300 ಕಾರ್ಯಕರ್ತರೊಂದಿಗೆ ಬಿಜೆಪಿ ತೊರೆದು ಕಾಂಗ್ರೆಸ್ ಸೇರುತ್ತಿರುವ ಮುಖಂಡ
- ಬಿಜೆಪಿ ಆಡಳಿತದಿಂದ ಬೇಸತ್ತು ಆ.19ರಂದು ಕಾಂಗ್ರೆಸ್ ಸೇರುತ್ತಿದ್ದೇನೆ
- 300 ಬೆಂಗಲಿಗರು ಕಾರ್ಯಕರ್ತರೊಂದಿಗೆ ಕಾಂಗ್ರೆಸ್ ಸೇರುತ್ತಿರುವ ಮುಖಂಡ
ಮೈಸೂರು (ಆ.18): ಬಿಜೆಪಿ ಆಡಳಿತದಿಂದ ಬೇಸತ್ತು ಆ.19ರಂದು ಮೈಸೂರು ಕಾಂಗ್ರೆಸ್ ಭವನದಲ್ಲಿ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗುತ್ತಿರುವುದಾಗಿ ತಾಪಂ ಮಾಜಿ ಉಪಾಧ್ಯಕ್ಷ ಮಲ್ಲೇಶ್ ತಿಳಿಸಿದರು.
ಬಿಜೆಪಿ ಆಡಳಿತದ ವೇಳೆ ಅಗತ್ಯ ವಸ್ತುಗಳ ಬೆಲೆ ಏರಿದೆ. ಇದರಿಂದ ಸಾಮಾನ್ಯ ಜನರು ಜೀವನ ನಡೆಸುವುದು ಕಷ್ಟಕರವಾಗಿದೆ. ನಿರುದ್ಯೋಗ ಪರಿಸ್ಥಿತಿ ಉಲ್ಬಣಿಸಿದೆ.
'ಬಿಜೆಪಿ ಕಲ್ಯಾಣ ಕರ್ನಾಟಕದ ವಿರೋಧಿ, 371 ಅಡಿಯಲ್ಲಿ ನೇಮಕಾತಿಯೂ ಸಹ ಮಾಡ್ತಿಲ್ಲ'
ಹೀಗಾಗಿ ಸಣ್ಣಪುಟ್ಟ ಚುನಾವಣೆಗಳಿಗೂ ತಾವು ಮತ ಕೇಳಲು ಹೋದಲ್ಲಿ ಜನರು ಛೀಮಾರಿ ಹಾಕುತ್ತಿದ್ದಾರೆ. ಹೀಗಾಗಿ ತಾವು ಬೇಸತ್ತು ಬಿಜೆಪಿ ತೊರೆಯುತ್ತಿರುವುದಾಗಿ ಅವರು ಹೇಳಿದರು.
ಬಿಜೆಪಿ ಜಾರಿ ಜಾತಿಗಳ ನಡುವೆ ಸಂಘರ್ಷಕ್ಕೆ ಕಾರಣವಾಗಿದೆ. ಜಿಪಂ ಮಾಜಿ ಉಪಾಧ್ಯಕ್ಷೆ ಎಚ್.ಆರ್ ಭಾಗ್ಯಲಕ್ಷ್ಮೀ ಸೇರಿದಂತೆ 300ಕ್ಕೂ ಅಧಿಕ ಬೆಂಗಲಿಗರು, ಕಾರ್ಯಕರ್ತರು ಬಿಜೆಪಿ ತೊರೆದು ಕಾಂಗ್ರೆಸ್ ಸೇರುತ್ತಿದ್ದಾರೆ ಎಂದು ಅವರು ತಿಳಿಸಿದರು. ಮುಖಂಡರಾದ ದಕ್ಷಿಣಾಮೂರ್ತಿ, ಪ್ರಭುಸ್ವಾಮಿ ಇದ್ದರು.