Asianet Suvarna News Asianet Suvarna News

ಮೈಸೂರು : ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಗೆಲ್ಲಿಸುವ ಭರವಸೆ

ನಂಜನಗೂಡು ವ್ಯಾಪ್ತಿಯಲ್ಲಿ ಕಳೆದ ಐದು ವರ್ಷಗಳ ಅವಧಿಯಲ್ಲಿ ಕೈಗೊಂಡಿರುವ ಅಭಿವೃದ್ಧಿ ಕಾಮಗಾರಿಗಳನ್ನು ಬೆಂಬಲಿಸಿ ನಗರಸಭೆ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಮತದಾರರು ಗೆಲ್ಲಿಸಿಕೊಡಲಿದ್ದಾರೆ ಎಂದು ಮಾಜಿ ಶಾಸಕ ಬಿ. ಹರ್ಷವರ್ಧನ್ ವಿಶ್ವಾಸ ವ್ಯಕ್ತಪಡಿಸಿದರು.

Mysore  BJP candidate is expected to win the by election snr
Author
First Published Dec 16, 2023, 9:50 AM IST

 ನಂಜನಗೂಡು:  ನಂಜನಗೂಡು ವ್ಯಾಪ್ತಿಯಲ್ಲಿ ಕಳೆದ ಐದು ವರ್ಷಗಳ ಅವಧಿಯಲ್ಲಿ ಕೈಗೊಂಡಿರುವ ಅಭಿವೃದ್ಧಿ ಕಾಮಗಾರಿಗಳನ್ನು ಬೆಂಬಲಿಸಿ ನಗರಸಭೆ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಮತದಾರರು ಗೆಲ್ಲಿಸಿಕೊಡಲಿದ್ದಾರೆ ಎಂದು ಮಾಜಿ ಶಾಸಕ ಬಿ. ಹರ್ಷವರ್ಧನ್ ವಿಶ್ವಾಸ ವ್ಯಕ್ತಪಡಿಸಿದರು.

ಶುಕ್ರವಾರ ನಗರಸಭೆ 20ನೇ ವಾರ್ಡಿನ ಬಿಜೆಪಿ ಅಭ್ಯರ್ಥಿಯಾಗಿ ಉಪ ಚುನಾವಣೆಯಲ್ಲಿ ನಾಮಪತ್ರ ಸಲ್ಲಿಸಿದ ಪಿ. ಮಹೇಶ್ ಅತ್ತಿಖಾನೆ ಅವರೊಡನೆ ಪಟ್ಟಣದ ತಾಲೂಕು ಕಚೇರಿಗೆ ಆಗಮಿಸಿ ಅವರು ಮಾತನಾಡಿದರು.

ಕಳೆದ ಬಾರಿ ಸಹ ವಾರ್ಡಿನ ಮತದಾರರು ಬಿಜೆಪಿಯನ್ನು ಬೆಂಬಲಿಸಿದ್ದರು, ಉಪ ಚುನಾವಣೆಯಲ್ಲಿ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ವಕೀಲ ಮಹೇಶ್ ಅತ್ತಿಖಾನೆ ಶಿಕ್ಷಣ ಕ್ಷೇತ್ರದಲ್ಲಿ ಸುಮಾರು 15 ವರ್ಷಗಳಿಗೂ ಹೆಚ್ಚು ಕಾಲ ಸೇವೆ ಸಲ್ಲಿಸಿದ್ದು, ಅಭ್ಯರ್ಥಿ ಎಂಬ ಹಿರಿಮೆಯನ್ನು ಗಳಿಸಿದ್ದಾರೆ. ಅಭಿವೃದ್ಧಿಯನ್ನೇ ಮಾನದಂಡವಾಗಿಸಿಕೊಂಡು ಮತದಾರರ ಮನವೊಲಿಸಲಾಗುವುದು ಇನ್ನು ಉಪ ಚುನಾವಣೆಯಲ್ಲಿ ಪಕ್ಷದ ಕಾರ್ಯಕರ್ತರೆಲ್ಲರೂ ಒಟ್ಟಾಗಿ ಅಭ್ಯರ್ಥಿ ಪರ ಕೆಲಸ ನಿರ್ವಹಿಸಲಿದ್ದು ಮಹೇಶ್ ಅತ್ತಿಖಾನೆ ನಿಶ್ಚಿತವಾಗಿ ಗೆಲುವು ಸಾಧಿಸಲಿದ್ದಾರೆ ಎಂದರು.

ಪಿ. ಮಹೇಶ್ ಅತ್ತಿಖಾನೆ ಮಾತನಾಡಿ, ಕಳೆದ ಹಲವು ವರ್ಷಗಳಿಂದ ಬಿಜೆಪಿಯಲ್ಲಿ ತಳ ಮಟ್ಟದಲ್ಲಿ ಕೆಲಸ ನಿರ್ವಹಿಸಿದ್ದೇನೆ, ಮತದಾರರ ಸೇವೆ ಮಾಡುವ ಉದ್ದೇಶದೊಂದಿಗೆ ಪಕ್ಷದ ಕಾರ್ಯಕರ್ತರ ಬೆಂಬಲದೊಂದಿಗೆ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದು ಖಂಡಿತಾ ಮತದಾರರು ಬೆಂಬಲಿಸಲಿದ್ದಾರೆ ಎಂದರು.

ಬಿಜೆಪಿ ಜಿಲ್ಲಾಧ್ಯಕ್ಷೆ ಮಂಗಳಾ ಸೋಮಶೇಖರ್, ಜಿಪಂ ಮಾಜಿ ಸದಸ್ಯ ಸಿ. ಚಿಕ್ಕರಂಗನಾಯಕ, ಬಿಜೆಪಿ ಮಂಡಲ ಅಧ್ಯಕ್ಷ ಪಿ. ಮಹೇಶ್, ನಗರಾಧ್ಯಕ್ಷ ಶ್ರೀನಿವಾಸರೆಡ್ಡಿ, ವಿನಯ್ ಕುಮಾರ್, ಕೆ.ಜಿ. ಆನಂದ್, ಪ್ರೇಮಾ ಶಂಭಯ್ಯ, ಬಾಲಚಂದ್ರು, ಸಂಜಯ್ ಶರ್ಮಾ, ರಾಘವೇಂದ್ರ, ಉಮೇಶ್ ಮೋದಿ, ಎನ್.ಸಿ. ಬಸವಣ್ಣ, ಮಹೇಶ್ ಇದ್ದರು.

Follow Us:
Download App:
  • android
  • ios