Mysuru : ಅರಣ್ಯ ಇಲಾಖೆ ಅಧಿಕಾರಿಗಳ ಮೇಲೆ ಸೂಕ್ತ ಕ್ರಮ ಕೈಗೊಳ್ಳಿ

ನರಭಕ್ಷಕ ಕ್ರೂರ ಪ್ರಾಣಿ ಚಿರತೆ ದಾಳಿ ನಡೆದು ತಿಂಗಳು ಕಳೆದರೂ ಚಿರತೆ ಹಿಡಿಯುವಲ್ಲಿ ವಿಫಲವಾಗಿರುವ ಅರಣ್ಯ ಇಲಾಖೆ ಅಧಿಕಾರಿಗಳ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಎಂ.ಎಲ…. ಹುಂಡಿ ಮಠಾಧ್ಯಕ್ಷ ಶ್ರೀ ಗೌರಿಶಂಕರ ಸ್ವಾಮೀಜಿ ಆಗ್ರಹಿಸಿದರು.

Mysuru  Take  action against forest department officials snr

ಟಿ. ನರಸೀಪುರ (ನ.30): ನರಭಕ್ಷಕ ಕ್ರೂರ ಪ್ರಾಣಿ ಚಿರತೆ ದಾಳಿ ನಡೆದು ತಿಂಗಳು ಕಳೆದರೂ ಚಿರತೆ ಹಿಡಿಯುವಲ್ಲಿ ವಿಫಲವಾಗಿರುವ ಅರಣ್ಯ ಇಲಾಖೆ ಅಧಿಕಾರಿಗಳ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಎಂ.ಎಲ…. ಹುಂಡಿ ಮಠಾಧ್ಯಕ್ಷ ಶ್ರೀ ಗೌರಿಶಂಕರ ಸ್ವಾಮೀಜಿ ಆಗ್ರಹಿಸಿದರು.

ಕ್ರೂರ ನರಭಕ್ಷಕ ಚಿರತೆ ಹಿಡಿಯುವಲ್ಲಿ ವಿಫಲವಾಗಿರುವ ವಲಯ ಅರಣ್ಯ ಇಲಾಖೆ ಮತ್ತು ತಾಲೂಕು ಆಡಳಿತದ ಬೇಜವಾಬ್ದಾರಿ ಖಂಡಿಸಿ ಪಟ್ಟಣದ ತಾಲೂಕು ವಲಯ ಅರಣ್ಯ ಇಲಾಖೆ ಕಚೇರಿ ಮುಂದೆ ಪ್ರತಿಭಟನೆಯನ್ನು (Protest)  ಉದ್ದೇಶಿಸಿ ಅವರು ಮಾತನಾಡಿದರು.

ತಾಲೂಕಿನ ಉಕ್ಕಲಗೆರೆ ಮಲ್ಲಿಕಾರ್ಜುನಸ್ವಾಮಿ ಬೆಟ್ಟದ ಸುತ್ತಮುತ್ತಲು ಚಿರತೆ (Leopard)  ಹಾವಳಿ ಹೆಚ್ಚಿದ್ದು ಜನರು ಭಯಭೀತರಾಗಿದ್ದಾರೆ. ಈ ಬಗ್ಗೆ ಜಿಲ್ಲಾಡಳಿತವಾಗಲಿ ಅಥವಾ ತಾಲೂಕು ಆಡಳಿತವಾಗಲಿ ಯಾವುದೇ ಕ್ರಮ ವಹಿಸದೆ ಕಣ್ಣೊರೆಸುವ ತಂತ್ರ ಮಾಡುತ್ತದೆ ಎಂದು ಅವರು ಆರೋಪಿಸಿದರು.

