ವಿವಾದಿತ ಮಹಿಷ ದಸರಾ ಆಚರಣೆಗೆ ಷರತ್ತುಬದ್ಧ ಅನುಮತಿ

ವಿವಾದಿತ ಮಹಿಷ ದಸರಾ ಸಭಾ ಕಾರ್ಯಕ್ರಮಕ್ಕೆ ಅನುಮತಿ ನೀಡಲಾಗಿದೆ. ನಗರ ಪೊಲೀಸ್ ಆಯುಕ್ತರಿಂದ  ಅನುಮತಿ ನೀಡಿ ಆದೇಶ ಹೊರಬಿದ್ದಿದೆ. ಮೈಸೂರಿನ ಪುರಭವನದಲ್ಲಿ ಮಹಿಷ ದಸರಾ ನಡೆಯಲಿದೆ. 

Mysuru City Police commissioner grants permission  to celebrate mahisha dasara gow

ಮೈಸೂರು (ಅ.12): ವಿವಾದಿತ ಮಹಿಷ ದಸರಾ ಸಭಾ ಕಾರ್ಯಕ್ರಮಕ್ಕೆ ಅನುಮತಿ ನೀಡಲಾಗಿದೆ. ನಗರ ಪೊಲೀಸ್ ಆಯುಕ್ತರಿಂದ  ಅನುಮತಿ ನೀಡಿ ಆದೇಶ ಹೊರಬಿದ್ದಿದೆ. ಮೈಸೂರಿನ ಪುರಭವನದಲ್ಲಿ ಮಹಿಷ ದಸರಾ ನಡೆಯಲಿದೆ. ಕಾರ್ಯಕ್ರಮಕ್ಕೆ ಷರತ್ತುಬದ್ಧ ಅನುಮತಿ ನೀಡಲಾಗಿದೆ. ಮೆರವಣಿಗೆ, ರ್ಯಾಲಿ, ಪ್ರತಿಭಟನೆ ಮಾಡಬಾರದು. ನೇರವಾಗಿ ಸಭಾ ಕಾರ್ಯಕ್ರಮ ಪ್ರಾರಂಭಿಸಬೇಕು. ಪಟಾಕಿ ಸಿಡಿಸಿ ಸಂಭ್ರಮ ಆಚರಿಸಬಾರದು. ಧಾರ್ಮಿಕ ಭಾವನೆ ಕೆಣಕುವ, ಪ್ರಚೋದನೆ ನೀಡುವ ಭಾಷಣ ಮಾಡಬಾರದು ಎಂದು ಷರತ್ತುಗಳೊಂದಿಗೆ  ಪೊಲೀಸರು ಅನುಮತಿ ನೀಡಿದ್ದಾರೆ. ಮೈಸೂರು ನಗರ ಪೊಲೀಸ್ ಆಯುಕ್ತ ರಮೇಶ್ ಬಾನೋತ್ ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ್ದಾರೆ.

ಮೈಸೂರು ಶಾಂತಿ ಕಾಪಾಡಿದ ಚಾಮುಂಡೇಶ್ವರಿ ದೇವಿ: ಮಹಿಷ ದಸರವೂ ಇಲ್ಲ, ಚಾಮುಂಡಿ ಬೆಟ್ಟ ಚಲೋನೂ ಇಲ್ಲ!

ಮಹಿಷ ದಸರ ತಡೆಯಲು ನಾವು ಸಂಘರ್ಷಕ್ಕೆ ಸಿದ್ಧರಿದ್ದೇವೆ ಎಂದು ಪ್ರತಾಪ ಸಿಂಹ ಹೇಳಿದ್ದಾರೆ. ಸುಮಾರು ಐದು ಸಾವಿರ ಜನರೊಂದಿಗೆ ಚಾಮುಂಡಿ ಬೆಟ್ಟ ಚಲೋ ಹಮ್ಮಿಕೊಳ್ಳಲಾಗುವುದು ಎಂದಿದ್ದರು. ಇದಕ್ಕೆ ಕೂಡ ಅನುಮತಿ ತೆಗೆದುಕೊಳ್ಳಬೇಕು.

