BJP ಪೋಸ್ಟರಲ್ಲಿ BSP ಉಚ್ಛಾಟಿತ ಶಾಸಕ ಎನ್.ಮಹೇಶ್ ಭಾವಚಿತ್ರ
ಚಾಮರಾಜನಗರದಲ್ಲಿ ಹಾಕಲಾಗಿದ್ದ ಫ್ಲೆಕ್ಸ್‌ಗಳಲ್ಲಿ ಕೊಳ್ಳೇಗಾಲದ ಬಿಎಸ್‌ಪಿ ಉಚ್ಛಾಟಿತ ಶಾಸಕ
ಚಾಮರಾಜನಗರ(ಜ.12): ಬಿಜೆಪಿ ಜನಸೇವಕ ಸಮಾವೇಶದ ಅಂಗವಾಗಿ ಚಾಮರಾಜನಗರದಲ್ಲಿ ಹಾಕಲಾಗಿದ್ದ ಫ್ಲೆಕ್ಸ್‌ಗಳಲ್ಲಿ ಕೊಳ್ಳೇಗಾಲದ ಬಿಎಸ್‌ಪಿ ಉಚ್ಛಾಟಿತ ಶಾಸಕ ಎನ್.ಮಹೇಶ್ ಅವರ ಚಿತ್ರ ಮುದ್ರಿಸಿರುವುದು ಹಲವು ಊಹಾಪೋಹಗಳಿಗೆ ಕಾರಣವಾಗಿದೆ.
ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಚಾಮರಾಜನಗರಕ್ಕೆ ಭೇಟಿ ನೀಡುತ್ತಿರುವಾಗಲೇ ಎನ್.ಮಹೇಶ್ ಅವರ ಫೋಟೋ ಹಾಕಿರುವುದು ಅಚ್ಚರಿ ಉಂಟು ಮಾಡಿದೆ. ಜನಸೇವಕ ಸಮಾವೇಶದಲ್ಲೇ ಮಹೇಶ್ ಬಿಜೆಪಿ ಸೇರುತ್ತಾರ ಎಂದು ಕೆಲವರು ಮಾಧ್ಯಮಗಳಿಗೆ ಕರೆ ಮಾಡಿ ವಿಚಾರಿಸುತ್ತಿದ್ದರು.
ಕಾಂಗ್ರೆಸ್ ನಾಲ್ಕೂಟೈರ್ ಪಂಕ್ಚರ್ ಆಗಿರೋ ಬಸ್‌ನಂತೆ: ಬೊಮ್ಮಾಯಿ ವ್ಯಂಗ್ಯ
ಒಟ್ಟಾರೆ ಯಾಗಿ ಅವರು ಶೀಘ್ರದಲ್ಲೇ ಬಿಜೆಪಿ ಸೇರ್ಪಡೆಯಾಗುತ್ತಾರೆ ಎಂಬ ಮಾತುಗಳಿಗೆ ಈ ಪ್ಲೆಕ್ಸ್ ಹಾಗೂ ಪೋಸ್ಟರ್ ಗಳು ಪುಷ್ಠಿ ನೀಡುತ್ತಿವೆ. ಸಂಕ್ರಾಂತಿ ನಂತರ ಸಿಹಿ ಸುದ್ದಿ ನೀಡುತ್ತೇನೆ ಎಂದು ಎನ್. ಮಹೇಶ್ ಹೇಳಿದ್ದರು. ಅದಕ್ಕೆ ಇಂಬು ನೀಡುವಂತೆ ಬಿಜೆಪಿ ಫ್ಲೆಕ್ಸ್‌ಗಳಲ್ಲಿ ಅವರ ಭಾವಚಿತ್ರವನ್ನು ಮುದ್ರಿಸಲಾಗಿದೆ ಎನ್ನಲಾಗುತ್ತಿದೆ.
ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬರಲು, ಕೊಳ್ಳೇಗಾಲದ ನಗರಸಭೆಯಲ್ಲಿ ಅಧಿಕಾರಕ್ಕೆ ಬರಲು ಮಹೇಶ್ ಸಹಕಾರ ನೀಡಿದ್ದಾರೆ. ಇನ್ನೂ ಕೆಲವು ಪಂಚಾಯ್ತಿಗಳಲ್ಲಿ ಅವರ ಬೆಂಬಲಿಗರಿಗೆ ನಮ್ಮ ಸಹಕಾರವೂ ಅಗತ್ಯವಾಗಿದೆ. ಹಾಗಾಗಿ ಜೊತೆಜೊತೆಯಾಗಿ ಹೋಗುತ್ತಿರುವುದರಿಂದ ಎನ್ ಮಹೇಶ್ ಅವರ ಭಾವಚಿತ್ರವನ್ನು ಹಾಕಿದ್ದೇವೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಆರ್.ಸುಂದರ್ ತಿಳಿಸಿದ್ದಾರೆ.