Asianet Suvarna News Asianet Suvarna News

ಮೈಸೂರು : ತೆಂಗು ಮತ್ತು ಅಡಿಕೆ ಬೆಳೆಗಳಲ್ಲಿ ಅಧಿಕ ಲಾಭ ಕುರಿತ ತರಬೇತಿ

ನಾಗನಹಳ್ಳಿಯ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಸೂಕ್ಷ್ಮ ನೀರಾವರಿ ಕಾರ್ಯಕ್ರಮ- ಕೇಂದ್ರ ಪುರಸ್ಕೃತ ಪ್ರಧಾನಮಂತ್ರಿ ಕೃಷಿ ಸಿಂಚಾಯ ಯೋಜನೆಯಡಿ ತೆಂಗು ಮತ್ತು ಅಡಿಕೆ ಬೆಳೆಗಳಲ್ಲಿ ತಳಿ ಆಯ್ಕೆ, ಆಧುನಿಕ ಕೃಷಿ ಪದ್ಧತಿಗಳು, ಸೂಕ್ಷ್ಮನೀರಾವರಿ ಮತ್ತು ರಸಾವರಿ ತಾಂತ್ರಿಕತೆಗಳ ಅಳವಡಿಕೆ ಮೂಲಕ ಅಧಿಕ ಲಾಭ ಕುರಿತ ಮೂರು ದಿನಗಳ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

Mysore : Training on High Profitability in Coconut and Nut Crops snr
Author
First Published Feb 13, 2024, 8:41 AM IST

 ಮೈಸೂರು : ನಾಗನಹಳ್ಳಿಯ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಸೂಕ್ಷ್ಮ ನೀರಾವರಿ ಕಾರ್ಯಕ್ರಮ- ಕೇಂದ್ರ ಪುರಸ್ಕೃತ ಪ್ರಧಾನಮಂತ್ರಿ ಕೃಷಿ ಸಿಂಚಾಯ ಯೋಜನೆಯಡಿ ತೆಂಗು ಮತ್ತು ಅಡಿಕೆ ಬೆಳೆಗಳಲ್ಲಿ ತಳಿ ಆಯ್ಕೆ, ಆಧುನಿಕ ಕೃಷಿ ಪದ್ಧತಿಗಳು, ಸೂಕ್ಷ್ಮನೀರಾವರಿ ಮತ್ತು ರಸಾವರಿ ತಾಂತ್ರಿಕತೆಗಳ ಅಳವಡಿಕೆ ಮೂಲಕ ಅಧಿಕ ಲಾಭ ಕುರಿತ ಮೂರು ದಿನಗಳ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಈ ಕಾರ್ಯಕ್ರಮ ಉದ್ಘಾಟಿಸಿದ ಕೇಂದ್ರದ ಉಪ ಕೃಷಿ ನಿರ್ದೇಶಕ ಡಾ.ಬಿ.ಎನ್. ಧನಂಜಯ ಮಾತನಾಡಿ, ಫಲವತ್ತಾದ ಮಣ್ಣು ಮತ್ತು ನೀರನ್ನು ನಮ್ಮ ಮುಂದಿನ ಪೀಳಿಗೆಗೆ ಬಿಟ್ಟು ಹೋಗುವುದು ನಮ್ಮೆಲ್ಲರ ಆಧ್ಯ ಕರ್ತವ್ಯವಾಗಿದೆ. ವಾಡಿಕೆಗಿಂತ ಕಡಿಮೆ ಮಳೆ ಬಿದ್ದರೂ ಮಳೆ ನೀರಿನ ಸದ್ಬಳಕೆಯನ್ನು ಹನಿ/ ತುಂತುರು ನೀರಾವರಿ ಮುಖಾಂತರ ಮಾಡಬಹುದಾಗಿದೆ. ಹೀಗಾಗಿ, ನೀರಿನ ಮಿತ ಬಳಕೆ, ನೀರಿನ ಸದ್ಬಳಕೆ ಮಾಡುವಂತೆ ರೈತರಿಗೆ ಸಲಹೆ ನೀಡಿದರು.

ಜೈನ್ ಇರಿಗೇಷನ್ ಸಿಸ್ಟಮ್ತಾಂತ್ರಿಕ ಸಲಹೆಗಾರ ನಿರಂಜನ್ ಮಾತನಾಡಿ, ತೆಂಗು, ಅಡಿಕೆ ಮತ್ತು ಇತರೆ ತೋಟಗಾರಿಕೆ ಬೆಳೆಗಳಲ್ಲಿ ಹನಿ ನೀರಾವರಿ ಪದ್ಧತಿ ಅಳವಡಿಕೆ, ನಿರ್ವಹಣೆ, ಹನಿ ನೀರಾವರಿ ಹಾಗೂ ರಸಾವರಿ ಪದ್ಧತಿಗಳ ಅಳವಡಿಕೆ ಬಗ್ಗೆ ತಿಳಿಸಿಕೊಟ್ಟರು.

