ಮೈಸೂರು(ಜು.17) : ಮೈಸೂರು ವಿಶ್ವವಿದ್ಯಾನಿಲಯ 2020ರಲ್ಲಿ ವಿವಿಯ ಶತಮಾನೋತ್ಸವ ಘಟಿಕೋತ್ಸವ ಆಚರಿಸಲಿದ್ದು, ಈ ಸಮಾರಂಭದಲ್ಲಿ ಭಾಗವಹಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಆಹ್ವಾನಿಸಲಾಗಿದೆ.

ಕುಲಪತಿ ಪೊ›. ಜಿ. ಹೇಮಂತಕುಮಾರ್‌ ಅವರು ಸೋಮವಾರ ನವದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಈ ಸಂಬಂಧ ಅಧಿಕೃತವಾಗಿ ಆಹ್ವಾನಿಸಿದ್ದಾರೆ. ಈಗಾಗಲೇ ಶತಮಾನೋತ್ಸವ ಆಚರಿಸಿಕೊಂಡಿರುವ ಮೈಸೂರು ವಿವಿ 2020ಕ್ಕೆ ಶತಮಾನೋತ್ಸವ ಘಟಿಕೋತ್ಸವಕ್ಕೆ ಸಾಕ್ಷಿಯಾಗಲಿದೆ. ಆದ್ದರಿಂದ ಈ ಐತಿಹಾಸಿಕ ಸಮಾರಂಭದಲ್ಲಿ ಉಪಸ್ಥಿತರಿರುವಂತೆ ಪ್ರಧಾನಿ ಮೋದಿ ಅವರನ್ನು ಆಹ್ವಾನಿಸಲಾಯಿತು.

ಈ ಆಹ್ವಾನವನ್ನು ಸಂತಸದಿಂದಲೇ ಸ್ವೀಕರಿಸಿದ ಪ್ರಧಾನಿ ಮೋದಿ, ಕಾರ್ಯದೊತ್ತಡ ಪರಿಶೀಲಿಸಿ ಆಗಮಿಸುವ ಸಾಧ್ಯಾಸಾಧ್ಯತೆ ಬಗ್ಗೆ ಸದ್ಯದಲ್ಲೇ ಸ್ಪಷ್ಟಪಡಿಸುವ ಆಶ್ವಾಸನೆ ನೀಡಿದರು. ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮೈಸೂರು ವಿಶ್ವವಿದ್ಯಾನಿಲಯ ನಡೆದು ಬಂದ ದಾರಿ, ಅಭಿವೃದ್ಧಿ ಹಾಗೂ ಕಾರ್ಯ ಚಟುವಟಿಕೆಗಳ ಬಗೆಗಿನ ಮಾಹಿತಿಯನ್ನು ಕುಲಪತಿ ನೀಡಿದರು. ಇದೇ ವೇಳೆ ಇನ್‌ಸ್ಟಿಟ್ಯೂಟ್‌ ಆಫ್‌ ಎಮಿನೆನ್ಸ್‌ ಪ್ರಾಜೆಕ್ಟ್‌ಗೆ ಅನುದಾನ ನೀಡುವಂತೆಯೂ ಕೋರಿದರು. ಮೈಸೂರು- ಕೊಡಗು ಸಂಸದ ಪ್ರತಾಪ್‌ ಸಿಂಹ, ಬೆಂಗಳೂರು ದಕ್ಷಿಣ ಲೋಕಸಭಾ ಸಂಸದ ತೇಜಸ್ವಿ ಸೂರ್ಯ ಹಾಜರಿದ್ದರು.

ಪ್ರಧಾನಿ ಮೋದಿಗೆ ಆಹ್ವಾನಿಸುವಂತೆ ನೂತನ ಅಧ್ಯಕ್ಷ ಟ್ರಂಪ್'ಗೆ ಸಲಹೆ