೃದ್ರೋಗ ಚಿಕಿತ್ಸೆ ನೀಡಿ ಜಾತಿ ಬೇಧವಿಲ್ಲದೇ ಕೋಟ್ಯಂತರ ಅಭಿಮಾನಿಗಳನ್ನು ಗಳಿಸಿದ್ದ ಡಾ.ಸಿ.ಎನ್. ಮಂಜುನಾಥ್ ಅವರು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದಕ್ಕೆ ರಾಮನಗರದ ಮುಸ್ಲಿಂ ವ್ಯಕ್ತಿ ಯೂನಸ್ ಖಾನ್ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ತೀರಿಸಿದ್ದಾರೆ.

ಹೌದು, ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಡಾ.ಮಂಜುನಾಥ್ ಗೆಲುವು ಹಿನ್ನೆಲೆಯಲ್ಲಿ ರಾಮನಗರ ತಾಲೂಕಿನ ಗೊಲ್ಲಹಳ್ಳಿ ಗ್ರಾಮದ ನಿವಾಸಿ ಯೂನಸ್ ಖಾನ್ ಎನ್ನುವವರು ಮಲೆ ಮಹದೇಶ್ವರ ಬೆಟ್ಟದಲ್ಲಿ ಹೋಗು ಮಲೆ ಮಹದೇಶ್ವರ ದೇವರಿಗೆ ಮುಡಿ ಕೊಟ್ಟು ಹರಕೆ ತೀರಿಸಿದ್ದಾನೆ. ಹೃದ್ರೋಗಕ್ಕೆ ಕಡಿಮೆ ಬೆಲೆಗೆ ಚಿಕಿತ್ಸೆ ನೀಡಿ ಖ್ಯಾತಿಯಾಗಿದ್ದ ಡಾ.ಸಿ.ಎನ್. ಮಂಜುನಾಥ್ ಅವರಿಗೆ ಯೂನಸ್‌ ಖಾನ್ ಅಭಿಮಾನಿ ಆಗಿದ್ದರು. ಇನ್ನು ಅವರು ಜಯದೇವ ಹೃದ್ರೋಗ ಸಂಸ್ಥೆ ನಿರ್ದೇಶಕ ಸ್ಥಾನದಿಂದ ಕೆಳಗಿಳಿದಾಗ ಭಾರಿ ಬೇಸರ ಪಟ್ಟುಕೊಂಡಿದ್ದರು. ನಂತರ, ತಮ್ಮದೇ ಲೋಕಸಭಾ ಕ್ಷೇತ್ರಕ್ಕೆ ಸಂಸದ ಸ್ಥಾನಕ್ಕಾಗಿ ಸ್ಪರ್ಧೆ ಮಾಡಿದಾಗ ಭಾರಿ ಸಂತಸ ವ್ಯಕ್ತಪಡಿಸಿದ್ದರು.

ಇನ್ಫೋಸಿಸ್ ಸುಧಾಮೂರ್ತಿ ಹರಕೆಯಿಂದಲೇ ಗೆದ್ದುಬಂದ ಹೃದಯವಂತ ಡಾ. ಸಿ.ಎನ್. ಮಂಜುನಾಥ್!

ಆದರೆ, ಕನಕಪುರ ಡಿ.ಕೆ. ಬ್ರದರ್ಸ್ ಭದ್ರಕೋಟೆಯಾಗಿದ್ದ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಡಾ.ಮಂಜುನಾಥ್ ಗೆಲವು ಸುಲಭವಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ರಾಮನಗರ ತಾಲೂಕಿನ ಗೊಲ್ಲಹಳ್ಳಿಯ ಮುಸ್ಲಿಂ ವ್ಯಕ್ತಿ ಯೂನಸ್ ಖಾನ್ ಅವರು ಡಾ.ಮಂಜುನಾಥ್ ಅವರ ಗೆಲುವಿಗಾಗಿ ಮಲೆ ಮಹದೇಶ್ವರ ದೇವರಿಗೆ ಮುಡಿ ಕೊಡುವುದಾಗಿ ಹರಕೆ ಹೊತ್ತಿದ್ದರು. ಈ ಬಗ್ಗೆ ಗ್ರಾಮದ ಕೆಲವು ಸ್ನೇಹಿತರಿಗೂ ಹೇಳಿದ್ದರು. ಇನ್ನು ದೇವರ ಪವಾಡವೆಂಬಂತೆ ಡಾ.ಸಿ.ಎನ್. ಮಂಜುನಾಥ್ ಅವರು ಬರೋಬ್ಬರು 2.60 ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.

