ಶಿರಾಡಿ ಹಾಗೂ ಚಾರ್ಮಾಡಿ ಘಾಟ್‌ ಸೆಕ್ಷನ್‌ ಹೆದ್ದಾರಿ ಭೂಕುಸಿತ ಪ್ರದೇಶವನ್ನು ದುರಸ್ತಿಗೊಳಿಸಲು ಮನವಿ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಮನವಿ ಮಾಡಿದ ನಳಿನ್ ಕುಮಾರ್ ಕಟೀಲ್

ಮಂಗಳೂರು (ಆ.05): ದ.ಕ. ಜಿಲ್ಲೆಯ ಸರಹದ್ದಿನಲ್ಲಿರುವ ಶಿರಾಡಿ ಹಾಗೂ ಚಾರ್ಮಾಡಿ ಘಾಟ್‌ ಸೆಕ್ಷನ್‌ ಹೆದ್ದಾರಿ ಭೂಕುಸಿತ ಪ್ರದೇಶವನ್ನು ದುರಸ್ತಿಗೊಳಿಸಲು ಕೇಂದ್ರ ಹೆದ್ದಾರಿ ಇಲಾಖೆ ಸಚಿವ ನಿತಿನ್‌ ಗಡ್ಕರಿಯವರಿಗೆ ದ.ಕ. ಸಂಸದ ನಳಿನ್‌ ಕುಮಾರ್‌ ಕಟೀಲ್‌ ಅವರು ಮನವಿ ಸಲ್ಲಿಸಿದ್ದಾರೆ.

ಮಂಗಳೂರಿನಿಂದ ರಾಜ್ಯದ ಇತರೆ ಜಿಲ್ಲೆಗಳಿಗೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಘಾಟ್‌ ಹಾಗೂ ರಾಷ್ಟ್ರೀಯ ಹೆದ್ದಾರಿ 73ರ ಚಾರ್ಮಾಡಿ ಘಾಟ್‌ನಲ್ಲಿ ಇತ್ತೀಚೆಗಿನ ಭಾರಿ ಮಳೆಯಿಂದ ಭೂಕುಸಿತ ಉಂಟಾಗಿದೆ. ಇದರಿಂದಾಗಿ ರಸ್ತೆ ಸಂಪರ್ಕಕ್ಕೆ ಅಡಚಣೆಯಾಗಿದೆ. ಈ ಬಗ್ಗೆ ಕೇಂದ್ರ ಹೆದ್ದಾರಿ ಹಾಗೂ ಸಂಚಾರ ಸಚಿವ ನಿತಿನ್‌ ಗಡ್ಕರಿಯವರನ್ನು ದೆಹಲಿಯಲ್ಲಿ ಭೇಟಿಯಾಗಿದ್ದಾರೆ.

'ಆಡಿಯೋದ ಮಿಮಿಕ್ರೀ ಆರ್ಟಿಸ್ಟ್ ನಳಿನ್ ಕುಮಾರ್ ಕಟೀಲ್ ಎನ್ನುವುದು ಸಾಬೀತಾಯ್ತು'

 ಸಂಸದರ ಮನವಿಗೆ ಸಕರಾತ್ಮಕವಾಗಿ ಸ್ಪಂದಿಸಿದ ಸಚಿವ ಗಡ್ಕರಿ ಅವರು, ಬೇಡಿಕೆಗಳ ಬಗ್ಗೆ ಅಧಿಕಾರಿಗಳಿಗೆ ನಿರ್ದೇಶನ ನೀಡಿ ಶೀಘ್ರದಲ್ಲಿ ಈಡೇರಿಸುವ ಭರವಸೆ ನೀಡಿದ್ದಾರೆ ಎಂದು ಸಂಸದರ ಕಚೇರಿ ಪ್ರಕಟಣೆ ತಿಳಿಸಿದೆ.