ಮುಂದುವರೆದು ಮಾತನಾಡಿದ ಅವರು ಚಿರತೆ ದಾಳಿಯಿಂದ ಮೃತಪಟ್ಟವಿದ್ಯಾರ್ಥಿ ಕುಟುಂಬಕ್ಕೆ ಶಾಸಕರು ಹೊರತುಪಡಿಸಿ ಜಿಲ್ಲಾ ಉಸ್ತುವಾರಿ ಸಚಿವರಾಗಲಿ ಅಥವಾ ಜಿಲ್ಲಾಮಟ್ಟದ ಅಧಿಕಾರಿಗಳಾಗಲಿ ಭೇಟಿಯಾಗಿ ಸಾಂತ್ವನ ಹೇಳಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ ಪ್ರತಿಭಟನಾ ನಿರಂತರನ್ನು ಉದ್ದೇಶಿ ಶಾಸಕ ಎಂ. ಅಶ್ವಿನ್‌ಕುಮಾರ್‌ ಮಾತನಾಡಿ, ಅರಣ್ಯಾಧಿಕಾರಿ ಎಸಿಎಫ್‌ ಶಿವರಾಮು ಅವರನ್ನು ತರಾಟೆಗೆ ತೆಗೆದುಕೊಂಡರು, ಎಷ್ಟುದಿನದಲ್ಲಿ ಕಾರ್ಯಾಚರಣೆ ನಡೆಸಿ ಚಿರತೆಗಳನ್ನು ಹಿಡಿಯುತ್ತೀರಿ ಎಂದು ಸ್ಥಳದಲ್ಲಿದ್ದ ಅರಣ್ಯ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ಚಿರತೆ ದಾಳಿ ವಿಚಾರವನ್ನು ಮುಂದೆ ನಡೆಯುವ ವಿಧಾನಸಭಾ ಅಧಿವೇಶದಲ್ಲಿ ಚರ್ಚಿಸಿ ಕೂಡಲೇ ಕ್ರಮ ವಹಿಸಲು ಮುಖ್ಯಮಂತ್ರಿಗಳ ಜೊತೆ ಮಾತನಾಡುತ್ತೇನೆ. ಚಿರತೆ ದಾಳಿಯಿಂದ ಮೃತಪಟ್ಟಮಂಜುನಾಥನ ಕುಟುಂಬಕ್ಕೆ 25 ಲಕ್ಷ ಪರಿಹಾರ ನೀಡಲು ಮುಖ್ಯಮಂತ್ರಿಗಳ ಜೊತೆ ಮಾತನಾಡುತ್ತೇನೆ ಎಂದರು. ಕ್ರೂರ ಮೃಗಗಳಿಂದ ಮೃತಪಟ್ಟಸಾಕು ಪ್ರಾಣಿಗಳಿಗೆ (ಹಸು, ಕುರಿ, ಮೇಕೆ) ಹೆಚ್ಚಿನ ಅನುದಾನ ನೀಡಲು ಸರ್ಕಾರದ ಜೊತೆ ಚರ್ಚಿಸಿ ಮಾತನಾಡುತ್ತೇನೆ ಎಂದರು.

ಚಿರತೆ ದಾಳಿಯಿಂದ ಸಾರ್ವಜನಿಕರು ಆತಂಕಕೊಳಗಾಗಿದ್ದು, ಕೂಡಲೇ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಪಟ್ಟಣದಲ್ಲಿ ಸಭೆ ನಡೆಸಿ ಸಾರ್ವಜನಿಕರಿಗೆ ಧೈರ್ಯ ತುಂಬಲು ಜಿಲ್ಲಾಧಿಕಾರಿಗಳಗೆ ಸೂಚನೆ ನೀಡುತ್ತೇನೆ ಎಂದರು.

ದಸಂಸ ಜಿಲ್ಲಾ ಸಂಚಾಲಕ ಚಂದ್ರಶೇಖರ್‌, ರೈತ ಸಂಘದ ರಾಜ್ಯ ಕಾರ್ಯದರ್ಶಿ ಮಂಜು ಕಿರಣ… ಮಾತನಾಡಿದರು.

ಅರಣ್ಯಾಧಿಕಾರಿಗಳಿಗೆ ಕರ್ನಾಟಕ ರಾಜ್ಯ ರೈತ ಸಂಘ. ಹಸಿರು ಸೇನೆ ಮತ್ತು ದಸಂಸ ವತಿಯಿಂದ ಶಾಸಕ ಎಂ. ಅಶ್ವಿನ್‌ಕುಮಾರ್‌ ನೇತೃತ್ವದಲ್ಲಿ ಬೇಡಿಕೆಗಳ ಮನವಿ ಸಲ್ಲಿಸಿದರು.

