ಮೈಸೂರು : ವಾರದಲ್ಲಿ ಮಳೆ ಬರುವ ಸಾಧ್ಯತೆ
ಜಿಲ್ಲೆಯಲ್ಲಿ ಏ. 17ರವರೆಗೆ ಮೋಡ ಕವಿದ ವಾತಾವರಣವಿದ್ದು, ಮಳೆ ಬರುವ ಸಂಭವವಿದೆ. ಈ ಅವಧಿಯಲ್ಲಿ ಗರಿಷ್ಟ 36 ರಿಂದ 37.4 ರವರೆಗೆ ಉಷ್ಣಾಂಶ ಇರುತ್ತದೆ. ಈ ಅವಧಿಯಲ್ಲಿ ಮೆಣಸಿನಕಾಯಿಗೆ ಥ್ರಿಪ್ಸ್ ಮತ್ತು ನುಸಿ, ಬೀನ್ಸ್ ಗೆ ಹಳದಿ ನಂಜು ರೋಗ, ಮುಸುಕಿನ ಜೋಳಕ್ಕೆ ಸೈನಿಕ ಹುಳು, ಬಾಳೆಗೆ ಹುಸಿಕಾಂಡ ಕೊರಕ, ಟೊಮ್ಯಾಟೊಗೆ ಕಾಯಿ ಕೊರಕ, ಅಲಸಂದೆ/ ಉದ್ದಿಗೆ ಸಸ್ಯಹೇನು, ಕಲ್ಲಂಗಡಿಗೆ ರಸಹೀರುವ ಕೀಟ ಬಾಧೆ ಉಂಟಾಗಲಿದೆ.
ಮೈಸೂರು : ಜಿಲ್ಲೆಯಲ್ಲಿ ಏ. 17ರವರೆಗೆ ಮೋಡ ಕವಿದ ವಾತಾವರಣವಿದ್ದು, ಮಳೆ ಬರುವ ಸಂಭವವಿದೆ. ಈ ಅವಧಿಯಲ್ಲಿ ಗರಿಷ್ಟ 36 ರಿಂದ 37.4 ರವರೆಗೆ ಉಷ್ಣಾಂಶ ಇರುತ್ತದೆ. ಈ ಅವಧಿಯಲ್ಲಿ ಮೆಣಸಿನಕಾಯಿಗೆ ಥ್ರಿಪ್ಸ್ ಮತ್ತು ನುಸಿ, ಬೀನ್ಸ್ ಗೆ ಹಳದಿ ನಂಜು ರೋಗ, ಮುಸುಕಿನ ಜೋಳಕ್ಕೆ ಸೈನಿಕ ಹುಳು, ಬಾಳೆಗೆ ಹುಸಿಕಾಂಡ ಕೊರಕ, ಟೊಮ್ಯಾಟೊಗೆ ಕಾಯಿ ಕೊರಕ, ಅಲಸಂದೆ/ ಉದ್ದಿಗೆ ಸಸ್ಯಹೇನು, ಕಲ್ಲಂಗಡಿಗೆ ರಸಹೀರುವ ಕೀಟ ಬಾಧೆ ಉಂಟಾಗಲಿದೆ.
ಈ ಅವಧಿಯಲ್ಲಿ ರೈತರು ಕೈಗೊಳ್ಳಬೇಕಾದ ಮುಂಜಾಗ್ರತ ಕ್ರಮ ಕುರಿತು ಸಂಸ್ಥೆಯ ಹಿರಿಯ ಕ್ಷೇತ್ರ ಅಧೀಕ್ಷಕ ಡಾ.ಸಿ. ರಾಮಚಂದ್ರ, ಸಹ ಸಂಶೋಧಕ ಡಾ.ಜಿ. ಸುಮಂತ್ಕುಮಾರ್ ಅವರ ದೂ. 0821- 2591267, ಮೊ. 95353 45814 ಸಂಪರ್ಕಿಸಬಹುದು.
10 ಜಿಲ್ಲೆಗಳಲ್ಲಿ ಸುರಿದ ಮಳೆ
ಬೆಂಗಳೂರು(ಏ.12): ನೆತ್ತಿ ಸುಡುವ ಬಿಸಿಲಿನಲ್ಲೇ ಯುಗಾದಿ ಹಬ್ಬದ ಮೂಲಕ ಹೊಸ ವರ್ಷವನ್ನು ಸ್ವಾಗತಿಸಿದ ಜನತೆಗೆ ಕೊನೆಗೂ ಮಳೆರಾಯ ತಂಪಿನ ಸಿಂಚನ ನೀಡಿದ್ದಾನೆ. ಬುಧವಾರ ರಾತ್ರಿಯಿಂದೀಚೆಗೆ ರಾಜ್ಯದ ಹತ್ತಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಕೆಲಕಾಲ ಭಾರೀ ಗಾಳಿ ಸಹಿತ ಮಳೆ ಸುರಿದಿದ್ದು, ಬಿಸಿಲಿನ ಬೇಗೆಯಿಂದ ತತ್ತರಿಸಿದ್ದ ಜನ ಕೊಂಚ ನಿರಾಳರಾಗಿದ್ದಾರೆ. ಏತನ್ಮಧ್ಯೆ, ಹೊಸ ವರ್ಷದ ಮೊದಲ ಮಳೆಗೆ ವಿಜಯಪುರ ಜಿಲ್ಲೆಯಲ್ಲಿ ಬಾಲಕ ಸೇರಿ ಮೂವರು ಬಲಿಯಾಗಿದ್ದಾರೆ.