ತೋಟಗಾರಿಕಾ ಇಲಾಖೆಯಿಂದ ದೊರೆಯುವ ಸೌಲಭ್ಯಗಳ ಕುರಿತು ತೋಟಗಾರಿಕಾ ಅಧಿಕಾರಿ ಶ್ರುತಿ ಉಪನ್ಯಾಸ ನೀಡಿದರು. ತರಬೇತಿಯಲ್ಲಿ ಜಿಲ್ಲೆಯ ವಿವಿಧ ಗ್ರಾಮಗಳಿಂದ 30 ಜನ ರೈತರು ಭಾಗವಹಿಸಿದ್ದರು.

ಕೇಂದ್ರದ ಬಿ.ಎಸ್. ಮಮತಾ, ವಜ್ರೇಶ್ವರಿ ಎಸ್. ಕುಲಕರ್ಣಿ ಇದ್ದರು. ಕೃಷಿ ಅಧಿಕಾರಿ ಜಿ.ಕೆ. ಶಿಲ್ಪಾ ನಿರೂಪಿಸಿದರು.

ಸಾಲ ಮನ್ನಾಕ್ಕೆ ರೈತರ ಬೇಡಿಕೆ

ಬೆಂಗಳೂರು (ಫೆ.12): ‘ರಾಜ್ಯದ ರೈತರ ಸಂಪೂರ್ಣ ಸಾಲ ಮನ್ನಾ ಮಾಡಬೇಕು. ಕಡಿಮೆ ಬಡ್ಡಿ ದರದಲ್ಲಿ ಹೆಚ್ಚಿನ ಸಾಲ ಒದಗಿಸಬೇಕು. ರೈತ ಯುವಕರನ್ನು ವಿವಾಹವಾಗುವ ಹೆಣ್ಣುಮಕ್ಕಳಿಗೆ 5 ಲಕ್ಷ ರು. ಪ್ರೋತ್ಸಾಹಧನ ನೀಡುವುದು ಸೇರಿದಂತೆ ಕೃಷಿ ಕ್ಷೇತ್ರದಲ್ಲಿ ಕರ್ನಾಟಕ ಇಡೀ ದೇಶಕ್ಕೆ ಮಾದರಿಯಾಗುಂತಹ ಕಾರ್ಯಕ್ರಮಗಳನ್ನು ಈ ಬಾರಿಯ ಬಜೆಟ್‌ನಲ್ಲಿ ಘೋಷಿಸಬೇಕು ಎಂದು ವಿವಿಧ ರೈತ ಸಂಘಟನೆಗಳ ಪ್ರತಿನಿಧಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದರು. ಬಜೆಟ್‌ ಸಿದ್ದತೆ ಪೂರ್ವಭಾವಿಯಾಗಿ ವಿಧಾನಸೌಧದಲ್ಲಿ ರೈತ ಸಂಘಟನೆಗಳ ಮುಖಂಡರ ಜೊತೆ ನಡೆಸಿದ ಸಭೆಯಲ್ಲಿ ಬಿಜೆಪಿ ಸರ್ಕಾರ ತಂದಿರುವ ಭೂ ಸುಧಾರಣಾ ತಿದ್ದುಪಡಿ ಕಾಯ್ದೆಯನ್ನು ವಾಪಸ್‌ ಪಡೆಯಬೇಕು.

ಹೊಸ ವಿದ್ಯುತ್‌ ಸಂಪರ್ಕ ಪಡೆಯುವ ರೈತರ ಪಂಪ್‌ಸೆಟ್‌ಗಳಿಗೆ ತಗಲುವ ಎಲ್ಲ ವೆಚ್ಚವನ್ನು ಸರ್ಕಾರವೇ ಬರಿಸಬೇಕು ಎಂದು ಆಗ್ರಹಿಸಿದರು. ರಾಜ್ಯದ ಎಲ್ಲ ಕೆರೆಗಳ ಅಭಿವೃದ್ಧಿ, ಒತ್ತುವರಿ ತೆರವಿಗೆ ಕ್ರಮ ವಹಿಸಬೇಕು. ಮಂಡ್ಯ ಸಕ್ಕರೆ ಕಾರ್ಖಾನೆಯನ್ನು ಸರ್ಕಾರವೇ ನಡೆಸಬೇಕು. ಸಣ್ಣ ನೀರಾವರಿ ಯೋಜನೆಗಳಿಗೆ ಬಜೆಟ್‌ನಲ್ಲಿ ಒತ್ತು ನೀಡಬೇಕು. ಬಿಜೆಪಿ ಸರ್ಕಾರ ತಂದಿರುವ ರೈತ ವಿರೋಧಿ ಭೂ ಸುಧಾರಣಾ ತಿದ್ದುಪಡಿ ಕಾಯ್ದೆಯನ್ನು ವಾಪಸ್‌ ಪಡೆಯಬೇಕು. ಹೊಸದಾಗಿ ವಿದ್ಯುತ್‌ ಸಂಪರ್ಕ ಪಡೆಯುವ ಎಲ್ಲ ರೈತರ ಪಂಪ್‌ಸೆಟ್‌ಗಳಿಗೆ ತಗಲುವ ವೆಚ್ಚವನ್ನು ಸರ್ಕಾರವೇ ಭರಿಸಬೇಕು. ರೈತರಿಗೂ 10 ಎಚ್‌ಪಿ ಪಂಪ್‌ಸೆಟ್‌ ವರೆಗೆ ಉಚಿತ ವಿದ್ಯುತ್‌ ನೀಡಬೇಕು ಒತ್ತಾಯಿಸಿದರು.

