Asianet Suvarna News Asianet Suvarna News

ಹುಬ್ಬಳ್ಳಿಗೆ ನಾಳೆ ಪ್ರಧಾನಿ ಮೋದಿ ಆಗಮನ: ಅವರಿಗಾಗಿ ಕಾದಿವೆ ವಿಶೇಷ ಉಡುಗೊರೆಗಳು

ಅವಳಿ ನಗರದಲ್ಲಿ ಬುಧವಾರದಿಂದ ಜನವರಿ 16 ರವರೆಗೆ ನಡೆಯಲಿರುವ 26 ನೇ ರಾಷ್ಟ್ರೀಯ ಯುವ ಜನೋತ್ಸವವನ್ನು ಉದ್ಘಾಟಿಸಲಿರುವ ಗೌರವಾನ್ವಿತ ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿ ಅವರಿಗೆ ಬಿದರಿ ಕಲೆಯಲ್ಲಿ ಅರಳಿದ ಸ್ವಾಮಿ ವಿವೇಕಾನಂದರ ಮನಮೋಹಕ ಮೂರ್ತಿಯನ್ನು ಸ್ಮರಣಿಯಾಗಿ ನೀಡಿ ಗೌರವಿಸಲಾಗುತ್ತಿದೆ. 

national youth festival in hubballi special gifts ready for pm narendra modi gvd
Author
First Published Jan 11, 2023, 10:57 PM IST

ಹುಬ್ಬಳ್ಳಿ (ಜ.11): ಅವಳಿ ನಗರದಲ್ಲಿ ಬುಧವಾರದಿಂದ ಜನವರಿ 16 ರವರೆಗೆ ನಡೆಯಲಿರುವ 26 ನೇ ರಾಷ್ಟ್ರೀಯ ಯುವ ಜನೋತ್ಸವವನ್ನು ಉದ್ಘಾಟಿಸಲಿರುವ ಗೌರವಾನ್ವಿತ ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿ ಅವರಿಗೆ ಬಿದರಿ ಕಲೆಯಲ್ಲಿ ಅರಳಿದ ಸ್ವಾಮಿ ವಿವೇಕಾನಂದರ ಮನಮೋಹಕ ಮೂರ್ತಿಯನ್ನು ಸ್ಮರಣಿಯಾಗಿ ನೀಡಿ ಗೌರವಿಸಲಾಗುತ್ತಿದೆ. 

ಹುಬ್ಬಳ್ಳಿಯಲ್ಲಿ ನಾಳೆ ಸಂಜೆ 4 ಗಂಟೆಗೆ ಯುವ ಜನೋತ್ಸವವನ್ನು ಉದ್ಘಾಟಿಸಲಿರುವ ಗೌರವಾನ್ವಿತ ಪ್ರಧಾನಮಂತ್ರಿ ಅವರನ್ನು ಜಿಲ್ಲಾಡಳಿತದಿಂದ ಗೌರವಪೂರ್ವಕವಾಗಿ ಸನ್ಮಾನಿಸಲಾಗುತ್ತಿದೆ. ಜನವರಿ 12 ಸ್ವಾಮಿ ವಿವೇಕಾನಂದರ ಜನ್ಮ ದಿನವೂ ಸಹ ಆಗಿರುವುದರಿಂದ ಅವರ ಸ್ಮರಣಾರ್ಥ ಬೀದರ್ ಜಿಲ್ಲೆಯ ಖ್ಯಾತಿಯನ್ನು ಜಗತ್ಪ್ರಸಿದ್ಧವಾಗಿಸಿದ ಬಿದರಿ ಕಲೆಯಲ್ಲಿ ನಿರ್ಮಿಸಿದ ಸುಂದರ ಮೂರ್ತಿಯನ್ನು ನೀಡಲಾಗುತ್ತಿದೆ. ಹಾವೇರಿಯಲ್ಲಿ ವಿಶೇಷವಾಗಿ ಏಲಕ್ಕಿ ಹಾರವನ್ನು ಸಿದ್ಧಪಡಿಸಲಾಗಿದೆ. 

ಶೀತ ಹೆಚ್ಚಾದ ಕಾರಣ ಹಿಪ್ಪುನೇರಳೆ ಬೆಳವಣಿಗೆ ಕುಂಠಿತ: ರೇಷ್ಮೆ ಬೆಳೆಗಾರರ ಆತಂಕ

ಏಲಕ್ಕಿ ಪೇಟ್ ಹೊಂದಿರುವ ಇದು ಏಲಕ್ಕಿಯ ಸುವಾಸನೆ ಬೀರುತ್ತದೆ. ಧಾರವಾಡದಲ್ಲಿ ಪ್ರಧಾನಿ ಅವರಿಗೆ ಹೊದಿಸಲೆಂದೇ ವಿಶೇಷವಾಗಿ ನೇಯಲಾದ ಕಸೂತಿ ಕಲೆ ಹೊಂದಿರುವ ಹಾಂಡ್ ಲೂಮ್  ಶಾಲು ಮತ್ತು ಧಾರವಾಡ ಜಿಲ್ಲೆಯ ಗರಗ ಹಾಗೂ ಬೆಂಗೇರಿಯಲ್ಲಿ ತಯಾರಿಸಲಾದ ದ್ವಜವನ್ನು ಟೀಕ್ ವುಡ್ ನಲ್ಲಿ ಧ್ವಜಕ್ಕೆ ಚೌಕಟ್ಟು ಹಾಕಿರುವ ಫ್ರೇಮ್ ಅನ್ನು ಉಡುಗೊರೆಯಾಗಿ ನೀಡಿ ಗೌರವಿಸಲಾಗುತ್ತಿದೆ.

Follow Us:
Download App:
  • android
  • ios