ಕಾಂಗ್ರೆಸ್ ಮುಕ್ತ ಕರ್ನಾಟಕಕ್ಕೆ ಕಟೀಲ್ ಪಣ
ಗ್ರಾಪಂ ಚುನಾವಣೆಯಲ್ಲಿ ರಾಜ್ಯದಲ್ಲೇ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳೇ ಹೆಚ್ಚಿನ ಸಂಖ್ಯೆಯಲ್ಲಿ ಗೆಲುವು ಸಾಧಿಸಿದ್ದಾರೆ| 2023ರ ವಿಧಾನಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ 150 ಸ್ಥಾನಗಳಲ್ಲಿ ಗೆಲ್ಲುವ ಮೂಲಕ ಸ್ಪಷ್ಟಬಹುಮತದೊಂದಿಗೆ ಆಡಳಿತದ ಚುಕ್ಕಾಣಿ ಹಿಡಿಯಬೇಕು: ಕಟೀಲ್|
ಬೆಳಗಾವಿ(ಜ.18): ನಗರ ಕೇಂದ್ರೀಕೃತ ಪಕ್ಷವಾಗಿದ್ದ ಬಿಜೆಪಿ ಇದೀಗ ಹಳ್ಳಿ ಪಾರ್ಟಿಯಾಗಿ ಪರಿವರ್ತನೆಯಾಗಿದೆ. ಹಳ್ಳಿಹಳ್ಳಿಗಳಲ್ಲಿಯೂ ಈಗ ಗೆದ್ದಾಗಿದೆ. ಕಾಂಗ್ರೆಸ್ ಮುಕ್ತ ಕರ್ನಾಟಕ ನಿರ್ಮಿಸಲು ಪಣತೊಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹೇಳಿದರು.
"
ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಬಿಜೆಪಿ ಜನಸೇವಕ ಸಮಾವೇಶದಲ್ಲಿ ಅವರು ಮಾತನಾಡಿದರು. ಗ್ರಾಪಂ ಚುನಾವಣೆಯಲ್ಲಿ ರಾಜ್ಯದಲ್ಲೇ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳೇ ಹೆಚ್ಚಿನ ಸಂಖ್ಯೆಯಲ್ಲಿ ಗೆಲುವು ಸಾಧಿಸಿದ್ದಾರೆ ಎಂದು ಹೇಳಿದ್ದಾರೆ.
ಬಿಜೆಪಿಯಲ್ಲಿ ಕುಟುಂಬ ರಾಜಕಾರಣಕ್ಕೆ ಅಮಿತ್ ಶಾ ಬ್ರೇಕ್..!
ಜಿಪಂ, ತಾಪಂಗಳು ನಮ್ಮದಾಗಬೇಕಿದೆ. 2023ರ ವಿಧಾನಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ 150 ಸ್ಥಾನಗಳಲ್ಲಿ ಗೆಲ್ಲುವ ಮೂಲಕ ಸ್ಪಷ್ಟಬಹುಮತದೊಂದಿಗೆ ಆಡಳಿತದ ಚುಕ್ಕಾಣಿ ಹಿಡಿಯಬೇಕು ಎಂದು ತಿಳಿಸಿದ್ದಾರೆ.