Asianet Suvarna News Asianet Suvarna News

ನಂಜನಗೂಡು : ಜೆಡಿಎಸ್ ಅಭ್ಯರ್ಥಿ ಸುಬ್ರಹ್ಮಣ್ಯ ನಾಮಪತ್ರ ಸಲ್ಲಿಕೆ

ನಗರಸಭೆಯ 20ನೇ ವಾರ್ಡ್ಗೆ ಡಿ.27 ರಂದು ನಡೆಯಲಿರುವ ಉಪಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಸುಬ್ರಹ್ಮಣ್ಯ ಶುಕ್ರವಾರ ಚುನಾವಣಾಧಿಕಾರಿ ಕೃಷ್ಣ ಅವರಿಗೆ ನಾಮಪತ್ರ ಸಲ್ಲಿಸಿದರು.

Nanjangudu  JDS candidate Subrahmanya submits nomination papers snr
Author
First Published Dec 16, 2023, 9:57 AM IST

ನಂಜನಗೂಡು :  ನಗರಸಭೆಯ 20ನೇ ವಾರ್ಡ್ಗೆ ಡಿ.27 ರಂದು ನಡೆಯಲಿರುವ ಉಪ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಸುಬ್ರಹ್ಮಣ್ಯ ಶುಕ್ರವಾರ ಚುನಾವಣಾಧಿಕಾರಿ ಕೃಷ್ಣ ಅವರಿಗೆ ನಾಮಪತ್ರ ಸಲ್ಲಿಸಿದರು.

ನಂತರ ಅವರು ಮಾತನಾಡಿ, ಕಳೆದ ಬಾರಿ ನಗರಸಭೆಗೆ ನಡೆದ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ 51 ಮತಗಳ ಅಂತರದಿಂದ ಪರಾಭವಗೊಂಡಿದ್ದೆ, ಈ ಬಾರಿ ಇದೇ ವಾರ್ಡ್ನಿಂದ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದೇನೆ, ಜೆಡಿಎಸ್ ಜಿಲ್ಲಾಧ್ಯಕ್ಷ ಎನ್. ನರಸಿಂಹಸ್ವಾಮಿ ಅವರ ನೇತೃತ್ವದಲ್ಲಿ ಚುನಾವಣೆ ಎದುರಿಸುತ್ತಿದ್ದೇನೆ, 20ನೇ ವಾರ್ಡಿನಲ್ಲಿ 850 ಮತದಾರರಿದ್ದು, ನೇರವಾಗಿ ಭೇಟಿಯಾಗಿ ಮತಯಾಚನೆ ಮಾಡುತ್ತಿದ್ದೇನೆ, ವಾರ್ಡ್ ನ ಮತದಾರರ ಆಶೀರ್ವಾದದಿಂದ ಈ ಬಾರಿ ಗೆಲ್ಲುವ ಅವಕಾಶವಿದೆ ಹೆಚ್ಚಾಗಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಜಿಲ್ಲಾಧ್ಯಕ್ಷ ಎನ್. ನರಸಿಂಹಸ್ವಾಮಿ, ತಾಲೂಕು ಅಧ್ಯಕ್ಷ ಆರ್.ವಿ. ಮಹದೇವಸ್ವಾಮಿ, ಸಂಜುಗೌಡ ಇದ್ದರು.

ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಗೆಲುವಿನ ಭರವಸೆ

 ನಂಜನಗೂಡು:  ನಂಜನಗೂಡು ವ್ಯಾಪ್ತಿಯಲ್ಲಿ ಕಳೆದ ಐದು ವರ್ಷಗಳ ಅವಧಿಯಲ್ಲಿ ಕೈಗೊಂಡಿರುವ ಅಭಿವೃದ್ಧಿ ಕಾಮಗಾರಿಗಳನ್ನು ಬೆಂಬಲಿಸಿ ನಗರಸಭೆ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಮತದಾರರು ಗೆಲ್ಲಿಸಿಕೊಡಲಿದ್ದಾರೆ ಎಂದು ಮಾಜಿ ಶಾಸಕ ಬಿ. ಹರ್ಷವರ್ಧನ್ ವಿಶ್ವಾಸ ವ್ಯಕ್ತಪಡಿಸಿದರು.

