Asianet Suvarna News Asianet Suvarna News

Mysuru : ಅನ್ಯ ಪಕ್ಷಗಳನ್ನು ತೊರೆದ ಹಲವು ಮುಖಂಡರು ಬಿಜೆಪಿಗೆ ಸೇರ್ಪಡೆ

ಕೇಂದ್ರ ಹಾಗೂ ರಾಜ್ಯದಲ್ಲಿನ ಬಿಜೆಪಿ ಜನಪರ ಆಡಳಿತ ಮೆಚ್ಚಿ ತಾಲೂಕಿನ ವಿವಿಧಡೆಯ ಗ್ರಾಮಗಳಲ್ಲಿ ಅನ್ಯ ಪಕ್ಷಗಳನ್ನು ತೊರೆದು ಬಿಜೆಪಿಗೆ ಸೇರ್ಪಡೆಯಾಗುತ್ತಿರುವುದು ಸಂತಸಕರ ಬೆಳವಣಿಗೆಯಾಗಿದೆ ಎಂದು ಬಿಜೆಪಿ ತಾಲೂಕು ಅಧ್ಯಕ್ಷ ಎಂ.ಎಂ ರಾಜೇಗೌಡ ಹೇಳಿದರು.

Mysuru  Many leaders who left other parties joined BJP snr
Author
First Published Dec 23, 2022, 6:03 AM IST

 ಪಿರಿಯಾಪಟ್ಟಣ (ಡಿ. 23):ಕೇಂದ್ರ ಹಾಗೂ ರಾಜ್ಯದಲ್ಲಿನ ಬಿಜೆಪಿ ಜನಪರ ಆಡಳಿತ ಮೆಚ್ಚಿ ತಾಲೂಕಿನ ವಿವಿಧಡೆಯ ಗ್ರಾಮಗಳಲ್ಲಿ ಅನ್ಯ ಪಕ್ಷಗಳನ್ನು ತೊರೆದು ಬಿಜೆಪಿಗೆ ಸೇರ್ಪಡೆಯಾಗುತ್ತಿರುವುದು ಸಂತಸಕರ ಬೆಳವಣಿಗೆಯಾಗಿದೆ ಎಂದು ಬಿಜೆಪಿ ತಾಲೂಕು ಅಧ್ಯಕ್ಷ ಎಂ.ಎಂ ರಾಜೇಗೌಡ ಹೇಳಿದರು.

ತಾಲೂಕಿನ ಸನ್ಯಾಸಿಪುರ ಗ್ರಾಮದಲ್ಲಿ ಮಾಜಿ ಸಂಸದ ಸಿ.ಎಚ್‌ ವಿಜಯಶಂಕರ ಅವರ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾದವರನ್ನು ಸ್ವಾಗತಿಸಿ ಅವರು ಮಾತನಾಡಿದರು.

ಕೇಂದ್ರ ಹಾಗೂ ರಾಜ್ಯದಲ್ಲಿನ ಜನಪರ ಯೋಜನೆಗಳನ್ನು ಕಾರ್ಯಕರ್ತರು ಗ್ರಾಮಾಂತರ ಪ್ರದೇಶದ ಜನರಿಗೆ ಮನದಟ್ಟು ಮಾಡುವ ಕೆಲಸ ಮಾಡಿ ಮುಂಬರುವ ಚುನಾವಣೆಯಲ್ಲಿ (Election)  ಬಿಜೆಪಿ ಅಭ್ಯರ್ಥಿ ಗೆಲುವಿಗೆ ಸಹಕರಿಸುವಂತೆ ಅವರು ಕೋರಿದರು.

ಮಾಜಿ ಸಂಸದ ಸಿ.ಎಚ್‌. ವಿಜಯಶಂಕರ್‌ ಮಾತನಾಡಿ, ಬಿಜೆಪಿ ಅಭ್ಯರ್ಥಿ ಗೆಲುವಿಗೆ ಕಾರ್ಯಕರ್ತರ ಪರಿಶ್ರಮ ಮಹತ್ವದ್ದಾಗಿದ್ದು, ಬೂತ್‌ ಮಟ್ಟದಿಂದ ಸಂಘಟಿತರಾಗುವಂತೆ ಮನವಿ ಮಾಡಿದರು.

