ಮೈಸೂರು : ಸಾಕು ಪ್ರಾಣಿಗಳಿಗೆ ಉಚಿತ ರೇಬೀಸ್ ಲಸಿಕಾ ಅಭಿಯಾನ

ಮೈಸೂರು ತಾಲೂಕಿನ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಆಶ್ರಯದಲ್ಲಿ ನಗರದ ಕುಂಬಾರಕೊಪ್ಪಲಿನ ಪಶು ಆಸ್ಪತ್ರೆಯಲ್ಲಿ ಭಾನುವಾರ ಸಾಕುಪ್ರಾಣಿಗಳಿಗೆ ಉಚಿತ ರೇಬೀಸ್ ಲಸಿಕಾ ಅಭಿಯಾನ ಆಯೋಜಿಸಲಾಗಿತ್ತು.

Mysore : Free rabies vaccination campaign for domestic animals snr

ಮೈಸೂರು :  ಮೈಸೂರು ತಾಲೂಕಿನ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಆಶ್ರಯದಲ್ಲಿ ನಗರದ ಕುಂಬಾರಕೊಪ್ಪಲಿನ ಪಶು ಆಸ್ಪತ್ರೆಯಲ್ಲಿ ಭಾನುವಾರ ಸಾಕುಪ್ರಾಣಿಗಳಿಗೆ ಉಚಿತ ರೇಬೀಸ್ ಲಸಿಕಾ ಅಭಿಯಾನ ಆಯೋಜಿಸಲಾಗಿತ್ತು. ನಗರಪಾಲಿಕೆ ಸದಸ್ಯರಾದ ಶ್ರೀನಿವಾಸ, ಉಷಾ ಕುಮಾರ್, ಇಲಾಖೆಯ ಸಹಾಯಕ ನಿರ್ದೇಶಕ ಡಾ.ಮ.ಪು. ಪೂರ್ಣಾನಂದ, ಮುಖ್ಯ ಪಶುವೈದ್ಯಾಧಿಕಾರಿ ಡಾ. ಗೋಪಿನಾಥ, ಜಾನುವಾರು ಅಧಿಕಾರಿ ರಾಮಲಿಂಗಯ್ಯ, ಪಶುವೈದ್ಯಕೀಯ ಪರೀಕ್ಷಕರಾದ ಕೃಷ್ಣಯ್ಯ, ಹರೀಶ್, ಫಿರ್ದೋಸ್ ಇದ್ದರು.

ಬಿಬಿಎಂಪೊ ವ್ಯಾಪ್ತಿಯಲ್ಲಿ ಸಮೀಕ್ಷೆ

ಬೆಂಗಳೂರು (ಜು.10): ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಪಶುಪಾಲನಾ  ಜುಲೈ 11ರಿಂದ  ನಾಯಿಗಳ ಸಮೀಕ್ಷೆಯ ಕಾರ್ಯ ಪ್ರಾರಂಭಿಸಲಾಗುತ್ತಿದೆ. ಪಾಲಿಕೆ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಸಂಖ್ಯೆ ನಿಯಂತ್ರಣ ಹಾಗೂ ಪ್ರಾಣಿಜನ್ಯ ರೋಗವಾದ ರೇಬೀಸ್ ರೋಗವನ್ನು ತಡೆಗಟ್ಟಲು ಬೀದಿ ನಾಯಿಗಳಲ್ಲಿ ಸಂತಾನಹರಣ ಶಸ್ತ್ರ ಚಿಕಿತ್ಸೆ ಮತ್ತು ಆಂಟಿರೇಬೀಸ್ ಲಸಿಕಾ ಕಾರ್ಯಕ್ರಮವನ್ನು ಪಾಲಿಕೆಯ ಪಶುಪಾಲನಾ ವಿಭಾಗದಿಂದ ಕೈಗೊಳ್ಳಲಾಗುತ್ತಿದೆ. ಈ ಪೈಕಿ 2019ನೇ ಸಾಲಿನಲ್ಲಿ ಬೀದಿ ನಾಯಿಗಳ ಸಮೀಕ್ಷೆಯನ್ನು ಮಾಡಿದ್ದು, 3.10 ಲಕ್ಷ ಬೀದಿ ನಾಯಿಗಳು ಇರುವುದಾಗಿ ಅಂದಾಜಿಸಲಾಗಿರುತ್ತದೆ. 

ಮುಂದುವರಿದು, ಪಾಲಿಕೆಯ 08 ವಲಯಗಳಲ್ಲಿ ಸಂತಾನಹರಣ ಶಸ್ತ್ರ ಚಿಕಿತ್ಸೆ ಮತ್ತು ಆಂಟಿರೇಬೀಸ್ ಲಸಿಕಾ ಕಾರ್ಯಕ್ರಮವನ್ನು 2019ನೇ ಸಾಲಿನಿಂದ ಇಲ್ಲಿಯವರೆಗೆ ನಿರಂತರವಾಗಿ ನಡೆಯುತ್ತಿದ್ದು, ಕಾರ್ಯಕ್ರಮದ ಯಶಸ್ವಿ ಅನುಷ್ಟಾನದ ಬಗ್ಗೆ ತಿಳಿಯುವ ಸಲುವಾಗಿ ಬೀದಿನಾಯಿಗಳ ಸಮೀಕ್ಷೆಯ ಕಾರ್ಯ ಪ್ರಾರಂಭಿಸಲಾಗುತ್ತಿದೆ.