ಶುಕ್ರವಾರ ನಗರಸಭೆ 20ನೇ ವಾರ್ಡಿನ ಬಿಜೆಪಿ ಅಭ್ಯರ್ಥಿಯಾಗಿ ಉಪ ಚುನಾವಣೆಯಲ್ಲಿ ನಾಮಪತ್ರ ಸಲ್ಲಿಸಿದ ಪಿ. ಮಹೇಶ್ ಅತ್ತಿಖಾನೆ ಅವರೊಡನೆ ಪಟ್ಟಣದ ತಾಲೂಕು ಕಚೇರಿಗೆ ಆಗಮಿಸಿ ಅವರು ಮಾತನಾಡಿದರು.

ಕಳೆದ ಬಾರಿ ಸಹ ವಾರ್ಡಿನ ಮತದಾರರು ಬಿಜೆಪಿಯನ್ನು ಬೆಂಬಲಿಸಿದ್ದರು, ಉಪ ಚುನಾವಣೆಯಲ್ಲಿ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ವಕೀಲ ಮಹೇಶ್ ಅತ್ತಿಖಾನೆ ಶಿಕ್ಷಣ ಕ್ಷೇತ್ರದಲ್ಲಿ ಸುಮಾರು 15 ವರ್ಷಗಳಿಗೂ ಹೆಚ್ಚು ಕಾಲ ಸೇವೆ ಸಲ್ಲಿಸಿದ್ದು, ಅಭ್ಯರ್ಥಿ ಎಂಬ ಹಿರಿಮೆಯನ್ನು ಗಳಿಸಿದ್ದಾರೆ. ಅಭಿವೃದ್ಧಿಯನ್ನೇ ಮಾನದಂಡವಾಗಿಸಿಕೊಂಡು ಮತದಾರರ ಮನವೊಲಿಸಲಾಗುವುದು ಇನ್ನು ಉಪ ಚುನಾವಣೆಯಲ್ಲಿ ಪಕ್ಷದ ಕಾರ್ಯಕರ್ತರೆಲ್ಲರೂ ಒಟ್ಟಾಗಿ ಅಭ್ಯರ್ಥಿ ಪರ ಕೆಲಸ ನಿರ್ವಹಿಸಲಿದ್ದು ಮಹೇಶ್ ಅತ್ತಿಖಾನೆ ನಿಶ್ಚಿತವಾಗಿ ಗೆಲುವು ಸಾಧಿಸಲಿದ್ದಾರೆ ಎಂದರು.

ಪಿ. ಮಹೇಶ್ ಅತ್ತಿಖಾನೆ ಮಾತನಾಡಿ, ಕಳೆದ ಹಲವು ವರ್ಷಗಳಿಂದ ಬಿಜೆಪಿಯಲ್ಲಿ ತಳ ಮಟ್ಟದಲ್ಲಿ ಕೆಲಸ ನಿರ್ವಹಿಸಿದ್ದೇನೆ, ಮತದಾರರ ಸೇವೆ ಮಾಡುವ ಉದ್ದೇಶದೊಂದಿಗೆ ಪಕ್ಷದ ಕಾರ್ಯಕರ್ತರ ಬೆಂಬಲದೊಂದಿಗೆ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದು ಖಂಡಿತಾ ಮತದಾರರು ಬೆಂಬಲಿಸಲಿದ್ದಾರೆ ಎಂದರು.

ಬಿಜೆಪಿ ಜಿಲ್ಲಾಧ್ಯಕ್ಷೆ ಮಂಗಳಾ ಸೋಮಶೇಖರ್, ಜಿಪಂ ಮಾಜಿ ಸದಸ್ಯ ಸಿ. ಚಿಕ್ಕರಂಗನಾಯಕ, ಬಿಜೆಪಿ ಮಂಡಲ ಅಧ್ಯಕ್ಷ ಪಿ. ಮಹೇಶ್, ನಗರಾಧ್ಯಕ್ಷ ಶ್ರೀನಿವಾಸರೆಡ್ಡಿ, ವಿನಯ್ ಕುಮಾರ್, ಕೆ.ಜಿ. ಆನಂದ್, ಪ್ರೇಮಾ ಶಂಭಯ್ಯ, ಬಾಲಚಂದ್ರು, ಸಂಜಯ್ ಶರ್ಮಾ, ರಾಘವೇಂದ್ರ, ಉಮೇಶ್ ಮೋದಿ, ಎನ್.ಸಿ. ಬಸವಣ್ಣ, ಮಹೇಶ್ ಇದ್ದರು.

Follow Us:
Download App:
  • android
  • ios