ಉಡುಪಿಗೆ ಸರ್ಕಾರಿ ಮೆಡಿಕಲ್‌ ಕಾಲೇಜು ಬೇಡಿಕೆ: ಮಾಹಿತಿ ಇಲ್ಲ ಎಂದ ಸಚಿವ ಗುಂಡೂರಾವ್‌

ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ರೈತ ಮುಖಂಡ ಬಡಗಲಪುರ ನಾಗೇಂದ್ರ, ಕೃಷಿ ಕ್ಷೇತ್ರ ಇಂದು ದಿಕ್ಕು ತಪ್ಪಿದೆ. ವ್ಯವಸಾಯವನ್ನು ಉಳಿಸಲು ಬಜೆಟ್‌ನಲ್ಲಿ ಹೆಚ್ಚಿನ ಒತ್ತು ಕೊಡಬೇಕು. ರೈತರ ಪರ ಬಜೆಟ್ ನೀಡಬೇಕು. ಬರಕ್ಕೆ ಶಾಶ್ವತವಾಗಿ ಪರಿಹಾರ ಸಿಗಬೇಕಾದರೆ ಸಣ್ಣ ನೀರಾವರಿಗೆ ಒತ್ತು ಕೊಡಬೇಕು. ಇದಕ್ಕಾಗಿ 10 ವರ್ಷದ ಕಾರ್ಯಯೋಜನೆಯನ್ನು ಘೋಷಿಸಬೇಕು ಎಂದು ಮನವಿ ಮಾಡಿದ್ದೇವೆ ಎಂದರು.

ರೈತರನ್ನು ಮದುವೆಯಾಗುವ ಹೆಣ್ಣುಮಕ್ಕಳಿಗೆ ಪ್ರೋತ್ಸಾಹಧನಕ್ಕೆ ಬೇಡಿಕೆ: ಕೃಷಿ ಅವಲಂಬಿಸಿರುವ ಯುವಕರಿಗೆ ಹೆಣ್ಣು ಸಿಗುತ್ತಿಲ್ಲ.ಹೀಗಾಗಿ ರೈತ ಯುವಕರನ್ನು ಮದುವೆ ಆಗುವ ಹೆಣ್ಣು ಮಕ್ಕಳಿಗೆ ಐದು ಲಕ್ಷ ರು. ಪ್ರೋತ್ಸಾಹ ಧನ ನೀಡಬೇಕು ಎಂದು ಮನವಿ ಮಾಡಿದ್ದೇವೆ ಎಂದು ತಿಳಿಸಿದರು. ಸಭೆಯಲ್ಲಿ ಪಶುಸಂಗೋಪನೆ ಸಚಿವ ವೆಂಕಟೇಶ್, ಮುಖ್ಯಮಂತ್ರಿಗಳ ಸಲಹೆಗಾರ ಬಿ. ಆರ್ ಪಾಟೀಲ್, ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಅಭಿವೃದ್ಧಿ ಆಯುಕ್ತೆ ಡಾ. ಶಾಲಿನಿ ರಜನೀಶ್, ರೈತ ಮುಖಂಡರಾದ ಎಚ್.ಆರ್ ಬಸವರಾಜಪ್ಪ, ವೀರಸಂಗಯ್ಯ, ಚುಕ್ಕಿ ನಂಜುಂಡಸ್ವಾಮಿ, ಮಂಡ್ಯ ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ಮುಖಂಡರಾದ ಸುನಂದಾ ಜಯರಾಂ ಸೇರಿ ವಿವಿಧ ರೈತ ಸಂಘಟನೆಗಳ 218 ಮಂದಿ ಮುಖಂಡರು ಇದ್ದರು.

Follow Us:
Download App:
  • android
  • ios