ಬೆಂಗಳೂರಿನಿಂದ ರಾಮನಗರ ಜಿಲ್ಲೆಗೂ ಮೆಟ್ರೋ ವಿಸ್ತರಣೆ; ಡಿಸಿಎಂ ಡಿ.ಕೆ. ಶಿವಕುಮಾರ್ ತವರು ಜಿಲ್ಲೆಗೆ ಗುಡ್ ನ್ಯೂಸ್

ಸಿಲಿಕಾನ್ ಸಿಟಿ ಬೆಂಗಳೂರಿನಿಂದ ತುಮಕೂರು ಬಳಿಕ ಮತ್ತೊಂದು ಜಿಲ್ಲೆಗೆ ನಮ್ಮ ಮೆಟ್ರೋ ರೈಲು ಮಾರ್ಗ ವಿಸ್ತರಣೆಗೆ ಬಿಎಂಆರ್‌ಸಿಎಲ್ ಮುಂದಾಗಿದೆ.

Namma Metro extension from bengaluru to Ramanagara DK Shivakumar home district get good news sat

ಬೆಂಗಳೂರು (ಜು.24): ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತವರು ಜಿಲ್ಲೆ ರಾಮನಗರ ನಿವಾಸಿಗಳಿಗೆ  ಸರ್ಕಾರದಿಂದ ಗುಡ್ ನ್ಯೂಸ್ ಸಿಕ್ಕಿದೆ. ತುಮಕೂರು ಬಳಿಕ ಮತ್ತೊಂದು ಜಿಲ್ಲೆಗೆ ನಮ್ಮ ಮೆಟ್ರೋ ಸಂಚಾರ ಆರಂಭಿಸಲಾಗುತ್ತಿದೆ. ಈಗ ಬಿಎಂಆರ್‌ಸಿಎಲ್ ರಾಮನಗರ ಜಿಲ್ಲೆಗೂ ಮೆಟ್ರೋ ವಿಸ್ತರಣೆ ಮಾಡಲು ಮುಂದಾಗಿದೆ. ರಾಮನಗರಕ್ಕೆ ನಮ್ಮ ಮೆಟ್ರೋ ರೈಲು ಸಂಚಾರ ನಡೆಸಲಿದೆ ಎಂಬ ಮಾತು ಹಲವು ದಿನಗಳಿಂದ ಕೇಳಿ ಬರುತ್ತಿದೆ.

ಈ ನಡುವೆ ರಾಮನಗರ ಜಿಲ್ಲೆಯ ಬಿಡದಿಗೆ ಮೆಟ್ರೋ ರೈಲು ಸಂಪರ್ಕಕ್ಕೆ ಬಿಎಂಆರ್‌ಸಿಎಲ್ ಮೊದಲ ಹೆಜ್ಜೆ ಇಟ್ಟಿದೆ. ಇದಕ್ಕಾಗಿ ವರದಿ ತಯಾರು ಮಾಡಲು ಬಿಎಂಆರ್‌ಸಿಎಲ್‌ ಟೆಂಡರ್ ಕರೆದಿದೆ. ಬೆಂಗಳೂರು ಮೆಟ್ರೋ ಸಂಸ್ಥೆಯಿಂದ ಜುಲೈ 9ರಂದು 1.59 ಕೋಟಿ ರೂ.ಗಳ ಟೆಂಡರ್ ಕರೆದಿದೆ. ಒಟ್ಟು ಮೂರು ಮಾರ್ಗದಲ್ಲಿ ನಮ್ಮ ಮೆಟ್ರೋ ಯೋಜನೆಯನ್ನು ವಿಸ್ತರಣೆ ಮಾಡಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಈ ಬಗ್ಗೆ ಅಧ್ಯಯನ ವರದಿಯನ್ನು ತಯಾರು ಮಾಡಲು ಹೈದರಾಬಾದ್ ಮೂಲದ ಕಂಪನಿಗೆ ಟೆಂಡರ್ ನೀಡಲಾಗಿದೆ.