ಕಲ್ಯಾಣ ಕರ್ನಾಟಕದ ಬಹುತೇಕ ಕಡೆ ತಾಪಮಾನ 40 ದಾಟಿ ಜನ ಸಂಕಷ್ಟ ಅನುಭವಿಸುತ್ತಿದ್ದ ಹೊತ್ತಿನಲ್ಲೇ ವಿಜಯಪುರ, ಕಲಬುರಗಿ, ಧಾರವಾಡ, ಗದಗ, ಯಾದಗಿರಿ, ಬೀದರ್, ರಾಯಚೂರು, ಮಲೆನಾಡು ಜಿಲ್ಲೆಗಳಾದ ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು ಮತ್ತಿತರ ಕಡೆ ಮಳೆಯ ಸಿಂಚನ ಮಾಡುವ ಮೂಲಕ ವರುಣ ತಂಪಿನ ಅನುಭವ ನೀಡಿದ್ದಾನೆ.
ನಾಳೆಯಿಂದ 5 ದಿನ ಕರ್ನಾಟಕದಲ್ಲಿ ಮಳೆ ಸಾಧ್ಯತೆ
ವಿಜಯಪುರದಲ್ಲಿ ಸಿಡಿಲಬ್ಬರ:
ವಿಜಯಪುರ ಜಿಲ್ಲೆಯಲ್ಲಿ ಸಿಡಿಲಬ್ಬರದೊಂದಿಗೆ ಬುಧವಾರ ರಾತ್ರಿ ಮತ್ತು ಗುರುವಾರ ಸಂಜೆ ಕೆಲಕಾಲ ಸಾಧಾರಣ ಮಳೆಯಾಗಿದ್ದು, ಮೂವರನ್ನು ಬಲಿಪಡೆದಿದೆ. ಇಂಡಿ ತಾಲೂಕಿನಲ್ಲಿ ಗಿಡದ ಕೆಳಗೆ ಆಡು ಕಟ್ಟುತ್ತಿದ್ದ 9ನೇ ತರಗತಿ ವಿದ್ಯಾರ್ಥಿ ಬೀರಪ್ಪ, ಮಸಳಿ ಬಿ.ಕೆ.ಗ್ರಾಮದಲ್ಲಿ ಹೊಲದಲ್ಲಿ ಈರುಳ್ಳಿ ತುಂಬುತ್ತಿದ್ದ ಸೋಮಶೇಖರ ಕಾಶಿನಾಥ ಪಟ್ಟಣಶೆಟ್ಟಿ (45) ಹಾಗೂ ಚಡಚಣ ತಾಲೂಕಿನ ಹಾವಿನಾಳ ಗ್ರಾಮದಲ್ಲಿ ಸುನಂದಾ ಶ್ರೀಮಂತ ಡೊಳ್ಳಿ (50) ಸಿಡಿಲು ಬಡಿದು ಸಾವಿಗೀಡಾಗಿದ್ದಾರೆ. ಇದರ ಜತೆಗೆ ಎಮ್ಮೆ ಸೇರಿ ಕೆಲ ಜಾನುವಾರುಗಳೂ ಸಿಡಿಲಬ್ಬರಕ್ಕೆ ಬಲಿಯಾಗಿವೆ.
ಕಲ್ಯಾಣ ಕರ್ನಾಟಕದ ಕಲಬುರಗಿಯಲ್ಲಿ ಕೆಲಕಾಲ ಬಿರುಗಾಳಿ, ಗುಡುಗು, ಸಿಡಿಲು ಸಹಿತ ಕೆಲಕಾಲ ಮಳೆಯಾಗಿದ್ದು, 44 ಡಿಗ್ರಿ ಉಷ್ಣಾಂಶದಿಂದ ತತ್ತರಿಸಿದ್ದ ಜನ ಕೊಂಚ ನೆಮ್ಮದಿಯ ನಿಟ್ಟುಸಿರು ಬಿಡುವಂತಾಗಿದೆ. ಜಿಲ್ಲೆಯ ಅಫಜಲ್ಪುರ ತಾಲೂಕಿನ ಆನೂರ ಗ್ರಾಮದಲ್ಲೂ ಸಿಡಿಲಬ್ಬರಕ್ಕೆ ಎಮ್ಮೆ ಮೃತಪಟ್ಟಿದ್ದು, ದಣ್ಣೂರ ಗ್ರಾಮದಲ್ಲಿ ಎತ್ತೊಂದು ಬಲಿಯಾಗಿದೆ.
ಮಲೆನಾಡಲ್ಲಿ ಮಳೆ: ಮಲೆನಾಡಲ್ಲಿ ಕೆಲ ದಿನಗಳ ಹಿಂದಷ್ಟೇ ಮಳೆಯಾಗಿ ಆ ನಂತರ ಬಿಸಿಲ ತಾಪ ಮತ್ತಷ್ಟು ಏರಿಕೆಯಾಗಿತ್ತು. ಇದೀಗ ಈ ಭಾಗದಲ್ಲಿ ಮತ್ತೆ ಮಳೆಯಾಗಿದ್ದು, ಕಾಫಿ ಬೆಳೆಗಾರರಲ್ಲಿ ಸಂತಸ ಮನೆಮಾಡಿದೆ. ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ನೆಮ್ಮಾರು, ಕೆರೆಕಟ್ಟೆ ಸುತ್ತಮುತ್ತಲ ಪ್ರದೇಶಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾದರೆ, ಕೊಡಗು ಜಿಲ್ಲೆಯ ವಿರಾಜಪೇಟೆ, ಕರಡ, ಪಾಲಂಗಾಲ ಸೇರಿ ವಿವಿಧೆಡೆ ಉತ್ತಮ ಮಳೆ ಸುರಿದಿದೆ.