ಬೆಂಗಳೂರು(ಅ.18): ಮಹಾಲಕ್ಷ್ಮೀ ಲೇಔಟ್‌ ವಿಧಾನಸಭಾ ಕ್ಷೇತ್ರದ ನಂದಿನಿ ಲೇಔಟ್‌ನಲ್ಲಿ ಅ.18ರಿಂದ ಅ.26ರವರೆಗೆ 9 ದಿನಗಳ ಕಾಲ ‘ನವರಾತ್ರಿ ಹಾಗೂ ನಂದಿನಿ ಉತ್ಸವ’ ಹಮ್ಮಿಕೊಳ್ಳಲಾಗಿದೆ.

ಕಳೆದ 18 ವರ್ಷಗಳಿಂದ ನವರಾತ್ರಿ ಉತ್ಸವ ನಡೆಸಿಕೊಂಡು ಬರಲಾಗುತ್ತಿದೆ. ಪ್ರತಿ ವರ್ಷದಂತೆ ಈ ಬಾರಿಯೂ ಉತ್ಸವದ ಅಂಗವಾಗಿ ಹೋಮ, ಹವನ ಹಾಗೂ ಹರಿಕಥೆ ಸೇರಿದಂತೆ ಹಲವು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಆದರೆ, ಕೊರೋನಾ ಹಿನ್ನೆಲೆ ಸರಳ ಆಚರಣೆಗೆ ಒತ್ತು ನೀಡಲಾಗಿದೆ. ಉತ್ಸವದ ಮೊದಲ ದಿನ ದುರ್ಗಾ ಪರಮೇಶ್ವರಿ ದೇವಸ್ಥಾನದಲ್ಲಿ ಗಣ ಹೋಮ, ದೇವಿಯ ಮೂರ್ತಿ ಪ್ರತಿಷ್ಠಾಪನೆ ನಡೆಯಲಿದೆ. 

ನವರಾತ್ರಿಯಲ್ಲಿ ಈ ವಸ್ತುಗಳನ್ನು ದಾನ ಮಾಡಿ, ಧನ ಲಾಭ ಪಡೆಯಿರಿ..!

ಕೊನೆಯ ದಿನವಾದ ಸೋಮವಾರ (ಅ.26)ದಂದು ಚಂಡಿಕಾ ಹೋಮ ನಡೆಸಿ ದುರ್ಗಾದೇವಿ ಮೂರ್ತಿ ವಿಸರ್ಜಿಸಲಾಗುವುದು. ಪೂಜೆಗೆ ಬರುವ ಭಕ್ತಾದಿಗಳಿಗೆ ಮಾಸ್ಕ್‌, ಸಾಮಾಜಿಕ ಅಂತರ ಕಾಯ್ದುಕೊಳ್ಳುವಿಕೆ ಕಡ್ಡಾಯಗೊಳಿಸಲಾಗಿದೆ. ಗುಂಪು ಗುಂಪಾಗಿ ಸೇರದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಉತ್ಸವ ಸಮಿತಿ ಅಧ್ಯಕ್ಷ ಹಾಗೂ ಬಿಬಿಎಂಪಿ ಮಾಜಿ ಸದಸ್ಯ ಕೆ.ವಿ.ರಾಜೇಂದ್ರ ಕುಮಾರ್‌ ತಿಳಿಸಿದ್ದಾರೆ.