ಮಂಡ್ಯ: ತ್ರಿವರ್ಣ ಧ್ವಜ ಹಿಡಿದು, ಕಪ್ಪು ಪಟ್ಟಿ ಧರಿಸಿ ನಮಾಜ್ ಸಲ್ಲಿಕೆ
ಪೌರತ್ವ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿದ ಮಂಡ್ಯ ಮುಸ್ಲಿಮರು ತ್ರಿವರ್ಣ ಧ್ವಜವನ್ನು ಹಿಡಿದು, ಕಪ್ಪು ಪಟ್ಟಿ ಧರಿಸಿಯೇ ನಾಮಾಜ್ ಮಾಡಿದ್ದಾರೆ. ಪ್ರಾರ್ಥನೆ ನಡೆಯುವ ಈದ್ಗಾ ಮೈದಾನದಲ್ಲಿ ಬಿಗಿ ಪೋಲಿಸ್ ಬಂದೋಬಸ್ತ್ ಒದಗಿಸಲಾಗಿದೆ.
ಮಂಡ್ಯ(ಡಿ.20): ಪೌರತ್ವ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿದ ಮಂಡ್ಯ ಮುಸ್ಲಿಮರು ತ್ರಿವರ್ಣ ಧ್ವಜವನ್ನು ಹಿಡಿದು, ಕಪ್ಪು ಪಟ್ಟಿ ಧರಿಸಿಯೇ ನಾಮಾಜ್ ಮಾಡಿದ್ದಾರೆ. ಪ್ರಾರ್ಥನೆ ನಡೆಯುವ ಈದ್ಗಾ ಮೈದಾನದಲ್ಲಿ ಬಿಗಿ ಪೋಲಿಸ್ ಬಂದೋಬಸ್ತ್ ಒದಗಿಸಲಾಗಿದೆ.
ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಕಪ್ಪು ಪಟ್ಟಿ ಧರಿಸಿದ ಮುಸ್ಲಿಮರು ತ್ರಿವರ್ಣ ಧ್ವಜ ಹಿಡಿದು ಕಪ್ಪು ಪಟ್ಟಿ ಧರಿಸಿ ಪ್ರಾರ್ಥನೆ ಸಲ್ಲಿಸಿದ್ದಾರೆ. ಪ್ರಾರ್ಥನೆ ಬಳಿಕ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಮೆರವಣಿಗೆ ನಡೆಸುವ ಸಾಧ್ಯತೆ ಇದ್ದು, ಪ್ರಾರ್ಥನೆ ನಡೆಯುವ ಈದ್ಗಾ ಮೈದಾನದಲ್ಲಿ ಪೋಲಿಸ್ ಬಿಗಿ ಬಂದೋಬಸ್ತ್ ಒದಗಿಸಲಾಗಿದೆ.
ಮಂಡ್ಯ: ನಿಷೇಧಾಜ್ಞೆ ನಡುವೆ ಪ್ರತಿಭಟನೆಗೆ ಮುಂದಾದವರ ಬಂಧನ
ಪ್ರಾರ್ಥನೆ ನಂತರ ಮೆರವಣಿಗೆ, ಪ್ರತಿಭಟನೆಗೆ ಅವಕಾಶ ನೀಡದಿರಲು ಪೋಲಿಸರು ಸನ್ನದ್ಧವಾಗಿದ್ದಾರೆ. ಪೋಲಿಸ್ ಬಂದೋಬಸ್ತ್ ನಡೆವೆಯೂ ಮುಸ್ಲಿಂ ಸಂಘಟನೆಗಳು ಮೆರವಣಿಗೆಗೆ ಸಿದ್ಧತೆ ಮಾಡಿಕೊಳ್ಳುತ್ತಿರುವ ದೃಶ್ಯ ಕಂಡು ಬಂದಿದೆ.
ಮಂಡ್ಯದ ಈದ್ಗಾ ಮೈದಾನದಲ್ಲಿ ಪ್ರಾರ್ಥನೆ ಸಲ್ಲಿಸುತ್ತಿರುವ ಮುಸ್ಲಿಮರು, ಮೈದಾನದ ಸುತ್ತಲೂ "ನಾವು CAA&NRC ತಿರಸ್ಕರಿಸುತ್ತೇವೆ" ಎಂಬ ಬ್ಯಾನರ್ ಅಳವಡಿಸಿದ್ದಾರೆ.
ಮಂಗಳೂರು: ಕಾಂಗ್ರೆಸ್ ಪಕ್ಷದ ನಿಯೋಗ ಪೊಲೀಸ್ ವಶಕ್ಕೆ