ರಣಭೀಕರ ಮಳೆಯಿಂದ ಉತ್ತರ ಕನ್ನಡದಲ್ಲಿ ಇನ್ನೂ ತಗ್ಗದ ಸಾವಿನ ಸರಣಿ; ಸ್ಥಳದಲ್ಲೇ ಅಪ್ಪಚ್ಚಿಯಾದ ಸ್ಕೂಟರ್ ಸವಾರ

ಈ ವರ್ಷದ ಫೆಬ್ರವರಿಯಲ್ಲಿ ಬಿಎಂಆರ್‌ಸಿಎಲ್ 50 ಕಿ.ಮೀ. ಮಾರ್ಗದಲ್ಲಿ ನಮ್ಮ ಮೆಟ್ರೋ ಯೋಜನೆ ವಿಸ್ತರಣೆ ಮಾಡಲಿದೆ. ಜೊತೆಗೆ, 68 ಕಿ.ಮೀ. ನೂತನ ಮಾರ್ಗ ನಿರ್ಮಾಣದ ಕುರಿತು ಮುಂದಡಿಯಿಟ್ಟಿದೆ. ಈ ಬಗ್ಗೆ ಅಧ್ಯಯನ ವರದಿಯನ್ನು ತಯಾರು ಮಾಡಲು ಟೆಂಡರ್ ಆಹ್ವಾನಿಸಿದ್ದ ನಮ್ಮ ಮೆಟ್ರೋ, ಸದ್ಯ ಕರೆದಿರುವ ಟೆಂಡರ್ ಅಂತಿಮ ಹಂತದಲ್ಲಿದೆ ಎಂದು ಬಿಎಂಆರ್‌ಸಿಎಲ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಆದರೆ, ರಾಮನಗರ ಜಿಲ್ಲೆಯ ಮೆಟ್ರೋ ಮಾರ್ಗ ಹೇಗಿರಲಿದೆ ಎಂಬ ಕುತೂಹಲ ಉಂಟಾಗಿದೆ.

ಮೊರಾರ್ಜಿ ವಸತಿ ಶಾಲೆಯಲ್ಲಿ ಹಲ್ಲಿ ಬಿದ್ದ ಪಲಾವ್‌ ತಿಂದು 45 ಮಕ್ಕಳು ಅಸ್ವಸ್ಥ; ಇಬ್ಬರ ಸ್ಥಿತಿ ಗಂಭೀರ

ಬಿಎಂಆರ್‌ಸಿಎಲ್ ವರದಿ ಪ್ರಕಾರ ವಿಸ್ತರಿತ ಮಾರ್ಗದಲ್ಲಿ ಚಲ್ಲಘಟ್ಟ-ಬಿಡದಿ 15 ಕಿ.ಮೀ ಹಾಗೂ ಸಿಲ್ಕ್ ಇನ್ಸಿಟಿಟ್ಯೂಟ್-ಹಾರೋಹಳ್ಳಿ 24 ಕಿ.ಮೀ., ಬೊಮ್ಮಸಂದ್ರ-ಅತ್ತಿಬೆಲೆ 11 ಕಿ.ಮೀ ಮಾರ್ಗವಿದೆ. ಕಾಳೇನ ಅಗ್ರಹಾರ-ಕಾಡುಗೋಡಿ ಟ್ರೀ ಪಾರ್ಕ್ ವಯಾ ಜಿಗಣಿ, ಅನೇಕಲ್, ಅತ್ತಿಬೆಲೆ, ಸರ್ಜಾಪುರ ಮತ್ತು ವರ್ತೂರು (52.41 ಕಿ.ಮೀ.) ಹೊಸ ಮಾರ್ಗ ಕೂಡ ಸೇರಿದೆ.

Latest Videos
Follow Us:
Download App:
  • android
  • ios