ಮೆಟ್ರೋ 2: 1342 ಮರಗಳ ಕತ್ತರಿಸಲು ಹೈಕೋರ್ಟ್‌ ಅಸ್ತು

ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಎರಡನೇ ಹಂತದ ಮೆಟ್ರೋ ರೈಲು ಮಾರ್ಗ ನಿರ್ಮಾಣ ಯೋಜನೆಗೆ ಒಟ್ಟು 1,342 ಮರಗಳನ್ನು ಕತ್ತರಿಸಲು ಬಿಎಂಆರ್‌ಸಿಎಲ್‌ಗೆ ಹೈಕೋರ್ಟ್‌ ಅನುಮತಿ ನೀಡಿದೆ. 

namma metro work karnataka hc permitted bmrcl to cut 1342 trees to under take work gvd

ಬೆಂಗಳೂರು (ಏ.21): ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಎರಡನೇ ಹಂತದ ಮೆಟ್ರೋ ರೈಲು (Namma Metro) ಮಾರ್ಗ ನಿರ್ಮಾಣ ಯೋಜನೆಗೆ ಒಟ್ಟು 1,342 ಮರಗಳನ್ನು ಕತ್ತರಿಸಲು ಬಿಎಂಆರ್‌ಸಿಎಲ್‌ಗೆ (BMRCL) ಹೈಕೋರ್ಟ್‌ (High Court) ಅನುಮತಿ ನೀಡಿದೆ. ಮೆಟ್ರೋ ಕಾಮಗಾರಿಗಾಗಿ ನಗರದಲ್ಲಿ ಮರಗಳನ್ನು ಕಡಿಯುವುದನ್ನು ಆಕ್ಷೇಪಿಸಿ ಟಿ.ದತ್ತಾತ್ರೇಯ ದೇವರೆ ಎಂಬುವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ರಿತುರಾಜ್‌ ಅವಸ್ಥಿ ನೇತೃತ್ವದ ವಿಭಾಗೀಯ ಪೀಠ ಈ ಆದೇಶ ಮಾಡಿತು.

ಇದರಿಂದ ಕಾಮಗಾರಿ ನಡೆಯುವ ಕಸ್ತೂರಿ ನಗರ ಮತ್ತು ಕೆಂಪಾಪುರ ಹೊರವರ್ತುಲ ರಸ್ತೆ ಹಾಗೂ ವೆಲ್ಲಾರ ಜಂಕ್ಷನ್‌ಯಿಂದ ರಾಷ್ಟ್ರೀಯ ಮಿಲಿಟರಿ ಶಾಲೆಯ ನಡುವಿನ ರಸ್ತೆಯಲ್ಲಿರುವ 1,342 ಮರ ಕತ್ತರಿಸಲು ಅವಕಾಶ ದೊರಕಿದಂತಾಗಿತೆ. ವಿಚಾರಣೆ ವೇಳೆ ಬಿಎಂಆರ್‌ಸಿಎಲ್‌ ಪರ ವಕೀಲರು, 2022ರ ಮಾರ್ಚ್ 8ರಂದು ಮರ ತಜ್ಞರ ಸಮಿತಿಯ ವರದಿ ನೀಡಿತ್ತು. ಅದನ್ನು ಆಧರಿಸಿ ಕಸ್ತೂರಿ ನಗರ ಮತ್ತು ಕೆಂಪಾಪುರದ ಹೊರವರ್ತುಲ ರಸ್ತೆಯಲ್ಲಿ ಬರುವ ಮರಗಳ ಸ್ಥಳಾಂತರ ಮತ್ತು ತೆರವಿಗೆ ಬಿಬಿಎಂಪಿ ಮರಗಳ ಅಧಿಕಾರಿ ಮತ್ತು ಉಪ ಅರಣ್ಯ ಸಂರಕ್ಷಣಾಧಿಕಾರಿ ಒಪ್ಪಿಗೆ ನೀಡಿದ್ದಾರೆ ಎಂದು ನ್ಯಾಯಪೀಠಕ್ಕೆ ತಿಳಿಸಿದರು.

