Mysuru : ಡಿ. 12ಕ್ಕೆ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ - ಮದನ್
ಸದಸ್ಯರ ಬೆಂಬಲ ಇದ್ದರೂ ಸಹ ನನ್ನ ವೈಯಕ್ತಿಕ ಕಾರಣಗಳಿಂದ ಅಧ್ಯಕ್ಷ ಸ್ಥಾನಕ್ಕೆ ಡಿ. 12 ರಂದು ರಾಜೀನಾಮೆ ಸಲ್ಲಿಸುವುದಾಗಿ ಪುರಸಭೆ ಅಧ್ಯಕ್ಷ ಎಸ್. ಮದನ್‌ರಾಜ ತಿಳಿಸಿದರು.
ಟಿ. ನರಸೀಪುರ (ನ.29): ಸದಸ್ಯರ ಬೆಂಬಲ ಇದ್ದರೂ ಸಹ ನನ್ನ ವೈಯಕ್ತಿಕ ಕಾರಣಗಳಿಂದ ಅಧ್ಯಕ್ಷ ಸ್ಥಾನಕ್ಕೆ ಡಿ. 12 ರಂದು ರಾಜೀನಾಮೆ ಸಲ್ಲಿಸುವುದಾಗಿ ಪುರಸಭೆ ಅಧ್ಯಕ್ಷ ಎಸ್. ಮದನ್‌ರಾಜ ತಿಳಿಸಿದರು.
ಪುರಸಭೆ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುತ್ತಿರುವುದು ನನ್ನ ವೈಯಕ್ತಿಕ ನಿರ್ಧಾರ ಎಂದು ಅವರು ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಪುರಸಭೆ ಅಧ್ಯಕ್ಷನಾಗಿ ಒಂದು ವರ್ಷ ಪೂರೈಸಿರುವ ಈ ಸಂದರ್ಭದಲ್ಲಿ ರಾಜೀನಾಮೆ ನೀಡುವಂತೆ ಕಾಂಗ್ರೆಸ್ (congress) ವತಿಯಿಂದಾಗಲಿ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಹಾಗೂ ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ ಅವರಿಂದ ಆಗಲಿ ಸೂಚನೆ ಹಾಗೂ ಒತ್ತಡ ಬಂದಿಲ್ಲ, ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುತ್ತಿರುವುದು ನನ್ನ ವೈಯಕ್ತಿಕ ಕಾರಣದಿಂದ ಮಾತ್ರವೇ ಹೊರೆತು ಇದರಲ್ಲಿ ಯಾರ ಪಾತ್ರವು ಇಲ್ಲ ಎಂದು ಅವರು ಸ್ಪಷ್ಟಪಡಿಸಿದರು.
ನನಗೆ ಪುರಸಭೆ ಅಧ್ಯಕ್ಷ ಸ್ಥಾನದ ಪಟ್ಟಸಿಗಲು ಡಾ. ಯತೀಂದ್ರ ಸಿದ್ದರಾಮಯ್ಯ ಹಾಗೂ ಸಿದ್ದರಾಮಯ್ಯ ಅವರು ಕಾರಣ, ನನ್ನ ಅಧಿಕಾರವಧಿಯಲ್ಲಿ ಶಾಸಕರು ತುಂಬ ಸಹಕಾರ ನೀಡಿದ್ದಾರೆ, ಹಾಗೆ ಪುರಸಭೆ ಸದಸ್ಯರು ಸಹ ಆಡಳಿತ ಮಾಡಲು ಎಲ್ಲ ರೀತಿಯ ಸಹಕಾರ ಸಲಹೆ ನೀಡಿದ್ದಾರೆ, ಹಾಗಾಗಿ ವರಿಷ್ಠರು ಹಾಗೂ ಪುರಸಭೆ ಸದಸ್ಯರಿಗೆ ಧನ್ಯವಾದ ಸಲ್ಲಿಸುತ್ತೇನೆ ಎಂದರು.
ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ನಂತರ ಸುಮ್ಮನೆ ಕೂರುವುದಿಲ್ಲ, ಶಾಸಕ ಯತೀಂದ್ರ ಸಿದ್ದರಾಮಯ್ಯ ಅವರ ಜೊತೆಯಲ್ಲಿ ಇದ್ದು, ಅವರ ನಿರ್ದೆಶನದಂತೆ ಪಕ್ಷ ಸಂಘಟನೆಯಲ್ಲಿ ತೊಡಗಿಕೊಳ್ಳುತ್ತೇನೆ, ನಾನು ಇರುವವರೆಗೂ ಕಾಂಗ್ರೆಸ್‌ನ ಯತೀಂದ್ರ ಸಿದ್ದರಾಮಯ್ಯ ಅವರ ಪರವಾಗಿ ಇರುತ್ತೇನೆ ಎಂದು ಅವರು ವಾಗ್ದಾನ ಮಾಡಿದರು.
ಕಾಂಗ್ರೆಸ್ ಅಧ್ಯಕ್ಷ ರಮೇಶ್ ಮುದ್ದೇಗೌಡ, ಪುರಸಭಾ ಮಾಜಿ ಅಧ್ಯಕ್ಷ ಸೋಮಣ್ಣ, ಸದಸ್ಯರಾದ ಮಂಜು ಬಾದಾಮಿ, ನಾಗರಾಜು, ಮಂಜುನಾಥ್, ಟೌನ್ ಪಂಚಾಯಿತಿ ಮಾಜಿ ಸದಸ್ಯ ಮಲ್ಲೇಶ್‌ನಾಯಕ್, ಬೈರಾಪುರ ಗ್ರಾಪಂ ಮಾಜಿ ಅಧ್ಯಕ್ಷ ಕರಿಯಪ್ಪ, ಶ್ರೀಕಂಠ ಇದ್ದರು.
ಬಿಜೆಪಿ ಪಾರುಪತ್ಯಕ್ಕೆ ಬ್ರೇಕ್ ಹಾಕುತ್ತಾ ಕಾಂಗ್ರೆಸ್
ವಸಂತಕುಮಾರ ಕತಗಾಲ
ಕಾರವಾರ (ನ.29): ಉತ್ತರ ಕನ್ನಡ ಜಿಲ್ಲೆಯಲ್ಲಿ ಬಹುಕಾಲದ ಕಾಂಗ್ರೆಸ್ ಅಧಿಪತ್ಯಕ್ಕೆ 2018ರ ಚುನಾವಣೆಯಲ್ಲಿ ಬ್ರೇಕ್ ಹಾಕಿ ಪ್ರಾಬಲ್ಯ ಸ್ಥಾಪಿಸುವಲ್ಲಿ ಬಿಜೆಪಿ ಯಶಸ್ವಿಯಾಗಿದೆ. ಜಿಲ್ಲೆಯ ಆರು ಕ್ಷೇತ್ರಗಳ ಪೈಕಿ ಐದರಲ್ಲಿ ಬಿಜೆಪಿ ಶಾಸಕರಿದ್ದರೆ, ಕೇವಲ ಒಂದರಲ್ಲಷ್ಟೇ ಕಾಂಗ್ರೆಸ್ ಶಾಸಕರಿದ್ದಾರೆ. ಕಾರವಾರ, ಕುಮಟಾ, ಭಟ್ಕಳ, ಶಿರಸಿ ಹಾಗೂ ಯಲ್ಲಾಪುರ ಕ್ಷೇತ್ರ ಬಿಜೆಪಿಗೆ ಒಲಿದರೆ, ಹಳಿಯಾಳ ಮಾತ್ರ ಕಾಂಗ್ರೆಸ್ ಪಾಲಾಗಿದೆ. ಲೋಕಸಭೆ, ಗ್ರಾಪಂ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿಗಳಲ್ಲೂ ಬಿಜೆಪಿ ಮೇಲುಗೈ ಸಾಧಿಸಿದೆ. ಜಿಲ್ಲೆಯಾದ್ಯಂತ ಮೇಲ್ನೋಟಕ್ಕೆ ಬಿಜೆಪಿ ಪ್ರಬಲವಾಗಿದೆ.
