Asianet Suvarna News Asianet Suvarna News

ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ ನನ್ನ ಗೆಲುವು ನಿಶ್ಚಿತ : ಅಭ್ಯರ್ಥಿ ವಿಶ್ವಾಸ

ಲೋಕಸಭಾ ಚುನಾವಣೆಯಲ್ಲಿ ಜನರು ದೇಶದ ಅಭಿವೃದ್ದಿಗಾಗಿ ಮತ್ತು ದೇಶದ ಭದ್ರತೆಯ ಹಿತದೃಷ್ಠಿಯನ್ನಿಟ್ಟುಕೊಂಡು ಬಿಜೆಪಿಯನ್ನು ಬೆಂಬಲಿಸಲಿದ್ದಾರೆ, ಆದ್ದರಿಂದ ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ ನನ್ನ ಗೆಲುವು ನಿಶ್ಚಿತವಾಗಿದೆ ಎಂದು ಬಿಜೆಪಿ ಅಭ್ಯರ್ಥಿ ಬಾಲರಾಜು ವಿಶ್ವಾಸ ವ್ಯಕ್ತಪಡಿಸಿದರು.

My victory in Chamarajanagar Lok Sabha constituency is certain: candidate confidence snr
Author
First Published Mar 21, 2024, 10:36 AM IST

  ನಂಜನಗೂಡು :  ಲೋಕಸಭಾ ಚುನಾವಣೆಯಲ್ಲಿ ಜನರು ದೇಶದ ಅಭಿವೃದ್ದಿಗಾಗಿ ಮತ್ತು ದೇಶದ ಭದ್ರತೆಯ ಹಿತದೃಷ್ಠಿಯನ್ನಿಟ್ಟುಕೊಂಡು ಬಿಜೆಪಿಯನ್ನು ಬೆಂಬಲಿಸಲಿದ್ದಾರೆ, ಆದ್ದರಿಂದ ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ ನನ್ನ ಗೆಲುವು ನಿಶ್ಚಿತವಾಗಿದೆ ಎಂದು ಬಿಜೆಪಿ ಅಭ್ಯರ್ಥಿ ಬಾಲರಾಜು ವಿಶ್ವಾಸ ವ್ಯಕ್ತಪಡಿಸಿದರು.

ಶ್ರೀ ಕ್ಷೇತ್ರ ಮಲ್ಲನಮೂಲೆ ಮಠಕ್ಕೆ ಭೇಟಿ ನೀಡಿ ಶ್ರೀ ಚೆನ್ನಬಸವ ಸ್ವಾಮೀಜಿ ಅವರ ಆಶೀರ್ವಾದ ಪಡೆದ ಬಳಿಕ ದೇವನೂರು ಮಠಕ್ಕೆ ಭೇಟಿ ನೀಡಿ ಶ್ರೀ ಮಹಾಂತ ಸ್ವಾಮೀಜಿ ಅವರ ಆಶೀರ್ವಾದ ಪಡೆದ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಬಿಟ್ಟಿ ಯೋಜನೆಗಳನ್ನು ಜಾರಿಗೊಳಿಸಿದ್ದರಿಂದಾಗಿ ಮತ್ತು ಜನರಿಗೆ ಆಸೆ ಆಮಿಷವನ್ನು ತೋರಿಸಿ ಜನರನ್ನು ಯಾಮಾರಿಸಿದ್ದರಿಂದಾಗಿ ಬಿಜೆಪಿಗೆ ಹಿನ್ನೆಡೆಯಾಯಿತು. ಈಗ ರಾಜಕೀಯ ಪರಿಸ್ಥಿತಿ ಬೇರೆಯಾಗಿದ್ದು, ಗ್ಯಾರಂಟಿ ಯೋಜನೆಗಳು ಸಮರ್ಪಕವಾಗಿ ಜನರಿಗೆ ತಲುಪದೇ ಇರುವ ಕಾರಣ ರಾಜ್ಯ ಸರ್ಕಾರದ ವಿರುದ್ದ ವಿರೋಧಿ ಅಲೆಯಿದೆ. ಅಲ್ಲದೆ ಎಸ್ಸಿ, ಎಸ್ಟಿ ಅನುದಾನವನ್ನು ರಾಜ್ಯ ಸರ್ಕಾರ ಗ್ಯಾರೆಂಟಿ ಯೋಜನೆಗಳಿಗೆ ಬಳಕೆ ಮಾಡಿಕೊಂಡು ದಲಿತರಿಗೆ ಉದ್ದಾರಕ್ಕೆ ಮಣ್ಣು ಹಾಕಿ ದ್ರೋಹ ಬಗೆದಿದೆ ಎಂದು ವಾಗ್ದಾಳಿ ನಡೆಸಿದರು.

