Asianet Suvarna News Asianet Suvarna News

ದಸರಾದಲ್ಲಿ ಸಾಮಾಜಿಕ ಅಂತರ ಕಡ್ಡಾಯ : ಮಾಸ್ಕ್ ಹಾಕದಿದ್ದರೆ ದಂಡ

ದಸರಾ ವೇಳೆ ಕೋವಿಡ್ 19 ರ ಈ ಸಂದರ್ಭದಲ್ಲಿ ಎಲ್ಲರೂ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಬೇಕು ಹಾಗೂ ಮಾಸ್ಕ್ ಧರಿಸಲೇಬೇಕು. ಇಲ್ಲದಿದ್ದರೆ ದಂಡ ಹಾಕುವುದು ಅನಿವಾರ್ಯವಾಗಲಿದೆ ಎಂದು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ತಿಳಿಸಿದರು.

Mysuru Dasara Social Distance Mask mandatory Says Minister ST Somashekar snr
Author
Bengaluru, First Published Oct 2, 2020, 4:31 PM IST
  • Facebook
  • Twitter
  • Whatsapp

ಮೈಸೂರು (ಅ.02) : ದಸರಾ ವೇಳೆ ಕೋವಿಡ್ 19 ರ ಈ ಸಂದರ್ಭದಲ್ಲಿ ಎಲ್ಲರೂ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಬೇಕು ಹಾಗೂ ಮಾಸ್ಕ್ ಧರಿಸಲೇಬೇಕು. ಇಲ್ಲದಿದ್ದರೆ ದಂಡ ಹಾಕುವುದು ಅನಿವಾರ್ಯವಾಗಲಿದೆ ಎಂದು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ತಿಳಿಸಿದರು.

ದಸರಾ ಕಾರ್ಯಕ್ರಮದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ 1 ಸಾವಿರ ಹಾಗೂ ತಾಯಿ ಚಾಮುಂಡೇಶ್ವರಿ ಸನ್ನಿಧಿಯಲ್ಲಿ ಉದ್ಘಾಟನಾ ಕಾರ್ಯಕ್ರಮಕ್ಕೆ  2 ಸಾವಿರ ಮಂದಿ ಭಾಗವಹಿಸಲು ಅವಕಾಶ ಮಾಡಿಕೊಡಬೇಕು ಎಂದು ಸರ್ಕಾರಕ್ಕೆ ಕೇಳಿಕೊಂಡಿದ್ದೇವೆ. ಅಲ್ಲಿ ತೀರ್ಮಾನ ತೆಗೆದುಕೊಳ್ಳಲಾಗುವುದು. ಜಿಲ್ಲಾಡಳಿತ ಸೇರಿದಂತೆ ಸರ್ಕಾರ ಕೋವಿಡ್ ಸುರಕ್ಷತೆಗೋಸ್ಕರ ಅಗತ್ಯ ಕ್ರಮ ಕೈಗೊಳ್ಳುತ್ತದೆ ಎಂದು ಸಚಿವರು ಸುದ್ದಿಗಾರರಿಗೆ ತಿಳಿಸಿದರು. 

ದಸರಾ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಸಂಬಂಧಪಟ್ಟಂತೆ ಇನ್ನೆರಡು ದಿನದಲ್ಲಿ ಪಟ್ಟಿ ಬಿಡುಗಡೆಯಾಗಲಿದೆ ಎಂದು ಸಚಿವರು ತಿಳಿಸಿದರು.

ದಸರಾ ಗಜಪಯಣಕ್ಕೆ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಚಾಲನೆ

ಜಿಲ್ಲಾಧಿಕಾರಿ ಶರತ್ ಅವರ ವರ್ಗಾವಣೆಗೆ ಸಂಬಂಧಪಟ್ಟಂತೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಸರ್ಕಾರದ ನಿರ್ಧಾರವನ್ನು ನಾನು ಸ್ವಾಗತಿಸುತ್ತೇನೆ. ನನ್ನ ಗಮನಕ್ಕೆ ತಂದುಕೊಂಡೇ ವರ್ಗಾವಣೆ ಮಾಡಲಾಗಿದ್ದು, ಇದರಲ್ಲಿ ಯಾವುದೇ ಗೊಂದಲ ಇಲ್ಲ. ಶರತ್ ಅವರು ಸಿಎಟಿ ಮೊಹೋಗಿರುವ ವಿಚಾರವಾಗಿ ಮನವೊಲಿಸುವ ಪ್ರಯತ್ನವನ್ನು ಮಾಡಲಾಗುವುದು ಎಂದು ಸಚಿವರು ತಿಳಿಸಿದರು.

Follow Us:
Download App:
  • android
  • ios