Asianet Suvarna News Asianet Suvarna News

ಮೈಸೂರು ಜನತೆಗೆ ಹೊಸ ವರ್ಷಾಚರಣೆಗೆ 1 ಗಂಟೆ ಮಾತ್ರ ಅವಕಾಶ: ಚಾಮುಂಡಿ ಬೆಟ್ಟಕ್ಕಿಲ್ಲ ಪ್ರವೇಶ

ಮೈಸೂರಿನ ಜನತೆಗೆ ಮಧ್ಯರಾತ್ರಿ 1 ಗಂಟೆವರೆಗೆ ಮಾತ್ರ ಹೊಸ ವರ್ಷಾಚರಣೆಗೆ ಅವಕಾಶ ನೀಡಲಾಗಿದೆ. ಜೊತೆಗೆ ಚಾಮುಂಡಿ ಬೆಟ್ಟಕ್ಕೆ ಪ್ರವೇಶವನ್ನೂ ನಿಷೇಧಿಸಲಾಗಿದೆ.

Mysuru people new year celebrate should only one hour and Chamundi Hill entry was banned sat
Author
First Published Dec 28, 2023, 9:55 PM IST

ಮೈಸೂರು (ಡಿ.28): ರಾಜ್ಯದಲ್ಲಿ ಕೋವಿಡ್‌ ಮಹಾಮಾರಿ ಸೋಂಕು ಹೆಚ್ಚಾಗುತ್ತಿದ್ದರೂ ಹೊಸ ವರ್ಷಾಚರಣೆಗೆ ಸರ್ಕಾರ ಯಾವುದೇ ನಿರ್ಬಂಧ ವಿಧಿಸಿಲ್ಲ. ಆದರೆ, ಸ್ಥಳೀಯವಾಗಿ ಮೈಸೂರಿನ ಜನತೆಗೆ ಮಧ್ಯರಾತ್ರಿ 1 ಗಂಟೆವರೆಗೆ ಮಾತ್ರ ಹೊಸ ವರ್ಷಾಚರಣೆಗೆ ಅವಕಾಶ ನೀಡಲಾಗಿದೆ. ಒಂದು ವೇಳೆ ಸಮಯ ಮೀರದರೆ ಕಾನೂನು ಕ್ರಮ ಕೈಗೊಳ್ಳುವುದಾಗಿ ಮೈಸೂರು ನಗರ ಪೊಲೀಸ್ ಆಯುಕ್ತ ರಮೇಶ್‌ ಬಾನೋತ್‌ ಹೇಳಿದ್ದಾರೆ.

ಗುರುವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮೈಸೂರಿನಲ್ಲಿ ವರ್ಷಾಚರಣೆಯನ್ನು ಸರ್ಕಾರ ನಿಗದಿಪಡಿಸಿರುವಂತೆ ಮಧ್ಯರಾತ್ರಿ 1 ಗಂಟೆಯೊಳಗೆ ಮುಗಿಸಬೇಕು. ಎಲ್ಲರೂ ಸಮಯ ಪಾಲಿಸಬೇಕು. ತಪ್ಪಿದ್ದಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುವುದು. ಹೋಟೆಲ್, ರೆಸ್ಟೋರೆಂಟ್, ಕ್ಲಬ್, ರೆಸಾರ್ಟ್, ಹೋಂ ಸ್ಟೇ, ಸರ್ವಿಸ್ ಅಪಾರ್ಟ್ಮೆಂಟ್, ಅಪಾರ್ಟ್ಮೆಂಟ್ ಅಸೋಸಿಯೇಷನ್, ಮಾಲ್ಸ್, ಸಂಘ ಸಂಸ್ಥೆಗಳು ರಾತ್ರಿ 1 ಗಂಟೆಗೆ ಕಾರ್ಯಕ್ರಮ ಮುಗಿಸುವುದು ಕಡ್ಡಾಯ ಎಂದು ಖಡಕ್ ಸೂಚನೆ ನೀಡಿದರು.

ಕಲ್ಲಡ್ಕ ಪ್ರಭಾಕರ್ ಭಟ್‌ರನ್ನು ಬಂಧಿಸಲ್ಲವೆಂದ ಸರ್ಕಾರ: ರಿಲೀಫ್‌ ಕೊಟ್ಟ ಹೈಕೋರ್ಟ್‌!