ಪ್ರತಿಭಟನೆಯಲ್ಲಿ ಹಲವಾರು ಮಠದ ಶ್ರೀ ಷಡಕ್ಷರ ದೇಶಕೇಂದ್ರ ಸ್ವಾಮೀಜಿ, ಕಳ್ಳಿಪುರ ಮಠದ ಶ್ರೀ ಗುರುಪಾದ ಸ್ವಾಮೀಜಿ, ನರಗ್ಯಾತನಹಳ್ಳಿ ಮಠದ ಶ್ರೀ ಶಿವಕುಮಾರ ಸ್ವಾಮೀಜಿ , ಸೇತುವೆ ಮಠದ ಶ್ರೀ ಸಹಜಾನಂದ ಸ್ವಾಮೀಜಿ, ಹಣಕೊಳ ಮಠದ ಶ್ರೀ ಚಿದ್ಗನ ಶಿವಾಚಾರ್ಯ ಸ್ವಾಮೀಜಿ, ರೈತ ಸಂಘದ ಜಿಲ್ಲಾಧ್ಯಕ್ಷ ವಿದ್ಯಾಸಾಗರ್‌, ಗೌರವಾಧ್ಯಕ್ಷ ಕೆ. ಜಿ. ಶಿವಪ್ರಸಾದ್‌, ಜಿಲ್ಲಾ ಸಂಘಟನಾ ಮಹಾದೇವಸ್ವಾಮಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಘು, ತಾಲೂಕು ಅಧ್ಯಕ್ಷ ಪ್ರದೀಪ್‌ ಇದ್ದರು.

ಚಿರತೆ ಸೆರೆ

ಮೈಸೂರು (ನ.4): ಇತ್ತೀಚಿನ‌ ದಿನಗಳಲ್ಲಿ‌ ಪ್ರಾಣಿಗಳು ಕಾಡಿನಿಂದ ನಾಡಿಗೆ ಬರುವ ಸಂಖ್ಯೆ ಹೆಚ್ಚಳವಾಗುತ್ತಿದೆ. ಇಂದು ಕೆ.ಆರ್ ನಗರ ಪಟ್ಟಣದಲ್ಲಿ ಬೆಳ್ಳಂ ಬೆಳ್ಳಗ್ಗೆ ಚಿರತೆ ಕಾಣಿಸಿಕೊಂಡಿದ್ದು ಸಿಕ್ಕ ಸಿಕ್ಕವರ ಮೇಲೆ ದಾಳಿಗೆ ಯತ್ನಿಸಿದೆ. ಅರಣ್ಯ ಇಲಾಖೆ‌ ಚಿರತೆ ಕಾರ್ಯಾಚರಣೆ ನಡೆಸಿ ಚಿರತೆ ಸೆರೆಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ನಡು ರಸ್ತೆಯಲ್ಲೇ ಕುಳಿತಿರುವ ಚಿರತೆ. ಜನರನ್ನ ಕಂಡು ಓಡುತ್ತಿರುವ ಚಿರತೆ. ರಸ್ತೆಯಲ್ಲಿ ಹೋಗುತ್ತಿದ್ದ ದ್ವಿಚಕ್ರ ವಾಹನ ಸವಾರನ ಮೇಲೆ‌ ದಾಳಿಗೆ ಯತ್ನಿಸಿದ ಚಿರತೆ ಈ ಎಲ್ಲಾ ದೃಶ್ಯಗಳು ಕಂಡು ಬಂದಿದ್ದು ಕೆ.ಆರ್ ನಗರ ಪಟ್ಟಣದಲ್ಲಿ. ಕಳೆದೆರೆಡು ದಿನಗಳಿಂದ ಕೆ.ಆರ್ ನಗರದಲ್ಲಿ ಚಿರತೆ ಕಾಣಿಸಿಕೊಂಡಿದ್ದು ಸಾರ್ವಜನಿಕರು ಭಯ‌ಬೀತರಾಗಿದ್ದರು. ನಿನ್ನೆ ರಾತ್ರಿ ಕೆ.ಆರ್ ನಗರದ ಹೆದ್ದಾರಿಯ ರಸ್ತೆ ಮಧ್ಯದಲ್ಲಿ ಚಿರತೆ ಕುಳಿತುಕೊಂಡಿರುವ ದೃಶ್ಯ ಮೊಬೈಲ್ ನಲ್ಲಿ ಸೆರೆಯಾಗಿತ್ತು. ಇಂದು ಬೆಳಗ್ಗೆ ಪಟ್ಟಣದ 18ನೇ ವಾರ್ಡ್ ನಲ್ಲಿ ಚಿರತೆ ಪ್ರತ್ಯಕ್ಷಗೊಂಡಿದೆ. ಕೆ.ಆರ್ ನಗರದಿಂದ ಮುಳ್ಳೂರಿಗೆ ಹೋಗುವ ದಾರಿಯಲ್ಲಿ ಚಿರತೆ ಕಂಡು ಸಾರ್ವಜನಿಕರು ಬೆಚ್ಚಿ ಬಿದಿದ್ದಾರೆ. ಜನರನ್ನ ಕಂಡ ಚಿರತೆ ಸಿಕ್ಕ ಸಿಕ್ಕವರ ಮೇಲೆ ದಾಳಿಗೆ ಮುಂದಾಯಿತು. ರಸ್ತೆಯಲ್ಲಿ ಹೋಗುತ್ತಿದ್ದ ದ್ವಿಚಕ್ರ ವಾಹನ ಸವಾರನ‌ಮೇಲೆ ದಾಳಿ ಮುಂದಾದ ಚಿರತೆಯನ್ನ ಅರಣ್ಯ ಇಲಾಖೆ ಸಿಬ್ಬಂದಿ ಕಲ್ಲಿನಿಂದ ಹೊಡೆಯಲು ಮುಂದಾದ್ರು. ಚಿರತೆ ಸಿಬ್ಬಂದಿಯ ಮೇಲೆ ಹಲ್ಲೆಗೆ ಯತ್ನಿಸಿತು. ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಇಬ್ಬರು ಸಾರ್ವಜನಿಕರಿಗೆ ಚಿರತೆ ದಾಳಿಯಿಂದ ಸಣ್ಣಪುಟ್ಟ ಗಾಯವಾಗಿದೆ.

