Asianet Suvarna News Asianet Suvarna News

ಐಪಿಎಲ್ ಮ್ಯಾಚ್ ಪ್ರೇಕ್ಷಕರಿಗೆ ಗುಡ್‌ನ್ಯೂಸ್! ಪ್ರಯಾಣದ ಟೆನ್ಶನ್ ಬೇಡ!

ಕ್ರಿಕೆಟ್ ನೋಡಲು ಬರುವ ಕ್ರೀಡಾ ಪ್ರೇಮಿಗಳಿಗೆ ಬಿಎಂಆರ್‌ಸಿಎಲ್ ಗುಡ್ ನ್ಯೂಸ್ ನೀಡಿದೆ. ಬೆಂಗಳೂರಿನಲ್ಲಿ ಐಪಿಎಲ್ ಪಂದ್ಯ ನಡೆಯುವ ವೇಳೆ ಮಧ್ಯರಾತ್ರಿ 11.30 ರವರೆಗೆ ಮೆಟ್ರೋ ಸೇವೆ ವಿಸ್ತರಿಸಲು ನಿರ್ಧರಿಸಿದೆ. 

Namma Metro Bengaluru Ipl Tournament Match Day Metro Service Extended Till Late Night Which Days gvd
Author
First Published Apr 12, 2024, 6:19 PM IST

ಬೆಂಗಳೂರು (ಏ.12): ಕ್ರಿಕೆಟ್ ನೋಡಲು ಬರುವ ಕ್ರೀಡಾ ಪ್ರೇಮಿಗಳಿಗೆ ಬಿಎಂಆರ್‌ಸಿಎಲ್ ಗುಡ್ ನ್ಯೂಸ್ ನೀಡಿದೆ. ಬೆಂಗಳೂರಿನಲ್ಲಿ ಐಪಿಎಲ್ ಪಂದ್ಯ ನಡೆಯುವ ವೇಳೆ ಮಧ್ಯರಾತ್ರಿ 11.30 ರವರೆಗೆ ಮೆಟ್ರೋ ಸೇವೆ ವಿಸ್ತರಿಸಲು ನಿರ್ಧರಿಸಿದೆ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಐಪಿಎಲ್ ಮ್ಯಾಚ್ ಹಿನ್ನೆಲೆಯಲ್ಲಿ ಮೆಟ್ರೋ ಅವಧಿ ವಿಸ್ತರಣೆ ಮಾಡಿ ಬಿಎಂಆರ್ ಸಿಎಲ್ ಆದೇಶ ಹೊರಡಿಸಿದೆ. ಈ ಮೂಲಕ ಐಪಿಎಲ್ ಮ್ಯಾಚ್  ವೇಳೆ ಮೆಟ್ರೋ ಸಂಚಾರದ ಅವಧಿಯನ್ನು ಮಧ್ಯರಾತ್ರಿವರೆಗೂ ವಿಸ್ತರಿಸಿದೆ. 

ಏಪ್ರಿಲ್ 15, ಮೇ 4, 12 ಹಾಗೂ 18 ರಂದು ಬೆಂಗಳೂರಿನಲ್ಲಿ ಐಪಿಎಲ್ ಪಂದ್ಯಾವಳಿಗಳು ನಡೆಯಲಿವೆ. ಈ ಸಮಯದಲ್ಲಿ ಮೆಟ್ರೋ ಕೂಡಾ ಮಧ್ಯರಾತ್ರಿವರೆಗೆ ಸಂಚಾರ ನಡೆಸಲಿವೆ. ಜೊತೆಗೆ ಮೆಟ್ರೋ ನಿಲ್ದಾಣಗಳಲ್ಲಿ ರಿಟರ್ನ್ ಪೇಪರ್ ಟಿಕೆಟ್ ವಿತರಣೆ ಮಾಡಲಿದೆ. ಪಂದ್ಯದ ವೇಳೆ ಮಧ್ಯಾಹ್ನ 2 ಗಂಟೆಯಿಂದ ಎಲ್ಲಾ ನಿಲ್ದಾಣಗಳಲ್ಲಿ 50 ರುಪಾಯಿ ಪೇಪರ್ ಟಿಕೆಟ್ ಲಭ್ಯವಾಗಲಿದೆ. ಕಬ್ಬನ್ ಪಾರ್ಕ್ ಮತ್ತು ಎಂ.ಜಿ ರಸ್ತೆ ಮೆಟ್ರೋ ನಿಲ್ದಾಣದಲ್ಲಿ ಪೇಪರ್ ಟಿಕೆಟ್ ಗೆ ವ್ಯವಸ್ಥೆ ಮಾಡಲಾಗಿದೆ. ಪೇಪರ್ ಟಿಕೆಟ್ ಪಡೆದು ಎಲ್ಲಾ ಮೆಟ್ರೋ ನಿಲ್ದಾಣಕ್ಕೆ ಪ್ರಯಾಣ ಬೆಳೆಸಲು ಅವಕಾಶ ಕಲ್ಪಿಸಲಾಗಿದೆ. 

ನಾನು ಇನ್ನೂ ಸತ್ತಿಲ್ಲ, ಬದುಕಿದ್ದೇನೆ: ಮಲ್ಲಿಕಾರ್ಜುನ ಖರ್ಗೆ ಎಮೋಷನಲ್ ಭಾಷಣ!

ಈ ಟಿಕೆಟ್ ರಾತ್ರಿ 8 ರಿಂದ ದಿನದ ಸೇವೆಗಳು ಕೊನೆಗೊಳ್ಳುವವರೆಗೆ ಮಾನ್ಯವಾಗಿರುತ್ತದೆ. QR ಕೋಡ್ ಟಿಕೆಟ್‌ಗಳು, ಸ್ಮಾರ್ಟ್ ಕಾರ್ಡ್ ಗಳು ಮತ್ತು NCMC ಕಾರ್ಡ್‌ಗಳನ್ನು ಸಹ ಬಳಸಬಹುದು. ವಾಟ್ಸ್ ಆಪ್,ನಮ್ಮ ಮೆಟ್ರೋ ಆ್ಯಪ್,ಪೇ ಟಿಎಂ ಮೂಲಕ ಕ್ರಿಕೆಟ್ ಪಂದ್ಯದ ಆರಂಭಕ್ಕೆ ಮುಂಚಿತವಾಗಿ QR ಟಿಕೆಟ್‌ಗಳನ್ನು ಖರೀದಿಸಲು ಸಾರ್ವಜನಿಕರಿಗೆ ಅವಕಾಶ ನೀಡಲಾಗಿದೆ. ಟಿಕೆಟ್ ಕೌಂಟರ್‌ಗಳಲ್ಲಿ ಜನಸಂದಣಿಯನ್ನು ತಪ್ಪಿಸಲು ಪ್ರಯಾಣಿಕರು ಈ ಸೌಲಭ್ಯವನ್ನು ಬಳಸಿಕೊಳ್ಳುವಂತೆ ಸೂಚಿಸಲಾಗಿದೆ.

Follow Us:
Download App:
  • android
  • ios