ನ್ಯೂ ಇಯರ್ ನೆಪದಲ್ಲಿ ಅಸಭ್ಯ ವರ್ತನೆ ತಡೆಯಲು 36 ವಿಶೇಷ ಕಾರ್ಯಪಡೆ ತಂಡ ರಚಿಸಲಾಗಿದೆ. ಮಹಿಳೆಯರ ರಕ್ಷಣೆಗಾಗಿ 8 ಸುರಕ್ಷತಾ ಪಿಂಕ್ ಗರುಡ (ಚಾಮುಂಡಿ ಪಡೆ), ನಗರದ ಪ್ರಮುಖ ಸ್ಥಳದಲ್ಲಿ ಶ್ವಾನದಳ ಮತ್ತು ವಿದ್ವಂಸಕ ಕೃತ್ಯ ತಡೆಗಾಗಿ 4 ತಂಡ ರಚಿಸಲಾಗಿದೆ. ಮೈಸೂರು ನಗರದಲ್ಲಿರುವ 59 ಸಿಸಿ ಟಿವಿ ಜತೆಗೆ ಹೆಚ್ಚುವರಿಯಾಗಿ 275 ಸಿಸಿಟಿವಿ ಅಳವಡಿಸಲಾಗಿದೆ. ಎಲ್ಲ ಸಿಸಿಟಿವಿಗಳನ್ನು ಪೊಲೀಸ್ ಕಂಟ್ರೋಲ್ ರೂಂ ಮೂಲಕ ಕಣ್ಗಾವಲು ಮಾಡಲಾಗುತ್ತದೆ. ವ್ಹೀಲಿಂಗ್, ಸ್ಪೀಡ್, ಕರ್ಕಶ ಶಬ್ದ, ಕುಡಿದು ವಾಹನ ಚಾಲನೆ ತಡೆಗಾಗಿ ಸಂಚಾರ ಪೊಲೀಸರು ಹಾಗೂ ತಜ್ಞರನ್ನೊಳಗೊಂಡ ಕ್ಷಿಪ್ರ ಪಡೆ ರಚಿಸಲಾಗಿದೆ. ರಿಂಗ್ ರೋಡ್‌ನಲ್ಲಿ 8 ಹೈವೇ ಪೆಟ್ರೋಲ್ ವಾಹನ ನಿಯೋಜಿಸಲಾಗಿದ್ದು, ಒಟ್ಟು 18 ಗರುಡ ವಾಹನಗಳ ಗಸ್ತು ತಿರುಗಲಿವೆ. ನಗರದ ಹೊರವಲಯದಲ್ಲಿ 12 ಕಡೆ ಚಕ್ ಪೊಸ್ಟ್ ನಿರ್ಮಿಸಲಾಗಿದ್ದು, ಕಿಡಿಗೇಡಿಗಳ ಮೇಲೆ ನಿಗಾ ವಹಿಸಲಾಗಿದೆ ಎಂದು ಹೇಳಿದರು.

ಹೊಸ ವರ್ಷ ಆಚರಣೆಯ ಕಾರ್ಯಕ್ರಮ ಆಯೋಜನೆಗಾಗಿ ನಗರ ಪೊಲೀಸ್ ಸಾಯಕ್ತರ ಕಚೇರಿಯಲ್ಲಿ ಅನುಮತಿ ಕಡ್ಡಾಯವಾಗಿದೆ. ಧ್ವನಿವರ್ಧಕ ಅಳವಡಿಸುವುದು ಪ್ರದೇಶಕ್ಕೆ ಮಾತ್ರ ಸೀಮಿತವಾಗಿರಬೇಕು. ಸಾಂಸ್ಕೃತಿಕ ಕಾರ್ಯಕ್ರಮದ ನೆಪದಲ್ಲಿ ಅಶ್ಲೀಲ ಅರಬೆತ್ತಲೆ ಮಾದಕ ವಸ್ತುಗಳ ಸೇವನೆ ಜೂಜಾಟ ನಿಷೇಧ ಮಾಡಲಾಗಿದೆ. ನ್ಯೂ ಇಯರ್‌ ಬಂದೋಬಸ್ತ್‌ಗಾಗಿ ಡಿಸಿಪಿ 3, ಎಸಿಪಿ 12, ಪಿಐ 30, ಎಎಸ್ಪಿ 70, ಹೆಚ್‌ಸಿ/ಪಿಸಿ 550 ಹಾಗೂ  80 ಪೇದೆಗಳನ್ನು ನಿಯೋಜಿಸಲಾಗಿದೆ. ಸಿಎಆರ್ 12 ತುಕಡಿ, ಕೇಸ್ಆರ್ಪಿ 4 ತಂಡ, ಕಮಾಂಡೋ ಪಡೆ 4, ಶ್ವಾನದಳ 4 ತಂಡ, ಎಎಸ್‌ಸಿವ4 ತಂಡ ಸಶಸ್ತ್ರ ಪಡೆಗಳು ಕಾರ್ಯ ನಿರ್ವಹಿಸಲಿವೆ ಎಂದರು.

ಹೈಸ್ಕೂಲ್‌ ವಿದ್ಯಾರ್ಥಿಯೊಂದಿಗೆ ಮುಖ್ಯ ಶಿಕ್ಷಕಿಯ ಖುಲ್ಲಂ ಖುಲ್ಲಾ ರೊಮ್ಯಾನ್ಸ್: ಅಮಾನತು ಮಾಡಿದ ಶಿಕ್ಷಣ ಇಲಾಖೆ!

ಹೊಸ ವರ್ಷದ ರಾತ್ರಿ ಚಾಮುಂಡಿ ಬೆಟ್ಟಕ್ಕೆ ನಿರ್ಬಂಧ ಮಾಡಲಾಗಿದೆ. ಚಾಮುಂಡಿ ಬೆಟ್ಟಕ್ಕೆ ಡಿ.31 ಸಂಜೆ 7ರವರೆಗೆ ಮಾತ್ರ ಪ್ರವೇಶ ನೀಡಲಾಗುತ್ತದೆ. ರಾತ್ರಿ 9ಕ್ಕೆ ತಾವರೆಕಟ್ಟೆ ಗೇಟ್ ಬಂದ್ ಮಾಡಲಾಗುತ್ತದೆ. ಚಾಮುಂಡಿ ಬೆಟ್ಟದಲ್ಲಿ ವಾಸಿಸುವ ಜನರಿಗೆ ಇದು ಅನ್ವಯಿಸುವುದಿಲ್ಲ. ಕಾನೂನು ಪಾಲಿಸಿ ಹೊಸ ವರ್ಷ ಆಚರಣೆ ಆಚರಿಸಿ. ಎಲ್ಲರಿಗೂ ಹೊಸ ವರ್ಷದ ಶುಭಾಶಯಗಳು ಎಂದು ಮೈಸೂರು ನಗರ ಪೊಲೀಸ್ ಆಯುಕ್ತ ರಮೇಶ್ ಬಾನೋತ್ ಶುಭಾಶಯ ಕೋರಿದ್ದಾರೆ.

Follow Us:
Download App:
  • android
  • ios