ಗೋವಾದ ಪಾರ್ಟಿಗೆ ಪೂರೈಸಲು ಇದನ್ನ ತರಿಸಿದ್ದರು. ಎನ್ ಸಿ ದಾಳಿ ವೇಳೆ ಸಿಕ್ಕಿ ಬಿದ್ದರು. ಹಾಗಾದ್ರೆ ಪೊಲೀಸರು ಸೀಜ್ ಮಾಡಿರೋ ಆ ವಸ್ತು ಏನು..? 

ಬೆಂಗಳೂರು [ಜ.12]: ಸಂಜಯನಗರದ ಸರ್ವಿಸ್‌ ಅಪಾರ್ಟ್‌ಮೆಂಟ್‌ವೊಂದರ ಮೇಲೆ ದಾಳಿ ನಡೆಸಿದ ಕೇಂದ್ರ ಮಾದಕ ದ್ರವ್ಯ ನಿಗ್ರಹ ದಳ (ಎನ್‌ಸಿಬಿ), ಮೂವರು ಮಾದಕ ವಸ್ತು ಪೂರೈಕೆದಾರರನ್ನು ಬಂಧಿಸಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಕೇರಳದ ಕಾಸರಗೋಡು ಮೂಲದ ಆಸಿಫ್‌ ಪುತನ್‌, ಮೌಸಿನ್‌ ಹಾಗೂ ಎಂ.ಡಿ.ಅಜರುದ್ದೀನ್‌ ಬಂಧಿತರಾಗಿದ್ದು, ಆರೋಪಿಗಳಿಂದ 1 ಕೆ.ಜಿ. ಚರಸ್‌, 500 ಗ್ರಾಂ ಮೆಥಾಂಫೆಟಮೈನ್‌ ವಶಪಡಿಸಿಕೊಳ್ಳಲಾಗಿದೆ. ವಿದೇಶದಿಂದ ಡ್ರಗ್ಸ್‌ ಖರೀದಿಸಿ ಕೆಲವರು, ಗೋವಾದಲ್ಲಿ ನಡೆಯುವ ಪಾರ್ಟಿಗಳಿಗೆ ಪೂರೈಕೆಗೆ ಸಿದ್ಧತೆ ನಡೆಸಿರುವ ಬಗ್ಗೆ ಮಾಹಿತಿ ಸಿಕ್ಕಿತು. ಈ ಸುಳಿವು ಬೆನ್ನು ಹತ್ತಿದ್ದಾಗ ಆರೋಪಿಗಳ ಸಿಕ್ಕಿಬಿದ್ದಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಮೂವರು ಹಲವು ದಿನಗಳಿಂದ ಡ್ರಗ್ಸ್‌ ಜಾಲದಲ್ಲಿ ಸಕ್ರಿಯವಾಗಿದ್ದು, ವಿದೇಶದಿಂದ ಚರಸ್‌ ಹಾಗೂ ಮೆಥಾಂಫೆಟಮೈನ್‌ ಸೇರಿದಂತೆ ಇತರೆ ಉತ್ಪನ್ನಗಳು ತರಿಸಿಕೊಳ್ಳುತ್ತಿದ್ದರು. ಬಳಿಕ ಅವುಗಳನ್ನು ಗೋವಾದಲ್ಲಿ ಆಯೋಜನೆಗೊಳ್ಳುವ ಪಾರ್ಟಿಗಳಲ್ಲಿ ವಿದ್ಯಾರ್ಥಿಗಳು ಹಾಗೂ ಯುವಕರಿಗೆ ಆರೋಪಿಗಳು ಸರಬರಾಜು ಮಾಡುತ್ತಿದ್ದರು. 

ಪೊಲೀಸರಿಗೆ ಮಾಹಿತಿ ಕೊಟ್ಟ ಮುಸ್ಲಿಂ ವ್ಯಕ್ತಿ: ಬೆಂಗಳೂರಲ್ಲಿ ಅಕ್ರಮ ಗೋ ಸಾಗಾಟ ಪತ್ತೆ...

ಈ ಬಗ್ಗೆ ಖಚಿತ ಮಾಹಿತಿ ಪಡೆದು ಬಂಧಿಸಲಾಯಿತು. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಹೆಚ್ಚಿನ ವಿಚಾರಣೆ ಸಲುವಾಗಿ ಕಸ್ಟಡಿಗೆ ಪಡೆಯಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.