ಚಿರತೆ ಪಟ್ಟಣಕ್ಕೆ ಬಂದಿರುವ ವಿಚಾರ ತಿಳಿದಿದ್ದ ಅರಣ್ಯ ಇಲಾಖೆ ಸಿಬ್ಬಂದಿ ಬೆಳಗ್ಗೆಯಿಂದಲೇ ಚಿರತೆ ಸೆರೆಗೆ ಅಲರ್ಟ್ ಆಗಿದ್ರು. ಚಿರತೆ ಕಾರ್ಯಾಚರಣೆ ಆರಂಭಿಸಿದ ಮೈಸೂರು ಮೃಗಾಲಯ ಸಿಬ್ಬಂದಿ ಹಾಗೂ ಕೆ.ಆರ್.ನಗರ ಅರಣ್ಯ ವಲಯ ಅಧಿಕಾರಿಗಳು ಖಾಲಿ ನಿವೇಶನಲ್ಲಿ ಅವಿತುಕೊಂಡಿದ್ದ ಚಿರತೆಗೆ ಅರವಳಿಕೆ ಮದ್ದು ನೀಡಿ ಚಿರತೆ ಸೆರೆಹಿಡಿಯುವಲ್ಲಿ ಯಶಸ್ವಿಯಾದ್ರು. ಇದಕ್ಕಾಗಿ ಶ್ರಮಿಸಿದ್ದ ಶಾಸಕ‌ ಸಾರಾ.ಮಹೇಶ್ ಜನರಿಗೆ ಆತಂಕ ಪಡದಂತೆ ಮನವಿ ಮಾಡಿಕೊಂಡ್ರು. ಚಿರತೆ ಕಾರ್ಯಾಚರಣೆಯಿಂದ ಕೆ.ಆರ್ ನಗರದ ಜನತೆ ನಿಟ್ಟುಸಿರು ಬಿಟ್ಟಿದ್ದಾರೆ. ಮುಂದಿನ ದಿನಗಳಲ್ಲಿ ಕಾಡಿನಿಂದ ನಾಡಿಗೆ ಪ್ರಾಣಿಗಳು ಬರದಂತೆ ಅರಣ್ಯ ಇಲಾಖೆ ಸಿಬ್ಬಂದಿ ಮುನ್ನೆಚ್ಚರಿಕೆ ವಹಿಸಬೇಕಿದೆ.

Latest Videos
Follow Us:
Download App:
  • android
  • ios