Namma Metro: ನೇರಳೆ ಮಾರ್ಗದಲ್ಲಿ ಹಳಿ ಮೇಲೆ ಬಿದ್ದ ಮರ ತೆರವು: ಮೆಟ್ರೋ ಸಂಚಾರ ಪುನರಾರಂಭ!
ನಗರದಲ್ಲಿ ನಮ್ಮ ಮೆಟ್ರೋ ಹಳಿ ಮೇಲೆ ಇಂದು ಬೆಳಿಗ್ಗೆ 6.15 ರ ಸುಮಾರಿಗೆ ಮರ ಬಿದ್ದ ಹಿನ್ನೆಲೆಯಲ್ಲಿ ಮೆಟ್ರೋ ಸಂಚಾರದಲ್ಲಿ ವ್ಯತ್ಯಯವಾಗಿತ್ತು. ಸದ್ಯ ಮೆಟ್ರೋ ಹಳಿ ಮೇಲೆ ಬಿದ್ದಿದ್ದ ಮರವನ್ನು ಸಿಬ್ಬಂದಿಗಳು ತೆರವುಗೊಳಿಸಿದ್ದು, ನೇರಳೆ ಮಾರ್ಗದಲ್ಲಿ ಎಂದಿನಂತೆ ಮೆಟ್ರೋ ಸಂಚಾರ ಬೆಳಗ್ಗೆ 8.05 ರಿಂದ ಆರಂಭವಾಗಿದೆ.
ಬೆಂಗಳೂರು (ಅ.16): ನಗರದಲ್ಲಿ ನಮ್ಮ ಮೆಟ್ರೋ ಹಳಿ ಮೇಲೆ ಇಂದು ಬೆಳಿಗ್ಗೆ 6.15 ರ ಸುಮಾರಿಗೆ ಮರ ಬಿದ್ದ ಹಿನ್ನೆಲೆಯಲ್ಲಿ ಮೆಟ್ರೋ ಸಂಚಾರದಲ್ಲಿ ವ್ಯತ್ಯಯವಾಗಿತ್ತು. ಸದ್ಯ ಮೆಟ್ರೋ ಹಳಿ ಮೇಲೆ ಬಿದ್ದಿದ್ದ ಮರವನ್ನು ಸಿಬ್ಬಂದಿಗಳು ತೆರವುಗೊಳಿಸಿದ್ದು, ನೇರಳೆ ಮಾರ್ಗದಲ್ಲಿ ಎಂದಿನಂತೆ ಮೆಟ್ರೋ ಸಂಚಾರ ಬೆಳಗ್ಗೆ 8.05 ರಿಂದ ಆರಂಭವಾಗಿದೆ.
ಏನಾಗಿತ್ತು?: ಭಾರೀ ಮಳೆಗೆ ಇಂದು ಬೆಳಿಗ್ಗೆ 6.15 ರ ಸುಮಾರಿಗೆ ನೇರಳೆ ಮಾರ್ಗದ ಎಸ್‌ವಿ ರಸ್ತೆ ಮತ್ತು ಇಂದಿರಾನಗರ ನಡುವೆ ಹಳಿಯ ಮೇಲೆ ಮರ ಬಿದ್ದಿತ್ತು. ಪರಿಣಾಮವಾಗಿ ಮೆಟ್ರೋ ಸಂಚಾರಕ್ಕೆ ತಾತ್ಕಾಲಿಕವಾಗಿ ಅಡ್ಡಿಯಾಗಿತ್ತು. ಸದ್ಯ ನೇರಳೆ ಮಾರ್ಗದ ಬೈಯಪ್ಪನಹಳ್ಳಿಯಿಂದ ವೈಟ್ ಫೀಲ್ಡ್ ಮತ್ತು ಎಂ ಜಿ ರಸ್ತೆಯಿಂದ ಚಲ್ಲಘಟ್ಟ ನಡುವೆ ಮಾತ್ರ ರೈಲುಗಳು ಮಾತ್ರ ಸಂಚಾರ ಮಾಡುತ್ತಿದ್ದವು.
ವಿದ್ಯುತ್ ಪಡೆದು ಹಣ ನೀಡದ ಎಸ್ಕಾಂಗಳಿಗೆ ಕೆಇಆರ್‌ಸಿ ಎಚ್ಚರಿಕೆ
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಫೋಸ್ಟ್ ಮಾಡಿರುವ ಬಿಎಂಆರ್ಸಿಎಲ್ ಮುಖ್ಯ ಸಾರ್ವಜನಿಕ ಸಂಪರ್ಕ ಆಧಿಕಾರಿ, ಇಂದು ಬೆಳಿಗ್ಗೆ 6.15 ಗಂಟೆ ಸುಮಾರಿಗೆ ನೇರಳೆ ಮಾರ್ಗದಲ್ಲಿನ ಎಸ್‌ವಿ ರಸ್ತೆ ಮತ್ತು ಇಂದಿರಾನಗರ ನಡುವೆ ಹಳಿಯ ಮೇಲೆ ಒಂದು ಮರ ಬಿದ್ದ ಕಾರಣ ಕಾರ್ಯಾಚರಣೆ ತಾತ್ಕಾಲಿಕವಾಗಿ ಅಡ್ಡಿಯಾಗಿದೆ ಎಂದು ತಿಳಿಸಿದ್ದರು. ಈ ಸಮಯದಲ್ಲಿ ನೇರಳೆ ಮಾರ್ಗದ ಬೈಯಪ್ಪನಹಳ್ಳಿ ಮತ್ತು ವೈಟ್ ಫೀಲ್ಡ್ ಹಾಗೂ ಎಂ ಜಿ ರಸ್ತೆ ಮತ್ತು ಚಲ್ಲಘಟ್ಟ ನಡುವೆ ಮಾತ್ರ ರೈಲುಗಳು ಓಡುತ್ತಿವೆ, ತೆರವು ಕಾರ್ಯಾಚರಣೆ ನಡೆಸಲಾಗುತ್ತಿದೆ. ಪ್ರಯಾಣಿಕರಿಗೆ ಇದರಿಂದಾಗಿರುವ ಅನಾನುಕೂಲತೆಗಾಗಿ ವಿಷಾದಿಸಲಾಗಿದೆ ಎಂದು ತಿಳಿಸಿದ್ದರು.