Asianet Suvarna News Asianet Suvarna News

ನಾಗಮಂಗಲ ಗಲಾಟೆ ಘಟನೆ ಪೂರ್ವಯೋಜಿತ ಕೃತ್ಯ: ಈಶ್ವರಪ್ಪ

ಮೆರವಣಿಗೆ ಮೇಲೆ ಪೆಟ್ರೋಲ್‌ ಬಾಂಬ್‌, ಕಲ್ಲು ತೂರಾಟ ಮಾಡಲಾಗಿದೆ. ಇತ್ತೀಚೆಗೆ ಕಾಂಗ್ರೆಸ್ ನಾಯಕ ಐವನ್‌ ಡಿಸೋಜಾ ಬಾಂಗ್ಲಾ ಮಾದರಿಯಲ್ಲಿ ರಾಜ್ಯದಲ್ಲಿ ಗಲಭೆ ನಡೆಯುತ್ತದೆ ಎಂಬ ಹೇಳಿಕೆ ನೀಡಿದ್ದರು. ಅದರಂತೆ ಪಾಕಿಸ್ತಾನ ಮನಸ್ಥಿತಿಯ ಮುಸ್ಲಿಮರು ಹಿಂದೂಗಳ ಮೇಲೆ ದಾಳಿ ಮಾಡಿದ್ದಾರೆ ಎಂದು ಕಿಡಿಕಾರಿದ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ 
 

Nagamangala Riot Incident Pre-planned says Former dcm KS Eshwarappa grg
Author
First Published Sep 13, 2024, 4:28 AM IST | Last Updated Sep 13, 2024, 4:28 AM IST

ಹುಬ್ಬಳ್ಳಿ(ಸೆ.13): ನಾಗಮಂಗಲದಲ್ಲಿ ಗಣೇಶೋತ್ಸವ ಸಂದರ್ಭದಲ್ಲಿ ನಡೆದ ಗಲಭೆ ಪೂರ್ವ ಯೋಜಿತ. ಪಾಕಿಸ್ತಾನ ಮನಸ್ಥಿತಿಯ ಮುಸ್ಲಿಮರು ಹಿಂದೂಗಳ ಮೇಲೆ ದಾಳಿ ನಡೆಸಿದ್ದಾರೆ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಆರೋಪಿಸಿದರು. 

ನಗರದಲ್ಲಿ ಗುರುವಾರ ಮಾಧ್ಯಮಗಳೊಂದಿಗೆ ಮಾತನಾಡಿ, ಮಹತ್ವದ ರಾಜಕೀಯ ಬೆಳವಣಿಗೆಗಳು ನಡೆಯುತ್ತಿರುವ ಸಂದರ್ಭದಲ್ಲೇ ರಾಷ್ಟ್ರದ್ರೋಹಿ ಚಟುವಟಿಕೆಗಳು ನಾಗಮಂಗಲದಲ್ಲಿ ನಡೆದಿದೆ. ಹಿಂದೂಗಳು ಸಾಮೂಹಿಕವಾಗಿ ಗಣೇಶ ವಿಸರ್ಜನೆ ಮಾಡುವ ಸಂದರ್ಭದಲ್ಲಿ ಮಸೀದಿ ಮುಂದೆ ಡೊಳ್ಳು ಬಾರಿಸಲಾಗಿದೆ ಎಂಬ ಕಾರಣಕ್ಕೆ ಮೆರವಣಿಗೆ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ಮಸೀದಿ ಎದುರಿಗೆ ಡೊಳ್ಳು ಬಾರಿಸಬಾರದೆಂಬ ನಿಯಮ ಏನಾದರೂ ಇದೆಯಾ? ಮಸೀದಿ ಎದುರಿಗೆ ಮೆರವಣಿಗೆ ನಡೆಸಬಾರದೆಂಬ ನಿಯಮವಿದೆಯಾ ಎಂದು ಪ್ರಶ್ನಿಸಿದರು. 

ಸರ್ಕಾರ ಬದುಕಿದೆಯೋ ಇಲ್ಲವೋ?: ಈಶ್ವರಪ್ಪ ಆಕ್ರೋಶ

ವಿಸರ್ಜನಾ ಮೆರವಣಿಗೆ ಯಾವ ಮಾರ್ಗದಲ್ಲಿ ತೆರಳುತ್ತದೆ ಎಂಬುದು ಪೊಲೀಸ್ ಇಲಾಖೆಗೆ ಗೊತ್ತೇ ಇರುತ್ತದೆ. ಮತ್ತೇಕೆ ರಕ್ಷಣೆ ಕೊಡಲಿಲ್ಲ ಎಂದು ಪ್ರಶ್ನಿಸಿದರು.

ಮೆರವಣಿಗೆ ಮೇಲೆ ಪೆಟ್ರೋಲ್‌ ಬಾಂಬ್‌, ಕಲ್ಲು ತೂರಾಟ ಮಾಡಲಾಗಿದೆ. ಇತ್ತೀಚೆಗೆ ಕಾಂಗ್ರೆಸ್ ನಾಯಕ ಐವನ್‌ ಡಿಸೋಜಾ ಬಾಂಗ್ಲಾ ಮಾದರಿಯಲ್ಲಿ ರಾಜ್ಯದಲ್ಲಿ ಗಲಭೆ ನಡೆಯುತ್ತದೆ ಎಂಬ ಹೇಳಿಕೆ ನೀಡಿದ್ದರು. ಅದರಂತೆ ಪಾಕಿಸ್ತಾನ ಮನಸ್ಥಿತಿಯ ಮುಸ್ಲಿಮರು ಹಿಂದೂಗಳ ಮೇಲೆ ದಾಳಿ ಮಾಡಿದ್ದಾರೆ ಎಂದು ಕಿಡಿಕಾರಿದರು.

ಗೃಹ ಸಚಿವರು ರಾಷ್ಟ್ರದ್ರೋಹಿ ಮುಸ್ಲಿಂ ಗೂಂಡಾಗಳ ವಿರುದ್ಧ ಕ್ರಮಕೈಗೊಳ್ಳತ್ತೇವೆ ಎಂಬ ಹೇಳಿಕೆ ಕೊಡಬೇಕಿತ್ತು. ಅದು ಬಿಟ್ಟು ಅಮಾಯಕರು ಭಯ ಬೀಳುವಂತೆ ಮಾಡಿದ್ದಾರೆ. ನಾಗಮಂಗಲದಲ್ಲಿ ನಡೆದ ಗಲಾಟೆ ಸಣ್ಣದು ಎಂಬ ಹೇಳಿಕೆ ಕೊಟ್ಟಿದ್ದಾರೆ ಎಂದು ಆಕ್ರೋಶ ಹೊರಹಾಕಿದರು.

Latest Videos
Follow Us:
Download App:
  • android
  • ios