ನಂತರದ ಸ್ಥಾನ ಕಾಂಗ್ರೆಸ್‌ನದ್ದು. ಜೆಡಿಎಸ್ ಜಿಲ್ಲೆಯಲ್ಲಿ ಬಲ ಕಳೆದುಕೊಂಡಿದೆ. ಬಹುಸಂಖ್ಯಾತರಾದ ಈಡಿಗರು, ಬ್ರಾಹ್ಮಣರು, ಹಾಲಕ್ಕಿ ಒಕ್ಕಲಿಗರು, ಮರಾಠರು ಇಲ್ಲಿ ನಿರ್ಣಾಯಕರು. ಆದರೆ ಭಟ್ಕಳ ಹೊರತು ಪಡಿಸಿ ಜಿಲ್ಲೆಯ ಇತರ ಕ್ಷೇತ್ರಗಳಲ್ಲಿ ಪ್ರಬಲ ಜಾತಿಗಳ ಅಭ್ಯರ್ಥಿಗಳಿಗಿಂತ ಬೇರೆಯವರೇ ಆಯ್ಕೆಯಾದ ಉದಾಹರಣೆಗಳು ಹೆಚ್ಚಿವೆ. ಇದರಿಂದ ಜಾತಿ ರಾಜಕಾರಣಕ್ಕಿಂತ ಜಿಲ್ಲೆಯಲ್ಲಿ ವ್ಯಕ್ತಿಗಳೇ ಮಹತ್ವ ಪಡೆದುಕೊಂಡಿದ್ದಾರೆ. ಮಾಜಿ ಸಚಿವ ಆರ್.ವಿ. ದೇಶಪಾಂಡೆ, ವಿಧಾನಸಭೆ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ ಸದ್ಯಕ್ಕೆ ಜಿಲ್ಲೆಯ ಪ್ರಮುಖ ರಾಜಕಾರಣಿಗಳು.
ಕಳೆದ ಚುನಾವಣೆಯಲ್ಲಿ ಹೊನ್ನಾವರದ ಯುವಕ ಪರೇಶ ಮೇಸ್ತ ಸಾವು ಜಿಲ್ಲೆಯಾದ್ಯಂತ ಸಂಚಲನಕ್ಕೆ ಕಾರಣವಾಗಿತ್ತು. ಜಿಲ್ಲೆ ಗಲಭೆಯನ್ನೂ ಕಾಣುವಂತಾಯಿತು. ಇದನ್ನು ರಾಜಕೀಯವಾಗಿ ಬಳಸಿಕೊಳ್ಳುವಲ್ಲಿ ಬಿಜೆಪಿ ಸಫಲವಾಯಿತು. ಇದೇ ಕಾರಣಕ್ಕೆ ಬಿಜೆಪಿ ಕರಾವಳಿಯಲ್ಲಿ ಜಯಭೇರಿ ಬಾರಿಸಿತು ಎನ್ನುವುದು ಕಾಂಗ್ರೆಸ್ ಆರೋಪ. ಪರೇಶ ಮೇಸ್ತ ಸಾವು ಆಕಸ್ಮಿಕ ಎಂದು ಈಚೆಗೆ ಸಿಬಿಐ ವರದಿ ನೀಡಿರುವುದು ಕಾಂಗ್ರೆಸ್ ಪಾಳೆಯದಲ್ಲಿ ಹುಮ್ಮಸ್ಸಿಗೆ ಕಾರಣವಾಗಿದೆ. ಈ ಬಾರಿಯ ಚುನಾವಣೆಯಲ್ಲೂ ಪರೇಶ ಮೇಸ್ತ ಸಾವು ಚುನಾವಣಾ ಸರಕಾಗುವ ಸಾಧ್ಯತೆ ದಟ್ಟವಾಗಿದೆ.
