ಮೈಸೂರು : ಎಲ್ಲಾ ಅಂಗಡಿಗಳಲ್ಲಿ ಕನ್ನಡ ನಾಮಫಲಕ ಅಳವಡಿಸಿ : ಕರವೇ

ಮೈಸೂರಿನ ಎಲ್ಲಾ ಅಂಗಡಿ ಮಾಲೀಕರು ಹಾಗೂ ವರ್ತಕರು ಕನ್ನಡ ನಾಮಫಲಕವನ್ನು ತಮ್ಮ ಅಂಗಡಿಗಳ ಮುಂಭಾಗ ಹಾಕಬೇಕು ಎಂದು ಕರುನಾಡ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ಬಸವರಾಜು ತಿಳಿಸಿದರು.

Mysore : Install Kannada nameplate in all shops : Karave snr

  ಮೈಸೂರು : ಮೈಸೂರಿನ ಎಲ್ಲಾ ಅಂಗಡಿ ಮಾಲೀಕರು ಹಾಗೂ ವರ್ತಕರು ಕನ್ನಡ ನಾಮಫಲಕವನ್ನು ತಮ್ಮ ಅಂಗಡಿಗಳ ಮುಂಭಾಗ ಹಾಕಬೇಕು ಎಂದು ಕರುನಾಡ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ಬಸವರಾಜು ತಿಳಿಸಿದರು.

ನಗರದ ಬಂಡಿಪಾಳ್ಯದ ಎಪಿಎಂಸಿ ಮಾರುಕಟ್ಟೆ ಆವರಣದಲ್ಲಿ ಸೋಮವಾರ ನಡೆದ ಜಾಗೃತಿ ಜಾಥಾ ಕಾರ್ಯಕ್ರಮದಲ್ಲಿ ಪೌರ ಕಾರ್ಮಿಕರಿಗೆ ಉಡುಗೊರೆ ನೀಡಿ, ಪ್ಲಾಸ್ಟಿಕ್ ಬಳಕೆ ತಡೆಯುವಂತೆ ಜಾಗೃತಿ ಮೂಡಿಸುವ ಸ್ತಬ್ಧಚಿತ್ರ ಮೆರವಣಿಗೆಗೆ ಚಾಲನೆ ನೀಡಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ, ಕನ್ನಡಕ್ಕೆ ಮೊದಲ ಪ್ರಾಶಸ್ತ್ಯ ಎಂದು ಹೇಳಿದರು.

ಭುವನ್ ರಾಜ್ ಫೌಂಡೇಶನ್ ಮುಖ್ಯಸ್ಥ ಚೇತನ್ ರಾಜ್ ಮಾತನಾಡಿ, 10 ದಿನಗಳ ಒಳಗೆ ಈಗಿರುವ ಆಂಗ್ಲ ಭಾಷೆಯ ನಾಮಫಲಕಗಳನ್ನು ತೆರವುಗೊಳಿಸಿ ಅಲ್ಲಿ ಕನ್ನಡದ ನಾಮಫಲಕಗಳನ್ನು ಹಾಕಬೇಕು. ಮಾಲೀಕರು ನಮ್ಮ ಮನವಿಗೆ ಸ್ಪಂದಿಸದಿದ್ದರೆ ಕಾನೂನಾತ್ಮಕ ಹೋರಾಟ ನಡೆಸುವುದಾಗಿ ಎಚ್ಚರಿಸಿದರು.

ಎಪಿಎಂಸಿ ಆವರಣದಲ್ಲಿ ಸಂಚರಿಸಿದ ಸ್ತಬ್ಧಚಿತ್ರವೂ ಪರಿಸರ ಉಳಿಸುವುದು ನಮೆಲ್ಲರ ಹೊಣೆ ಹಾಗೂ ಸಂಚಾರಿ ನಿಯಮಗಳ ಪಾಲನೆ ಮತ್ತು ಸೈಬರ್ ಕ್ರೈಂ ಬಗ್ಗೆ ಮುನ್ನೆಚ್ಚರಿಕೆ ವಹಿಸುವಂತೆ ನಾಗರಿಕರಿಗೆ ಅರಿವು ಮೂಡಿಸಿದರು.

ಸಂಘಟನೆಯ ಜಿಲ್ಲಾಧ್ಯಕ್ಷ ವೇಣುಗೋಪಾಲ್, ನಗರಾಧ್ಯಕ್ಷ ಹರ್ಷಿತ್ ಗೌಡ, ಪದಾಧಿಕಾರಿಗಳಾದ ಎನ್. ಮಹೇಶ್, ಸಂಜಯ್, ಯೋಗೇಶ್, ಸತೀಶ್ ಮೊದಲಾದವರು ಇದ್ದರು.

