Asianet Suvarna News Asianet Suvarna News

ತಂದೆ-ತಾಯಿ ಜೊತೆ ಆಗಮಿಸಿ 2ನೇ ಡೋಸ್ ಲಸಿಕೆ ಪಡೆದ ಡಿಸಿ ರೋಹಿಣಿ

ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಎರಡನೇ ಡೋಸ್ ಕೋವಿಡ್ ಲಸಿಕೆ ಪಡೆದುಕೊಂಡಿದ್ದಾರೆ. ತಂದೆ ತಾಯೊಯೊಂದಿಗೆ ಆಗಮಿಸಿ ವ್ಯಾಕ್ಸಿನ್ ಪಡೆದಿದ್ದಾರೆ. 

Mysore DC Rohini sindhuri Gets 2nd Dose Covid Vaccine snr
Author
Bengaluru, First Published Mar 10, 2021, 11:27 AM IST

ಮೈಸೂರು (ಮಾ.10):  ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ಮಂಗಳವಾರ ಜಿಲ್ಲಾ ಆಸ್ಪತ್ರೆಯಲ್ಲಿ 2ನೇ ಡೋಸ್‌ ಕೋವಿಡ್‌ ಲಸಿಕೆ ಪಡೆದುಕೊಂಡರು. ಫೆ.8 ರಂದು ಮೊದಲ ಡೋಸ್‌ ಲಸಿಕೆ ಪಡೆದು 28 ದಿನಗಳು ಆಗಿರುವ ಹಿನ್ನೆಲೆಯಲ್ಲಿ 2ನೇ ಡೋಸ್‌ ಲಸಿಕೆ ಪಡೆದರು.

ಈ ವೇಳೆ ರೋಹಿಣಿ ಸಿಂಧೂರಿ ಮಾತನಾಡಿ, ಕೊರೋನಾ ಲಸಿಕೆಯನ್ನು ಹೆಚ್ಚಿನ ಸಂಖ್ಯೆಯಲ್ಲಿ ಬಂದು ಪಡೆದುಕೊಳ್ಳಬೇಕು. ಇದರಿಂದ ಯಾವುದೇ ಅಡ್ಡ ಪರಿಣಾಮಗಳು ಇರುವುದಿಲ್ಲ. ಲಸಿಕೆ ತೆಗೆದುಕೊಂಡ ನನಗೆ ಯಾವುದೇ ಅಡ್ಡ ಪರಿಣಾಮಗಳು ಉಂಟಾಗಲಿಲ್ಲ. ಲಸಿಕೆ ಪಡೆದ ಕೆಲವೊಬ್ಬರಿಗೆ ಸಾಮಾನ್ಯವಾಗಿ ಜ್ವರ ಕಾಣಿಸಿಕೊಳ್ಳುತ್ತದೆ. ಇದಕ್ಕಾಗಿ ಲಸಿಕೆ ನೀಡುವವರೆ ಜ್ವರದ ಮಾತ್ರೆಯನ್ನು ಸಹ ಉಚಿತವಾಗಿ ನೀಡುತ್ತಿದ್ದಾರೆ ಎಂದರು.

ಶಿಕ್ಷಕಿಯಾದ ಮೈಸೂರು ಜಿಲ್ಲಾಧಿಕಾರಿ ರೋಹಿಣಿ ...

ಸರ್ಕಾರಿ ಆಸ್ಪತ್ರೆಗಳಲ್ಲಿ ಲಸಿಕೆಯನ್ನು ಉಚಿತವಾಗಿ ನೀಡುತ್ತಿದ್ದಾರೆ. ಇದನ್ನು ಸದುಪಯೋಗ ಪಡಸಿಕೊಳ್ಳುವಂತೆ ಸಾರ್ವಜನಿಕರಿಗೆ ಸಲಹೆ ನೀಡಿದ ಅವರು, ಹೊಸದಾಗಿ ಬಂದಾಗ ಭಯವಾಗುವುದು ಸಾಮಾನ್ಯ. ಪ್ರಧಾನಮಂತ್ರಿಯವರಿಂದ ಹಿಡಿದು ಪೌರಕಾರ್ಮಿಕರವರೆಗೂ ಲಸಿಕೆ ಪಡೆದುಕೊಂಡಿದ್ದಾರೆ. ಲಸಿಕೆ ಪಡೆದು ಅದರ ಉಪಯೋಗ ಪಡೆದುಕೊಳ್ಳಿ ಎಂದು ಹೇಳಿದರು.

ಲಸಿಕೆಯನ್ನು ಪಡೆದುಕೊಳ್ಳುವವರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಲಸಿಕಾ ಕೇಂದ್ರಗಳನ್ನು ಸಹ ಹೆಚ್ಚಾಗಿ ತೆರೆಯಲಾಗುತ್ತಿದ್ದು, ಮುಂದೆ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲೂ ಲಸಿಕೆ ನೀಡಲಾಗುತ್ತದೆ ಎಂದರು.

ಇದೇ ವೇಳೆ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರ ತಾಯಿ ಶ್ರೀಲಕ್ಷ್ಮಿ ರೆಡ್ಡಿ, ತಂದೆ ಜೈಪಾಲ ರೆಡ್ಡಿ ಹಾಗೂ ಮಾವ ನಾರಾಯಣ ರೆಡ್ಡಿ ಅವರು ಮೊದಲನೆ ಡೋಸ್‌ ಲಸಿಕೆ ಪಡೆದುಕೊಂಡರು. 2ನೇ ಡೋಸ್‌ ಲಸಿಕೆ ಪಡೆದ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರಿಗೆ ಪ್ರಮಾಣ ಪತ್ರ ನೀಡಲಾಯಿತು.

ಆರ್‌ಸಿಎಚ್‌ ಅಧಿಕಾರಿ ಡಾ.ಎಲ್‌. ರವಿ, ಜಿಲ್ಲಾ ಸರ್ಜನ್‌ ಡಾ. ರಾಜೇಶ್ವರಿ, ಡಾ. ಮೀನಾ ಮೊದಲಾದವರು ಇದ್ದರು.

Follow Us:
Download App:
  • android
  • ios