Ticket Fight: ಯತ್ನಾಳ ವಿರುದ್ಧ ಸ್ಪರ್ಧೆಗೆ ಕಾಂಗ್ರೆಸ್‌ನಲ್ಲಿ 20 ಆಕಾಂಕ್ಷಿಗಳು
ಕಾರವಾರ: ರೂಪಾಲಿ ನಾಯ್ಕ್-ಸೈಲ್ ಟಕ್ಕರ್ ಖಚಿತ
ಕಾರವಾರ ಹಾಗೂ ಅಂಕೋಲಾ ತಾಲೂಕುಗಳನ್ನು ಒಳಗೊಂಡಿರುವ ಈ ಕ್ಷೇತ್ರದಲ್ಲಿ ಬಿಜೆಪಿಯ ರೂಪಾಲಿ ನಾಯ್ಕ ಹಾಲಿ ಶಾಸಕರು. ಮುಂದಿನ ಚುನಾವಣೆಯಲ್ಲೂ ಇವರೇ ಬಿಜೆಪಿಯಿಂದ ಕಣಕ್ಕಿಳಿಯುವುದು ಪಕ್ಕ. ಇವರ ಎದುರಾಳಿಯಾಗಿ ಕಾಂಗ್ರೆಸ್‌ನಿಂದ ಸತೀಶ ಸೈಲ್ ಕಣಕ್ಕಿಳಿಯಲು ಸಿದ್ಧತೆ ನಡೆಸುತ್ತಿದ್ದಾರೆ. ಮಾಜಿ ಸಚಿವ ಆನಂದ ಅಸ್ನೋಟಿಕರ ಜೆಡಿಎಸ್‌ನಲ್ಲಿದ್ದರೂ ಜೆಡಿಎಸ್‌ನಿಂದ ಕಣಕ್ಕಿಳಿಯುವುದು ಅನುಮಾನ. ಸತೀಶ ಸೈಲ್ ಹಾಗೂ ಆನಂದ ಅಸ್ನೋಟಿಕರ ಇಬ್ಬರೂ ಬಿಜೆಪಿ ಸೇರಲು ನಡೆಸಿದ ಕಸರತ್ತು ಯಶಸ್ವಿಯಾಗಿಲ್ಲ. ಹಾಗಾಗಿಯೇ ಸೈಲ್ ಕಾಂಗ್ರೆಸ್‌ನಿಂದ ಸ್ಪರ್ಧಿಸಲು ನಿರ್ಧರಿಸಿದರೆ, ಆನಂದ್ ಇನ್ನೂ ಗೊಂದಲದಲ್ಲಿದ್ದಾರೆ. ಪಕ್ಷೇತರವಾಗಿ ಸ್ಪರ್ಧಿಸಬೇಕೇ ಅಥವಾ ಬೇರೊಬ್ಬ ಅಭ್ಯರ್ಥಿಯನ್ನು ಬೆಂಬಲಿಸಬೇಕೇ ಎನ್ನುವ ವಿಚಾರವೂ ಆನಂದ್ ಅವರ ತಲೆಯಲ್ಲಿದೆ. ಕ್ಷೇತ್ರದಲ್ಲಿ ಹಾಲಕ್ಕಿ ಒಕ್ಕಲಿಗರು, ಕೊಂಕಣ ಮರಾಠಾ, ಕೋಮಾರಪಂತ, ಈಡಿಗರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ರೂಪಾಲಿ ನಾಯ್ಕ ಹಾಗೂ ಸತೀಶ ಸೈಲ್ ಇಬ್ಬರೂ ಕೊಂಕಣ ಮರಾಠಾ ಸಮಾಜದವರಾಗಿದ್ದಾರೆ. ಆದರೆ ಕಾರವಾರ ಕ್ಷೇತ್ರದಲ್ಲಿ ಜಾತಿಗಿಂತ ಅಭ್ಯರ್ಥಿಗಳ ಪ್ರಭಾವವೇ ಗೆಲುವನ್ನು ನಿರ್ಧರಿಸಲಿದೆ