ಪ್ರಶ್ನೆಪತ್ರಿಕೆ ಸೋರಿಕೆ ಹಿನ್ನೆಲೆಯಲ್ಲಿ ವೈದ್ಯಕೀಯ ಕೋರ್ಸ್‌ಗಳ ಪ್ರವೇಶ ಪರೀಕ್ಷೆ ‘ನೀಟ್‌’ ರದ್ದಾದ ಬೆನ್ನಲ್ಲೇ, ಆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮ೧ಹತ್ಯೆ ಮಾಡಿಕೊಂಡಿರುವ ಘಟನೆ ಕಲಬುರಗಿಯಲ್ಲಿ ನಡೆದಿದೆ.

ಕಲಬುರಗಿ ಮೇ.24: ಪ್ರಶ್ನೆಪತ್ರಿಕೆ ಸೋರಿಕೆ ಹಿನ್ನೆಲೆಯಲ್ಲಿ ವೈದ್ಯಕೀಯ ಕೋರ್ಸ್‌ಗಳ ಪ್ರವೇಶ ಪರೀಕ್ಷೆ ‘ನೀಟ್‌’ ರದ್ದಾದ ಬೆನ್ನಲ್ಲೇ, ಆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮ೧ಹತ್ಯೆ ಮಾಡಿಕೊಂಡಿರುವ ಘಟನೆ ಕಲಬುರಗಿಯಲ್ಲಿ ನಡೆದಿದೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ನೀಟ್ ಪರೀಕ್ಷ ರದ್ದು; ರಾಜ್ಯದಲ್ಲಿ ಎರಡನೇ ದುರಂತ ಸಾವು

ನೀಟ್‌ ರದ್ದಾದ ನಂತರ ಆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ ಆತ್ಮ೧ಹತ್ಯೆ ಮಾಡಿಕೊಂಡ ರಾಜ್ಯದ 2ನೇ ಪ್ರಕರಣ ಇದಾಗಿದೆ. ಕೆಲವು ದಿನಗಳ ಹಿಂದೆ ಗೋವಾದಲ್ಲಿ ತರಬೇತಿಗೆಂದು ತೆರಳಿದ್ದ ವೇಳೆ ಬೆಂಗಳೂರಿನ ವಿದ್ಯಾರ್ಥಿಯೊಬ್ಬ ಸಾವಿಗೆ ಶರಣಾಗಿದ್ದ. ಕಲಬುರಗಿಯ ನಿವಾಸಿ ರಾಜಶೇಖರ್ ಅವರ ಪುತ್ರಿ ಭಾಗ್ಯಶ್ರೀ (18) ಮೃತಪಟ್ಟ ವಿದ್ಯಾರ್ಥಿನಿ. ಈಕೆ ಪಿಯುಸಿ ಪರೀಕ್ಷೆಯಲ್ಲಿ ಶೇಕಡ 92 ಅಂಕಗಳನ್ನು ಗಳಿಸಿ ತೇರ್ಗಡೆ ಆಗಿದ್ದಳು. ವೈದ್ಯಕೀಯ ಶಿಕ್ಷಣದ ಕನಸು ಕಂಡಿದ್ದ ಆಕೆ, ಮೇ 2ರಂದು ನೀಟ್ ಪರೀಕ್ಷೆ ಬರೆದಿದ್ದಳು.

ತಂದೆಯ ಕಣ್ಣೀರು:

ತಂದೆ ರಾಜಶೇಖರ್ ಅವರು ಕಣ್ಣೀರಿಡುತ್ತಾ ಅಳಲು ತೋಡಿಕೊಂಡಿದ್ದಾರೆ. ಆಕೆಗೆ ನೀಟ್ ಪರೀಕ್ಷೆಯ ಬಗ್ಗೆ ಬಹಳ ನಿರೀಕ್ಷೆಗಳಿದ್ದವು. ಆದರೆ ಒಳಗೊಳಗೇ ಪರೀಕ್ಷೆಯ ಫಲಿತಾಂಶದ ಬಗ್ಗೆ ಏನಾದರೂ ಆತಂಕ ಇತ್ತೋ ಏನೋ ತಿಳಿಯದು ಎಂದಿದ್ದಾರೆ.

. ಆಕೆ ಯಾವುದೇ ಡೆತ್‌ನೋಟ್ ಬರೆದಿಲ್ಲ, ಕಾರಣವನ್ನೂ ಹೇಳಿಲ್ಲ. ಕುಟುಂಬಸ್ಥರ ಜತೆ ತುಂಬಾ ಚೆನ್ನಾಗಿಯೇ ಇದ್ದಳು. ಇವಾಗ ಆಕೆಯೇ ನಮ್ಮನ್ನು ಬಿಟ್ಟು ಹೋಗಿದ್ದಾಳೆ, ನಾವು ಯಾರ ಮೇಲೆ ದೂರೋಣ? ನಾವು ಯಾರ ಮೇಲೆಯೂ ಅಪಾದನೆ ಮಾಡುವುದಿಲ್ಲ ಎಂದು ಅವರು ಅತ್ಯಂತ ದುಃಖದಿಂದ ನುಡಿದಿದ್ದಾರೆ. ನೀಟ್ ಪರೀಕ್ಷೆ ಬರೆದಿದ್ದ ಯುವತಿ ಮನೆಯಲ್ಲಿ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮ೧ಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಕೋರ್ಟ್ ವೃತ್ತದ ಬಳಿಯ ಅಪಾರ್ಟ್‌ಮೆಂಟ್‌ನಲ್ಲಿ ನಡೆದಿದೆ.

ಮೇ 2ರಂದು ನಡೆದಿದ್ದ ನೀಟ್‌ ಪರೀಕ್ಷೆಯನ್ನು ಪ್ರಶ್ನೆ ಪತ್ರಿಕೆ ಸೋರಿಕೆ ಆಗಿದ್ದರಿಂದ ಕೇಂದ್ರ ಸರ್ಕಾರ ಪರೀಕ್ಷೆಯನ್ನೇ ರದ್ದು ಮಾಡಿತ್ತು. ಇದಕ್ಕೆ ರಾಷ್ಟ್ರಾದ್ಯಂತ ಆಕ್ರೋಶ ವ್ಯಕ್ತವಾಗಿತ್ತು. ಕೆಲ ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದರು. ಕಲಬುರಗಿಯಲ್ಲಿ ನೀಟ್‌ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿನಿ ಆತ್ಮ೧ಹತ್ಯೆ ಮಾಡಿಕೊಂಡಿದ್ದಾಳೆ. ಇದರೊಂದಿಗೆ ರಾಜ್ಯದಲ್ಲಿ ಆತ್ಮ೧ಹತ್ಯೆ ಮಾಡಿಕೊಂಡ ಘಟನೆಯಲ್ಲಿ ಇದು ಎರಡನೇ ಘಟನೆ ಆಗಿದೆ. ಬೆಂಗಳೂರಿನ ವಿದ್ಯಾರ್ಥಿ ಗೋವಾದಲ್ಲಿ ತರಬೇತಿ ಪಡೆಯುತ್ತಿದ್ದು, ಆತ್ಮ೧ಹತ್ಯೆ ಮಾಡಿಕೊಂಡಿದ್ದ.