ಈ ವೇಳೆ ಗ್ರಾಮದ 30ಕ್ಕೂ ಹೆಚ್ಚು ಮುಖಂಡರು ಯುವಕರು ಬಿಜೆಪಿ ಸೇರ್ಪಡೆಯಾದರು. ಗ್ರಾಮಕ್ಕೆ ಆಗಮಿಸಿದ ಮಾಜಿ ಸಂಸದರು ಹಾಗೂ ಬಿಜೆಪಿ ಮುಖಂಡರನ್ನು ಸನ್ಮಾನಿಸಲಾಯಿತು.

ತಾಲೂಕು ಪ್ರಧಾನ ಕಾರ್ಯದರ್ಶಿ ಚಂದ್ರು, ಮಾಜಿ ಅಧ್ಯಕ್ಷ ಪಿ.ಜೆ. ರವಿ, ರಾಜೇಗೌಡ, ರಾವಂದೂರು ಮಹಾ ಶಕ್ತಿಕೇಂದ್ರ ಅಧ್ಯಕ್ಷ ಅಶೋಕ್‌, ರಮೇಶ್‌, ಕೃಷ್ಣೆಗೌಡ, ರಂಗೇಗೌಡ, ಯೋಗೀಶ್‌, ನಾಗೇಶ್‌, ಸಂತೋಷ್‌, ಮಂಜು, ಅಶ್ವಥ್‌ ಇದ್ದರು.

ಸುಮಲತಾ ಆಪ್ತ ಬಿಜೆಪಿಗೆ

ಮಂಡ್ಯ (ನ.26): ಮಂಡ್ಯ ರಾಜಕಾರಣದಲ್ಲಿ ಕಾಂಗ್ರೆಸ್‌ ಪಕ್ಷದಿಂದ ಹೊಸ ನಾಯಕನೆಂದೇ ಗುರುತಿಸಿಕೊಂಡಿದ್ದ ಸುಮಲತಾ ಅವರ ಆಪ್ತ ಮತ್ತು ಬೆಂಬಲಿಗ ಇಂಡುವಾಳು ಸಚ್ಚಿದಾನಂದ ಈಗ ಬಿಜೆಪಿ ಸೇರ್ಪಡೆಯಾಗಲು ಮುಂದಾಗಿದ್ದಾರೆ.  ಈ ಬಗ್ಗೆ ಸ್ವತಃ ಹೇಳಿಕೆ ನೀಡಿರುವ ಸಚ್ಚಿದಾನಂದ ನಾನು ಕನಾಯಕರ ಪಕ್ಷವಾಗಿರುವ ಕಾಂಗ್ರೆಸ್‌ ಪಕ್ಷವನ್ನು ತೊರೆದು ಕಾರ್ಯಕರ್ತರ ಪಕ್ಷವಾದ ಬಿಜೆಪಿ ಸೇರುತ್ತಿದ್ದೇನೆ. ನ.28ರಂದು ಅಧಿಕೃತ ಸೇರ್ಪಡೆ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದ್ದಾರೆ.

