ಮೈಸೂರು (ಅ.06): ಮೈಸೂರಿನಲ್ಲಿ ಕೊರೋನಾ ಹೆಚ್ಚಳ ಹಿನ್ನೆಲೆಯಲ್ಲಿ ನಮಗೆ ಎರಡು ವಾರ ಸಮಯ ಕೊಡಿ, ಕೊರೋನಾವನ್ನು ನಿಯಂತ್ರಣಕ್ಕೆ ತರುವುದಾಗಿ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಕಾಲಾವಕಾಶ ಕೋರಿದ್ದಾರೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ಹೇಳಿದರು. 

ಮೈಸೂರು ಜಿಪಂ ಸಭಾಂಗಣದಲ್ಲಿ ಸೋಮವಾರ ಕೊರೋನಾ ನಿಯಂತ್ರಣ ಸಭೆ ಬಳಿಕ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲಾಧಿಕಾರಿಗಳು ಬಹಳ ವಿಶ್ವಾಸದಿಂದ ಕಾಲಾವಕಾಶ ಕೇಳಿದ್ದಾರೆ, ನಾವು ಕೊಟ್ಟಿದ್ದೇವೆ ಎಂದರು.

ಬಿಎಸ್‌ವೈ ಸಂಪುಟದ ಮತ್ತೋರ್ವ ಸಚಿವರೊಬ್ಬರಿಗೆ ಕೊರೋನಾ..!

ದಸರಾ ವಿಚಾರದಲ್ಲಿ ಇನ್ನು ಹಲವು ಮಾರ್ಪಾಡುಗಳನ್ನು ಮಾಡಲು ಚರ್ಚೆ ನಡೆದಿದೆ. ದಸರಾವನ್ನು ತೀರ ಸರಳವಾಗಿ ಮಾಡುವ ಅವಶ್ಯಕತೆ ಇದೆ. ಈ ಬಗ್ಗೆ ಮುಖ್ಯಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ಜೊತೆ ಸಭೆ ನಡೆಸಿ ತೀರ್ಮಾನ ಮಾಡುತ್ತೇವೆ. ದಸರಾದಿಂದ ರಾಜ್ಯ ಸರ್ಕಾರಕ್ಕೆ ಕೆಟ್ಟ ಹೆಸರು ತರಲು ಇಷ್ಟಇಲ್ಲ ಎಂದರು.

-ಇನ್ನು ಮುಂದೆ ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲೂ ಆಕ್ಸಿಜನ್‌ ಬೆಡ್‌ ಲಭ್ಯವಾಗಲಿದೆ ಎಂದು ತಿಳಿಸಿದರು.