Asianet Suvarna News Asianet Suvarna News

ಸಕ್ಕರೆ ಕಾರ್ಖಾನೆ ಹಾಳಾಗಿದ್ದು ಮೈತ್ರಿ ಸರ್ಕಾರದಿಂದ: ಸಿದ್ದರಾಮಯ್ಯ

ಕಾಂಗ್ರೆಸ್‌ ಪಕ್ಷ ಅಧಿಕಾರದಲ್ಲಿದ್ದಾಗ ನಾನೇ ಸರ್ಕಾರದಿಂದ ಹಣ ಕೊಟ್ಟು ಪಾಂಡವಪುರ ಹಾಗೂ ಮೈಷುಗರ್‌ ಕಾರ್ಖಾನೆಯನ್ನು ಆರಂಭಿಸಿದ್ದೆ. ಸಮ್ಮಿಶ್ರ ಸರ್ಕಾರದಿಂದ ಸಕ್ಕರೆ ಕಾರ್ಖಾನೆ ಹಾಳಾಗಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಆರೋಪಿಸಿದ್ದಾರೆ.

My sugar went loss because of coalition govt says siddaramaiah in Mandya
Author
Bangalore, First Published Jan 22, 2020, 8:35 AM IST

ಮಂಡ್ಯ(ಜ.22): ಕಾಂಗ್ರೆಸ್‌ ಪಕ್ಷ ಅಧಿಕಾರದಲ್ಲಿದ್ದಾಗ ನಾನೇ ಸರ್ಕಾರದಿಂದ ಹಣ ಕೊಟ್ಟು ಪಾಂಡವಪುರ ಹಾಗೂ ಮೈಷುಗರ್‌ ಕಾರ್ಖಾನೆಯನ್ನು ಆರಂಭಿಸಿದ್ದೆ. ಆ ಸಂದರ್ಭದಲ್ಲಿ ಕಾರ್ಖಾನೆ ಚೆನ್ನಾಗಿ ನಡೆದಿತ್ತು. ಆದರೆ, ನಂತರ ಬಂದ ಸಮ್ಮಿಶ್ರ ಸರ್ಕಾರ ಕ್ರಮ ಕೈಗೊಂಡಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ದೂರಿದ್ದಾರೆ.

ನಗರದ ಪ್ರವಾಸಿ ಮಂದಿರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಕಾರ್ಖಾನೆ ಆರಂಭಿಸುವಂತೆ ಮೈತ್ರಿ ಸರ್ಕಾರವನ್ನು ಒತ್ತಾಯಿಸಿದ್ದೆ. ಈ ಬಗ್ಗೆ ಕ್ರಮ ಕೈಗೊಂಡಿಲ್ಲ. ಈಗ ಬಿಜೆಪಿ ಸರ್ಕಾರಕ್ಕೆ ಒತ್ತಾಯ ಮಾಡುತ್ತೇನೆ. ಕಾರ್ಖಾನೆ ನಡೆಯದ ಪರಿಣಾಮ ಇಲ್ಲಿನ ರೈತರು ತೊಂದರೆ ಪಡುವಂತಾಗಿದೆ. ಕೂಡಲೇ ಕಾರ್ಖಾನೆ ಪ್ರಾರಂಭಕ್ಕೆ ಮುಂದಾಗಬೇಕು ಎಂದು ಆಗ್ರಹಿಸಿದ್ದಾರೆ.

ಬಾಂಬ್ ಪ್ರಕರಣ: KRSನಲ್ಲಿ ಹೆಚ್ಚಿನ ಪೊಲೀಸ್ ಭದ್ರತೆ

ಮಂಗಳೂರು ಅಂತಾರಾಷ್ಟ್ರೀಯ ವಿಮಾನನಿಲ್ದಾಣದಲ್ಲಿ ಸಜೀವ ಬಾಂಬ್‌ ಪತ್ತೆಯಾಗಿರುವುದು ಎಲ್ಲರೂ ಭಯ ಪಡುವಂತಾಗಿದೆ. ಈ ಪ್ರಕರಣದ ವಿಚಾರವಾಗಿ ರಾಜ್ಯದಲ್ಲಿ ಗುಪ್ತಚರ ಇಲಾಖೆ ಸಂಪೂರ್ಣ ವಿಫಲವಾಗಿದೆ ಎಂದು ಆರೋಪಿಸಿದ್ದಾರೆ.

ಮಂಗಳೂರಿನಲ್ಲಿ ಒಂದರ ಹಿಂದೆ ಮತ್ತೊಂದು ಅಹಿತಕರ ಘಟನೆ ನಡೆಯುತ್ತಿವೆ. ಬಾಂಬ್‌ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾರ ಕೈವಾಡ ಇದೆ ಎಂಬ ಬಗ್ಗೆ ಕೂಲಂಕಷ ತನಿಖೆ ಆಗಬೇಕು. ಮತ್ತೊಮ್ಮೆ ಇಂತಹ ಬೆಳವಣಿಗೆ ಆಗದಂತೆ ತಡೆಗಟ್ಟಬೇಕು ಎಂದು ಆಗ್ರಹಿಸಿದ್ದಾರೆ.

ಸಾವಿರಾರು ದೇವರಿಲ್ಲ, ಒಬ್ಬನೇ ದೇವರಿದ್ದಾನೆ: ಸಿದ್ದರಾಮಯ್ಯ

ರಾಜ್ಯ ಸರ್ಕಾರದಲ್ಲಿ ಹಣವಿಲ್ಲದೆ ಅಭಿವೃದ್ಧಿ ಕೆಲಸಗಳು ಸ್ಥಗಿತಗೊಂಡಿದೆ. ಮಂಡ್ಯ ಜಿಲ್ಲೆಗೆ 5 ಸಾವಿರ ಕೋಟಿ ರು. ಅಭಿವೃದ್ಧಿ ಕೆಲಸಗಳು ಬಂದಿದೆ ಎನ್ನುತ್ತಾರೆ. ಆದರೆ, ಎಲ್ಲಿ ಯಾವ ಕೆಲಸ ನಡೆಯುತ್ತಿದೆ. ಸರ್ಕಾರದ ಖಜಾನೆ ಸಂಪೂರ್ಣವಾಗಿ ಖಾಲಿಯಾಗಿ ಆರ್ಥಿಕವಾಗಿ ದಿವಾಳಿಯಾಗಿದೆ ಎಂದು ಆರೋಪಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾಜಿ ಸಚಿವರಾದ ಎನ್‌.ಚಲುವರಾಯಸ್ವಾಮಿ, ಪಿ.ಎಂ.ನರೇಂದ್ರಸ್ವಾಮಿ, ಮಾಜಿ ಶಾಸಕರಾದ ಕೆ.ಬಿ.ಚಂದ್ರಶೇಖರ್‌, ರಮೇಶ್‌ಬಾಬು ಬಂಡಿಸಿದ್ದೇಗೌಡ, ಬಿ.ರಾಮಕೃಷ್ಣ ಇತರರಿದ್ದರು.

Follow Us:
Download App:
  • android
  • ios