ಮಹದೇಶ್ವರ ದೇವರಿಗೆ ಹರಕೆ ಕಟ್ಟಿಕೊಂಡಿದ್ದ ವ್ಯಕ್ತಿ ಯೂನಸ್ ಖಾನ್ ತನ್ನ ಸ್ನೇಹಿತರೊಂದಿಗೆ ಬುಧವಾ ಮಹದೇಶ್ವರ ಬೆಟ್ಟಕ್ಕೆ ತೆರಳಿ ಮುಡಿ ಕೊಟ್ಟು ಹರಕೆ ತೀರಿಸಿದ್ದಾರೆ. ಇದಕ್ಕೆ ಯೂನಸ್ ಖಾನ್ ಜೊತೆಗೆ ಆತನ ಸ್ನೇಹಿತರು, ಜೆಡಿಎಸ್ ಕಾರ್ಯಕರ್ತರು ಕೂಡ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳಿ ವಿಶೇಷ ಪೂಜೆ ಮಾಡಿಸಿದ್ದಾರೆ. ಈ ಸಂತಸವನ್ನು ಎಲ್ಲ ಸ್ನೇಹಿತರಿಗೂ ಹಂಚಿಕೊಂಡಿದ್ದಾರೆ. ಈಗ ಮುಸ್ಲಿಂ ವ್ಯಕ್ತಿಯೊಬ್ಬರು ಬಿಜೆಪಿ ಪಕ್ಷದ ಅಭ್ಯರ್ಥಿ ಎನ್ನುವುದಕ್ಕಿಂತ ಮುಖ್ಯವಾಗಿ ಹೃದ್ರೋಗ ಚಿಕಿತ್ಸೆ ನೀಡಿದ ವೈದ್ಯರ ಗೆಲುವುಗಾಗಿ ಧರ್ಮವನ್ನೂ ಮೀರಿದ ಹರಕೆ ಹೊತ್ತು ತೀರಿಸಿರುವುದಕ್ಕೆ ಸಾಮಾಜಿಕ ಜಾಲತಾಣದಲ್ಲಿ ಶ್ಲಾಘನೆ ವ್ಯಕ್ತವಾಗುತ್ತಿದೆ.

ಲೋಕಸಭೆ ಫಲಿತಾಂಶ: ಮಲ್ಲಿಕಾರ್ಜುನ ಖರ್ಗೆಗೆ ಲಕ್, ಡಿ.ಕೆ. ಬ್ರದರ್ಸ್‌ಗೆ ಪವರ್ ಬ್ರೇಕ್; ಸಿದ್ದು ಗದ್ದುಗೆ ಡೋಂಟ್ ಶೇಕ್

ರಾಘವೇಂದ್ರ ಸ್ವಾಮಿಗೆ ಹರಕೆ ಹೊತ್ತಿದ್ದ ಇನ್ಫೋಸಿಸ್ ಸುಧಾಮೂರ್ತಿ: 
ಇನ್ನು ಡಾ.ಸಿ.ಎನ್. ಮಂಜುನಾಥ್ ಅವರು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಗೆಲುವು ಸಾಧಿಸಲೆಂದು ಇನ್ಫೋಸಿಸ್‌ ಫೌಂಡೇಷನ್ ಸಂಸ್ಥಾಪಕ ಅಧ್ಯಕ್ಷೆ ಹಾಗೂ ರಾಜ್ಯಸಭಾ ಸದಸ್ಯೆ ಡಾ.ಸುಧಾಮೂರ್ತಿ ಅವರು ಮಂತರಾಲಯದ ರಾಘವೇಂದ್ರ ಸ್ವಾಮಿಗೆ ಹರಕೆ ಹೊತ್ತಿದ್ದರು. ಸುಮಾರು 6 ಕಿ.ಮೀ. ಪಾದಯಾತ್ರೆ ಮೂಲಕ ದೇವಸ್ಥಾನಕ್ಕೆ ತೆರಳಿ ಡಾ.ಮಂಜುನಾಥ್ ಗೆಲುವಿಗೆ ವಿಶೇಷ ಹರಕೆ ಮಾಡಿಕೊಂಡಿದ್ದಾಗಿ ತಿಳಿಸಿದ್ದರು. ಸಮಾಜ ಸೇವೆಗೆ ಎಲ್ಲಿದ್ದರೂ ಬೆಲೆ ಸಿಗುತ್ತದೆ ಎಂಬುದಕ್ಕೆ ಈ ಮಾನವೀಯ ಬಂಧಗಳೇ ಸಾಕ್ಷಿಯಾಗಿವೆ.

Latest Videos
Follow Us:
Download App:
  • android
  • ios