ಮೈಸೂರು [ಆ.23]: ವರ್ಗಾವಣೆ ಆದೇಶ ಹೊರಬಿದ್ದ ಕೆಲವೇ ಗಂಟೆಗಳಲ್ಲಿ ಸ್ಥಳೀಯ ಜನಪ್ರತಿನಿಧಿಗಳ ಒತ್ತಾಯದಿಂದ ಮೈಸೂರು ಜಿಲ್ಲಾಧಿಕಾರಿ ಅಭಿರಾಮ್ ಜಿ. ಶಂಕರ್ ವರ್ಗಾವಣೆ ರದ್ದಾದ ಪ್ರಸಂಗ ಗುರುವಾರ ನಡೆಯಿತು. 

ಪ್ರತಿ ಸರ್ಕಾರ ಬಂದಾಗಲು ತಮಗೆ ಬೇಕಾದ ಅಧಿಕಾರಿ ಗಳನ್ನು ವರ್ಗಾಯಿಸಿಕೊಳ್ಳುವುದು ಸಾಮಾನ್ಯ. ಅದರಂತೆ ಬಿಜೆಪಿ ಅಧಿಕಾರ ಬಂದ ಬಳಿಕ ಅಧಿಕಾರಿಗಳ ವರ್ಗಾವಣೆ ನಡೆಯುತ್ತಿದೆ. 

ಗುರುವಾರ ಮಧ್ಯಾಹ್ನ ಮೈಸೂರು ಜಿಲ್ಲಾಧಿಕಾರಿ ಅಭಿರಾಮ್ ಜಿ. ಶಂಕರ್ ಅವರನ್ನು ವಾಣಿಜ್ಯ ತೆರಿಗೆ ಇಲಾಖೆಯ ಹೆಚ್ಚುವರಿ ಆಯುಕ್ತರನ್ನಾಗಿ ನೇಮಿಸಿ, ಆ ಹುದ್ದೆಯಲ್ಲಿದ್ದ ನಿತೇಶ್ ಪಟೇಲ್ ಅವರನ್ನು ಮೈಸೂರು ಜಿಲ್ಲಾಧಿಕಾರಿಯಾಗಿ ವರ್ಗಾಯಿಸಲಾಗಿತ್ತು.