ಇಂಡುವಾಳು ಸಚ್ಚಿದಾನಂದ ಕಾಂಗ್ರೆಸ್‌ ಪಕ್ಷದಲ್ಲಿ ಗುರುತಿಸಿಕೊಂಡು ಹಲವು ವರ್ಷ ಕೆಲಸ ಮಾಡಿದ್ದರು. ಆದರೆ, ಈ ಹಿಂದೆ ಲೋಕಸಭಾ ಚುನಾವಣೆಯ ವೇಳೆ ಕಾಂಗ್ರೆಸ್ ಪಕ್ಷದಲ್ಲಿ ಇರುವುದನ್ನೂ ಲೆಕ್ಕಿಸದೇ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಸುಮಲತಾ ಅಂಬರೀಶ್‌ ಅವರಿಗೆ ಬಂಬಲ ನೀಡುವ ಮೂಲಕ ಅವರ ಗೆಲುವಿಗೂ ಕಾರಣವಾಗಿದ್ದರು. ಹೀಗಾಗಿ, ಸುಮಲತಾ ಅಂಬರೀಶ್‌ ಅವರ ಆಪ್ತರಲ್ಲಿ ಇಂಡುವಾಳು ಸಚ್ಚಿದಾನಂದ ಪ್ರಮುಖರಾಗಿದ್ದರು. ಚುನಾವಣೆ ವೇಳೆ ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಆಗಿದ್ದ ಗಂಗಾಧರ ಅವರು ಇಂಡುವಾಳು ಸಮಚ್ಚಿದಾನಂದ ಸೇರಿ ಅನೇಕ ಬ್ಲಾಕ್‌ ಕಾಂಗ್ರೆಸ್‌ ಸದಸ್ಯರನ್ನು ಕಾಂಗ್ರೆಸ್‌ ಸದಸ್ಯತ್ವದಿಂದ ವಜಾ ಮಾಡಲಾಗಿತ್ತು. ಆದರೆ, ಬಹುತೇಕರನ್ನು ವಾಪಸ್‌ ಕರೆಸಿಕೊಂಡಿದ್ದರೂ ಸಚ್ಚಿದಾನಂದನನ್ನು ಮಾತ್ರ ಹೊರಗಿಡಲಾಗಿತ್ತು. ಈಗ ಮುಂಬರುವ ಚುನಾವಣೆ ಉದ್ದೇಶದಿಂದ ಸಂಪೂರ್ಣವಾಗಿ ಕಾಂಗ್ರೆಸ್‌ ತೊರೆದು ಬಿಜೆಪಿ ಸೇರ್ಪಡೆ ಆಗಲುತೀರ್ಮಾಣ ಕೈಗೊಂಡಿದ್ದಾರೆ.

ಆಪ್ತನ ಬಿಜೆಪಿ ಸೇರ್ಪಡೆಗೆ ಸುಮಲತಾ ಗ್ರೀನ್‌ ಸಿಗ್ನಲ್: ಸಚ್ಚಿದಾನಂದ ಅವರು ತಮ್ಮ ಇಂಡುವಾಳು ಗ್ರಾಮದ ನಿವಾಸದಲ್ಲಿ ಹಿತೈಷಿಗಳು, ಬೆಂಬಲಿಗರ ಸಭೆ ನಡೆಸಿ ಈ ವೇಳೆ ಬಿಜೆಪಿ ಸೇರ್ಪಡೆ ಬಗ್ಗೆ ಚರ್ಚೆ ನಡೆಸಿ ಅಭಿಪ್ರಾಯ ಸಂಗ್ರಹ ಮಾಡಿದ್ದಾರೆ. ಈ ವೇಳೆ ಎಲ್ಲರೂ ಒಪ್ಪಿಗೆ ಸೂಚಿಸಿ ಶುಭ ಹಾರೈಸಿದ್ದಾರೆ. ಇನ್ನು ಬಿಜೆಪಿ ಸೇರಲಿರುವ ಸಚ್ಚಿದಾನಂದ ಅವರು ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ  ನ.28 ರಂದು ನಡೆಯುವ ಕಾರ್ಯಕ್ರಮದಲ್ಲಿ ಸೇರ್ಪಡೆ ಆಗಲಿದ್ದಾರೆ. ಈ ಕಾರ್ಯಕ್ರಮಕ್ಕೆ ಸಾವಿರಕ್ಕೂ ಹೆಚ್ಚು ಬೆಂಬಲಿಗರೊಂದಿಗೆ ತೆರಳಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಅಂದು ಬೆಳಗ್ಗೆ 9.20ಕ್ಕೆ ನಡೆಯುವ ಕಾರ್ಯಕ್ರಮದಲ್ಲಿ ರಾಜ್ಯ ನಾಯಕರ ಸಮ್ಮುಖದಲ್ಲಿ ಬಿಜೆಪಿ ಪಕ್ಷದ ಸದಸ್ಯತ್ವ ಪಡೆಯಲು ನಿರ್ಧರಿಸಲಾಗಿದೆ. ಇದಕ್ಕೆ ಸಂಸದೆ ಸುಮಲತಾ ಅಂಬರೀಶ್‌ ಅವರು ಕೂಡ ಗ್ರೀನ್‌ ಸಿಗ್ನಲ್‌ ನೀಡಿದ್ದಾರೆ ಎಂಬ ಮಾಹಿತಿ ತಿಳಿದುಬಂದಿದೆ

Follow Us:
Download App:
  • android
  • ios