Udupi: 11ನೇ ಫ್ಲೋರ್ ಮನೆಯ ಬಾಲ್ಕನಿಯಿಂದ ಜಾರಿದ ಮಗು, ಅಗ್ನಿಶಾಮಕ ದಳದ ರೋಚಕ

ಬೀದಿನಾಯಿಗಳ ಸಮೀಕ್ಷೆಯು ಡಾ.ಕೆ.ಪಿ.ಸುರೇಶ್, ಪ್ರಧಾನ ವಿಜ್ಞಾನಿಗಳು(Biostatistics), ICAR-NIVEDI, ಡಾ.ಹೇಮಾದ್ರಿ ದಿವಾಕರ್, ಪ್ರಧಾನ ವಿಜ್ಞಾನಿಗಳು(Virology),ICAR-NIVEDI, ಡಾ.ಶ್ರೀಕೃಷ್ಣ ಇಸ್ಲೂರು, ಪ್ರಾಧ್ಯಾಪಕರು, ಸೂಕ್ಷ್ಮಾಣುಜೀವಿ ಶಾಸ್ತ್ರ ವಿಭಾಗ, ವೆಟರಿನರಿ ಕಾಲೇಜು, ಬೆಂಗಳೂರು, ಡಾ.ಬಾಲಾಜಿ ಚಂದ್ರಶೇಖರ್, ಮ್ಯಾನೇಜರ್ ಆಪರೇಷನ್, WVS ಸಂಸ್ಥೆ ಮತ್ತು ಪಶುಪಾಲನಾ ಹಾಗೂ ಪಶುವೈದ್ಯ ಸೇವಾ ಇಲಾಖೆ, ಬೆಂಗಳೂರು ನಗರ ಜಿಲ್ಲೆಯ ಅರೆತಾಂತ್ರಿಕ ಸಿಬ್ಬಂದಿಯ ಸಹಯೋಗದೊಂದಿಗೆ ನಡೆಯಲಿದೆ.
 
840 ಚ.ಕಿ.ಮೀ ವ್ಯಾಪ್ತಿಯುಳ್ಳ ಬಿಬಿಎಂಪಿಯನ್ನು(ವಸತಿ ಪ್ರದೇಶ, ಕೊಳಚೆ ಪ್ರದೇಶ, ವಾಣಿಜ್ಯ ಪ್ರದೇಶ ಹಾಗೂ ಕೆರೆಗಳು) 0.5 ಚ.ಕಿ.ಮೀ ವ್ಯಾಪ್ತಿಯ 6,850 ಮೈಕ್ರೋ ಜೋನ್ ಗಳನ್ನಾಗಿ ವಿಂಗಡಿಸಲಾಗಿದ್ದು, ಅದರಲ್ಲಿ ಶೇ. 20ರಷ್ಟು ರ‍್ಯಾಂಡಂ ಸ್ಯಾಂಪಲ್‌ಗಳನ್ನು ಅಂದರೆ 1,360 ಮೈಕ್ರೋ ಜೋನ್ ಗಳಲ್ಲಿ ಸಮೀಕ್ಷೆ ಮಾಡಲು ಆಯ್ಕೆ ಮಾಡಲಾಗಿರುತ್ತದೆ. ಅದರಂತೆ, ಬೆಂಗಳೂರು ನಗರ ಜಿಲ್ಲೆಯ ಪಶುಪಾಲನಾ ಹಾಗೂ ಪಶುವೈದ್ಯ ಸೇವಾ ಇಲಾಖೆಯ 70 ಅರೆತಾಂತ್ರಿಕ ಸಿಬ್ಬಂದಿ ಹಾಗೂ ಪಾಲಿಕೆಯ ಪಶುಪಾಲನಾ ವಿಭಾಗದ 30 ಸಿಬ್ಬಂದಿ ಸೇರಿದಂತೆ 100 ಮಂದಿಯ ಮೂಲಕ ಈ ಸಮೀಕ್ಷೆಯನ್ನು ಮಾಡಲಾಗುತ್ತಿದೆ. ಬೀದಿ ನಾಯಿ ಸಮೀಕ್ಷೆಯನ್ನು ಕ್ರಮಬದ್ಧವಾಗಿ ವ್ಯವಸ್ಥಿತವಾಗಿ ವಾರ್ಡ್ವಾರು ನಿರ್ವಹಿಸಲು 1 ತಂಡದಲ್ಲಿ ಇಬ್ಬರು ಸಮೀಕ್ಷಾದಾರರಂತೆ ಒಟ್ಟು 50 ತಂಡಗಳನ್ನು ರಚಿಸಲಾಗಿದ್ದು, ಇದರ ಮೇಲ್ವಿಚಾರಣೆಗಾಗಿ 15 ಮೇಲ್ವಿಚಾರಕರನ್ನು ನಿಯೋಜಿಸಲಾಗಿದೆ.

Latest Videos
Follow Us:
Download App:
  • android
  • ios