ಗುತ್ತಿಗೆದಾರ ಸಂತೋಷ್‌ ರೀತಿ ಇನ್ನೂ ಎಷ್ಟು ಜನ ಸಾಯ್ಬೇಕು?: ಬಿಬಿಎಂಪಿಗೆ ಹೈಕೋರ್ಟ್‌ ತರಾಟೆ

ಈ ಹೇಳಿಕೆ ದಾಖಲಿಸಿಕೊಂಡ ನ್ಯಾಯಪೀಠ, ಕಸ್ತೂರಿ ನಗರ ಮತ್ತು ಕೆಂಪಾಪುರ ಹೊರವರ್ತುಲ ರಸ್ತೆ ನಡುವೆ 1,334 ಮರಗಳನ್ನು ಕಡಿಯಲು, 163 ಮರ ಸ್ಥಳಾಂತರಿಸಲು ಹಾಗೂ 26 ಮರಗಳನ್ನು ಉಳಿಸಿಕೊಳ್ಳಲು ಅನುಮತಿ ನೀಡಿತು. ಹಾಗೆಯೇ, ವೆಲ್ಲಾರ್‌ ಜಂಕ್ಷನ್‌ನಿಂದ ರಾಷ್ಟ್ರೀಯ ಮಿಲಿಟರಿ ಶಾಲೆಯ ನಡುವಿನ ಮಾರ್ಗದಲ್ಲಿ 8 ಮರಗಳನ್ನು ಕತ್ತರಿಸಲು ಮತ್ತು 2 ಮರಗಳನ್ನು ಉಳಿಸಿಕೊಳ್ಳಲು ಅನುಮತಿ ನೀಡಿ ಆದೇಶಿಸಿತು.

ಸಿಲ್ಕ್‌ಬೋರ್ಡ್‌ನಿಂದ ಕೆ.ಆರ್‌.ಪುರ ಮತ್ತು ದೇವನಹಳ್ಳಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಸಂಪರ್ಕಿಸುವ 58 ಕಿ.ಮೀ. ಉದ್ದದ ಮೆಟ್ರೋ ಕಾಮಗಾರಿಗೆ 4,400 ಮರಗಳು ಬಲಿಯಾಗಲಿವೆ ಅಥವಾ ಎತ್ತಂಗಡಿ ಆಗಲಿವೆ ಎಂದು ಮೆಟ್ರೋ ನಿಗಮ ಅಂದಾಜಿಸಿತ್ತು. ಅದರಂತೆ ಮೆಟ್ರೋ ಕಾಮಗಾರಿಯ ಫೇಸ್‌-2 ಬಿ (ಕೆ.ಆರ್‌.ಪುರದಿಂದ ದೇವನಹಳ್ಳಿ ವಿಮಾನ ನಿಲ್ದಾಣ)ನಲ್ಲಿ ಬರುವ ಹೊರ ವರ್ತುಲ ರಸ್ತೆಯ ಕಸ್ತೂರಿ ನಗರ ಮತ್ತು ಕೆಂಪಾಪುರ ನಡುವಿನ 10 ಕಿ.ಮೀ. ಅಂತರದಲ್ಲಿ 1,507 ಮರಗಳನ್ನು ಕತ್ತರಿಸಲು ಮೆಟ್ರೋ ನಿಗಮ ಸಿದ್ಧತೆ ನಡೆಸಿತ್ತು. ಆದರೆ ಈಗ 1,334 ಮರಗಳನ್ನು ಕತ್ತರಿಸಲು ಅನುಮತಿ ಸಿಕ್ಕಿದೆ.

Potholes: ಬೆಂಗ್ಳೂರಿನ ಗುಂಡಿ ಮುಚ್ಚುವ ಆದೇಶಕ್ಕೆ ಇಂದೇ ಡೆಡ್‌ಲೈನ್‌..!

ಕಸ್ತೂರಿ ನಗರ ಮತ್ತು ಕೆಂಪಾಪುರ ಮಾರ್ಗದ ಮಧ್ಯೆ ಹೊರಮಾವು, ಎಚ್‌ಆರ್‌ಬಿಆರ್‌ ಬಡಾವಣೆ, ಕಲ್ಯಾಣ ನಗರ, ಎಚ್‌ಬಿಆರ್‌ ಬಡಾವಣೆ, ನಾಗವಾರ, ವೀರಣ್ಣಪಾಳ್ಯ ನಿಲ್ದಾಣಗಳು ಬರಲಿವೆ. 2024ರೊಳಗೆ ಕಾಮಗಾರಿ ಮುಗಿಸುವ ಇರಾದೆಯನ್ನು ಮೆಟ್ರೋ ನಿಗಮ ಹೊಂದಿದೆ. ಸದ್ಯ ಮೆಟ್ರೋ ಕಂಬಗಳನ್ನು ಹಾಕುವ ಕಾಮಗಾರಿ ನಡೆಯುತ್ತಿದೆ.

Latest Videos
Follow Us:
Download App:
  • android
  • ios