ಇನ್ನು ಈ ಬಗ್ಗೆ ಫೇಸ್‌ಬುಕ್‌ ಲೈವ್‌ ಬಂದಿದ್ದ ಸಂಸದ ಪ್ರತಾಪ್ ಸಿಂಹ (Pratap Simha) ಮಹಿಷಾ ದಸರಾ (Mahisha Dasara) ಹೆಸರಿನಲ್ಲಿ ತಾಯಿ ಚಾಮುಂಡೇಶ್ವರಿಗೆ ಅವಾಚ್ಯ ಶಬ್ದಗಳಿಂದ ಅಪಮಾನ ಮಾಡುತ್ತಾರೆ. ಈ ಕಾರಣಕ್ಕೆ ನಾನು ಮಹಿಷಾ ದಸರಾ ವಿರೋಧ ಮಾಡುತ್ತೇನೆ ಎಂದಿದ್ದಾರೆ.

ಬೆಟ್ಟಕ್ಕೆ ಬಂದು ಮಹಿಷ ಒಳ್ಳೆಯವನು ಅಂದಷ್ಟೇ ಹೇಳಿ ಹೋಗುವುದಿಲ್ಲ. ಚಾಮುಂಡಿಗೆ ರವಿಕೆ ಹಾಕೋನು ಗಂಡಸು, ಸೀರೆ ಉಡಿಸೋನು ಗಂಡಸು ಅಂತ ಕೆಟ್ಟದಾಗಿ ಮಾತನಾಡುತ್ತಾರೆ. ನಿಮ್ಮ ತಾಯಿ ಬಗ್ಗೆ ಕೆಟ್ಟದಾಗಿ ಮಾತನಾಡಿದರೆ ಯಾರಾದರೂ ಒಪ್ಪಿಕೊಳ್ಳುತ್ತೀರಾ? ಮಹಿಷನನ್ನು ಒಳ್ಳೆಯವನನ್ನಾಗಿ ಮಾಡಲು ಚಾಮುಂಡೇಶ್ವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸುತ್ತಾರೆ. ಇಂತಹವರನ್ನು ತಡೆಯಲು ನಾನು ವಿರೋಧ ಮಾಡುತ್ತಿದ್ದೇನೆ.

 

 Mysuru : ಅ. 13ಕ್ಕೆ ಮಹಿಷ ದಸರಾ ಆಚರಣೆ

ಹಿಂದೂ ಧರ್ಮ ಒಡೆಯುವ ಪ್ರಯತ್ನಕ್ಕೆ ಇದೆಲ್ಲ ಮಾಡುತ್ತಿದ್ದಾರೆ. ಹಿಂದೂ ಧರ್ಮ ಒಡೆಯುವ ಪ್ರಯತ್ನಕ್ಕೆ ಇದೆಲ್ಲ ಮಾಡುತ್ತಿದ್ದಾರೆ.  ಕೆಲವರು ನನ್ನ ಬಗ್ಗೆ ವಿರೋಧ ಮಾಡುತ್ತಿದ್ದಾರೆ. ಸುಮ್ಮನೆ ನನ್ನ ದಲಿತ ವಿರೋಧಿ ಅಂತ ಹೇಳೋದು ಬೇಡ. ನಿಜವಾದ ದಲಿತ ವಿರೋಧಿಗಳು ನೀವುಗಳು. ಲಲಿತ ನಾಯಕರಿಂದ ಉದ್ಘಾಟನೆ ಮಾಡಿಸಲು ಮುಂದಾದ್ರಿ. ಆಕೆಯ ಪುತ್ರ ಅಂಬೇಡ್ಕರ್ ಪುತ್ಥಳಿಗೆ ಮದ್ಯ ಕುಡಿಸಿದ್ದ. ನೀವು ಅಂಬೇಡ್ಕರ್ ವಾದಿಗಳು ಅಂತೀರಾ. ಆದರೆ ಅಂಬೇಡ್ಕರ್ ಪುತ್ಥಳಿಗೆ ಹೆಂಡ ಕುಡಿಸಿದ ತಾಯಿಯಿಂದ ಉದ್ಘಾಟನೆ ಮಾಡಿಸುತ್ತಿದ್ದೀರಿ ಎಂದು ಕಿಡಿಕಾರಿದರು.

Latest Videos
Follow Us:
Download App:
  • android
  • ios