ಕಳೆದ 10 ವರ್ಷಗಳಲ್ಲಿ ಪ್ರಧಾನಿ ಮೋದಿ ಅವರು ಅನೇಕ ಬಡವರ ಪರ ಜನಪರ ಯೋಜನೆಗಳನ್ನು ಜಾರಿಗೊಳಿಸುವ ಜೊತೆಗೆ ದೇಶಕ್ಕೆ ಸುಭದ್ರ ಸರ್ಕಾರ ನೀಡಿದ್ದಾರೆ. ವಿಕಸಿತ ಭಾರತದ ಮೂಲಕ 2047ಕ್ಕೆ ಭಾರತವನ್ನು ಮುಂದುವರೆದ ರಾಷ್ಟ್ರವನ್ನಾಗಿ ಮಾಡಬೇಕೆಂಬ ಪರಿಕಲ್ಪನೆಯಿಂದ ಅನೇಕ ಯೋಜನೆಗಳನ್ನು ಜಾರಿಗೊಳಿಸಿದ್ದಾರೆ. ಈ ಹಿನ್ನೆಲೆ ಜನರು ದೇಶದ ಭದ್ರತೆ ಮತ್ತು ಅಭಿವೃದ್ದಿಯ ಬಿಜೆಪಿ ಪರ ಮತ ಚಲಾಯಿಸಲಿದ್ದು, ಕ್ಷೇತ್ರದಲ್ಲಿ ನನ್ನ ಗೆಲುವು ನಿಶ್ಚಿತ ಜೊತೆಗೆ ಮತ್ತೊಮ್ಮೆ ಮೋದಿರವರು ಪ್ರಧಾನಿಯಾಗುವುದು ನಿಶ್ಚಿತ ಎಂದರು.

ಈಗಾಗಲೇ ಎಲ್ಲ ಕ್ಷೇತ್ರಗಳಿಗೆ ತೆರಳಿ ಪಕ್ಷದ ಕಾರ್ಯಕರ್ತರು ಮುಖಂಡರನ್ನು ಭೇಟಿ ಮಾಡಿ ಚುನಾವಣೆಯ ಬಗ್ಗೆ ಚೆರ್ಚೆ ನಡೆಸಿ ಪಕ್ಷದ ಸಂಘಟನೆಗೊಳಿಸಿ ಪಕ್ಷ ಗೆಲುವು ಸಾಧಿಸಲು ಏನೇನು ತಂತ್ರಗಾರಿಕೆ ನಡೆಸಬೇಕು ಎಂಬುದರ ಬಗ್ಗೆ ಮನವರಿಕೆ ಮಾಡವ ಜೊತೆಗೆ ಕಾರ್ಯಕರ್ತರ ಜವಾಬ್ದಾರಿಯನ್ನು ಹಂಚಿಕೆ ಮಾಡಲಾಗಿದೆ, ಜೊತೆಗೆ ಬಿ.ಎಸ್. ಯಡಿಯೂರಪ್ಪ, ವಿ. ಶ್ರೀನಿವಾಸಪ್ರಸಾದ್, ಆಶೀರ್ವಾದವಿದ್ದು, ಜೆಡಿಎಸ್ ಬೆಂಬಲವೂ ಇರುವುದರಿಂದ ಗೆಲುವು ಸುಲಭವಾಗಲಿದೆ ಎಂದರಲ್ಲದೆ, ನಾನು ಕಳೆದ 20 ವರ್ಷದಿಂದ ರಾಜಕೀಯ ವನವಾಸ ಅನುಭವಿಸಿದ್ದೇನೆ. ಆದರೂ ಕೂಡ ಅಧಿಕಾರಕ್ಕೆ ಆಸೆ ಪಡದೆ ಜನರ ಜೊತೆಗೆ ಒಡನಾಟವನ್ನಿಟ್ಟುಕೊಂಡು ಜನಸೇವೆಯಲ್ಲಿ ತೊಡಗಿಕೊಂಡಿದ್ದೇನೆ ಎಂದರು.

ಇದನ್ನು ಗಮನಿಸಿ ಬಿಜೆಪಿ ಪಕ್ಷ ಚಾಮರಾಜನಗರ ಲೋಕಸಭಾ ಚುನಾವಣೆಯ ಟಿಕೆಟ್ ನೀಡಿದೆ. ಕ್ಷೇತ್ರದ ಜನತೆ ಆಶೀರ್ವಾದ ಮಾಡುವ ಮೂಲಕ ಸೇವೆ ಮಾಡಲು ನನಗೊಂದು ಅವಕಾಶ ಕಲ್ಪಿಸಿಕೊಡಬೇಕು ಎಂದು ಮನವಿ ಮಾಡಿದರು.

ಜಿಪಂ ಮಾಜಿ ಸದಸ್ಯ ಸಿ. ಚಿಕ್ಕರಂಗನಾಯಕ, ಬಿಜೆಪಿ ತಾಲೂಕು ನಿಕಟಪೂರ್ವ ಅಧ್ಯಕ್ಷ ಪಿ. ಮಹೇಶ್, ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಎನ್.ಸಿ. ಬಸವಣ್ಣ, ಯುವ ಮೋರ್ಚಾ ಜಿಲ್ಲಾ ಕಾರ್ಯದರ್ಶಿ ಮಧುರಾಜ್, ತಾಪಂ ಮಾಜಿ ಸದಸ್ಯ ಶಿವಣ್ಣ, ಸೋಮಣ್ಣ, ಮುಖಂಡರಾದ ಶಂಕರಪ್ಪ, ಮಹೇಶ್ ಬಾಬು, ಮಹೇಶ್, ಶ್ರೀನಿವಾಸರೆಡ್ಡಿ, ಪುಟ್ಟಸ್ವಾಮಿ, ಶೇಖರ್, ಉಮೇಶ್ ಮೋದಿ, ಮಹದೇವಪ್ರಸಾದ್, ಮುರುಗೇಶ್, ಬಿಜೆಪಿ ಎಸ್ಸಿ ಮೋರ್ಚಾ ಅಧ್ಯಕ್ಷ ಮಹದೇವಸ್ವಾಮಿ, ಮಹಿಳಾ ಮೋರ್ಚಾ ಅಧ್ಯಕ್ಷೆ ನಂದಿನಿ ಮಹೇಶ್, ಗಾಯತ್ರಿ ಇದ್ದರು.

Follow Us:
Download App:
  • android
  • ios