ಸಿಎಂ ಖಡಕ್ ಸೂಚನೆ

ಬೆಂಗಳೂರು (ಡಿ.25): ಬೆಂಗಳೂರಿನ ವಾಣಿಜ್ಯ ಮಳಿಗೆಗಳ ನಾಮಫಲಕದಲ್ಲಿ ಶೇ 60 ಕನ್ನಡ ಅಕ್ಷರಗಳ ಬಳಕೆ ಕಡ್ಡಾಯಗೊಳಿಸಲಾಗಿದೆ. ಇದಕ್ಕೆ ಫೆಬ್ರುವರಿ 28 ಕಡೆಯ ದಿನವಾಗಿದ್ದು, ಕನ್ನಡವನ್ನು ಉಳಿಸಿ, ಕನ್ನಡತನವನ್ನು ಬೆಳೆಸುವ ಸಲುವಾಗಿ ಈ ನಿಯಮ ತರಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಈ ಬಗ್ಗೆ ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿ ಮನವಿ ಮಾಡಿಕೊಂಡಿರುವ ಅವರು, ಕರ್ನಾಟಕದಲ್ಲಿ ಹುಟ್ಟಿ ಬೆಳೆದವರು, ಹೊರರಾಜ್ಯದಿಂದ ಇಲ್ಲಿಗೆ ಬಂದು ಬದುಕು ಕಟ್ಟಿಕೊಂಡವರನ್ನು ನಾವು "ಕನ್ನಡಿಗ"ರೇ ಎಂದು ಭಾವಿಸಿದ್ದೇವೆ. ಕನ್ನಡ ನೆಲದಲ್ಲಿ ಕನ್ನಡಕ್ಕೇ ಮೊದಲ ಪ್ರಾಶಸ್ತ್ಯ, ಅನ್ನ ಕೊಡುವ ಈ ನೆಲದ ನಿಯಮ ಪಾಲನೆ ಮಾಡಬೇಕಿರುವುದು ಪ್ರತಿಯೊಬ್ಬರ ಕರ್ತವ್ಯ ಕೂಡ. ಕನ್ನಡವನ್ನು ಉಳಿಸಿ, ಕನ್ನಡತನವನ್ನು ಬೆಳೆಸುವ ಸಲುವಾಗಿ ಬೆಂಗಳೂರಿನ ವಾಣಿಜ್ಯ ಮಳಿಗೆಗಳ ನಾಮಫಲಕದಲ್ಲಿ ಶೇ.60 ಕನ್ನಡ ಅಕ್ಷರಗಳ ಬಳಕೆ ಕಡ್ಡಾಯಗೊಳಿಸಲಾಗಿದೆ. ಇದಕ್ಕೆ ಫೆಬ್ರವರಿ 28 ಕಡೆಯ ದಿನವಾಗಿದ್ದು, ನಿಯಮ ಪಾಲನೆ ಮಾಡಿ "ಹೆಮ್ಮೆಯ ಕನ್ನಡಿಗ"ರಾಗಿ ಎಂದು ಸಂದೇಶ ರವಾನಿಸಿದ್ದಾರೆ.

ಕನ್ನಡ ನಾಮಫಲಕ ಕಡ್ಡಾಯ ಅಳವಡಿಸಬೇಕು; ಅಂಗಡಿ ಮುಂಗಟ್ಟು ಶಾಪಿಂಗ್ ಮಾಲ್‌ಗಳಿಗೆ ಖಡಕ್ ಎಚ್ಚರಿಕೆ ನೀಡಿದ ಬಿಬಿಎಂಪಿ ಆಯುಕ್ತ! 

ವಾಣಿಜ್ಯ ಮಳಿಗೆಗಳ ನಾಮಫಲಕಗಳಲ್ಲಿ ಕಡ್ಡಾಯವಾಗಿ ಕನ್ನಡ ಬಳಸುವಂತೆ ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ಸದಸ್ಯರು ಈ ಹಿಂದೆ ಮನವಿ ಮಾಡಿದ್ದರು. ಅಲ್ಲದೇ ಕೊಟ್ಟಿರುವ ಡೆಡ್‌ಲೈನ್‌ ಒಳಗೆ ಕನ್ನಡ ನಾಮಫಲಕ ಅಳವಡಿಸಿಕೊಳ್ಳುವಂತೆ, ಒಂದು ವೇಳೆ ಕನ್ನಡ ನಾಮಫಲಕ ಅಳವಡಿಸದೇ ಅಸಡ್ಡೆ ತೋರಿದರೆ ಅಂತಹ ವ್ಯಾಪಾರ ಪರವಾನಗಿ ರದ್ದುಪಡಿಸುವುದಾಗಿ ಬಿಬಿಎಂಪಿ ಆಯುಕ್ತರು ಸಹ ಈಗಾಗಲೇ ಎಚ್ಚರಿಕೆ ನೀಡಿದ್ದಾರೆ. 

ದಲಿತ ನಾಯಕರ ಜೊತೆ ಸತೀಶ್ ಜಾರಕಿಹೊಳಿ ದೆಹಲಿಗೆ ದೌಡು; ಕನಕಪುರ ಬಂಡೆಗೆ ಲಗಾಮು ಹಾಕ್ತಾರಾ ಸಾಹುಕಾರ? 

Latest Videos
Follow Us:
Download App:
  • android
  • ios