ರಾಯಬಾಗ [ಆ.13]: ಪ್ರವಾಹದಲ್ಲಿ ಸಿಲುಕಿದ್ದ ಜನರ ರಕ್ಷಣೆಗೆ ಆಗಮಿಸಿದ್ದ ಎನ್‌ಡಿಆರ್‌ಎಫ್‌, ಸೇನೆ, ಎಸ್‌ಡಿಆರ್‌ಎಫ್‌ ಹಾಗೂ ಸ್ಥಳೀಯ ಪೊಲೀಸರು, ಬಕ್ರೀದ್‌ ಹಬ್ಬದ ಹಿನ್ನೆಲೆಯಲ್ಲಿ ನಡೆಯುತ್ತಿದ್ದ ಸಾಮೂಹಿಕ ಪ್ರಾರ್ಥನೆಯಲ್ಲಿ ಪಾಲ್ಗೊಂಡು ಭಾವೈಕ್ಯತೆ ಮೆರೆದಿದ್ದಾರೆ. 

ಈ ಮೂಲಕ ಎಂಥದ್ದೇ ಕಷ್ಟದ ಸಂದರ್ಭದಲ್ಲೂ ನಿಮ್ಮೊಂದಿಗೆ ನಾವಿದ್ದೇವೆ ಎಂದು ಧೈರ್ಯ ತುಂಬಿದ್ದಾರೆ.

ಕರ್ನಾಟಕ ಪ್ರವಾಹದ ಹೆಚ್ಚಿನ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ರಾಯಬಾಗ ತಾಲೂಕಿನ ಶಿರಗೂರ ಗ್ರಾಮದಲ್ಲಿ ಕೃಷ್ಣಾ ಪ್ರವಾಹದಲ್ಲಿ ಸಿಕ್ಕಿಹಾಕಿಕೊಂಡಿದ್ದ ಜನರನ್ನು ರಕ್ಷಣೆ ಮಾಡಲೆಂದು ರಕ್ಷಣಾ ಪಡೆ ಆಗಮಿಸಿತ್ತು. ಈ ವೇಳೆಯ ಕುಡಚಿ ಪಟ್ಟಣದ ಪಿ.ಎಂ.ತೋಟದ ಮಸೀದಿಯಲ್ಲಿ ಬಕ್ರೀದ್‌ ಹಬ್ಬದ ಹಿನ್ನೆಲೆಯಲ್ಲಿ ನಡೆಯುತ್ತಿದ್ದ ಪ್ರಾರ್ಥನೆಯಲ್ಲಿ, ರಕ್ಷಣಾ ಸಿಬ್ಬಂದಿ ಪಾಲ್ಗೊಂಡರು.