ನೇಹಾ ಕೊಲೆ ಪ್ರಕರಣ ಸಿಬಿಐ ತನಿಖೆಗೆ ಒಪ್ಪಿಸಲಿ: ವಿಜಯೇಂದ್ರ ಆಗ್ರಹ

ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಕಾಂಗ್ರೆಸ್ ಸರ್ಕಾರದ ಸಚಿವರ ಹೇಳಿಕೆಗಳನ್ನು ಗಮನಿಸಿದರೆ, ಪರೋಕ್ಷವಾಗಿ ಅಲ್ಪಸಂಖ್ಯಾತರಿಗೆ ಬೆಂಬಲ ನೀಡುತ್ತಿದ್ದಾರೆ ಎಂದು ಭಾಸವಾಗುತ್ತಿದೆ. ನೇಹಾ ಕೊಲೆ‌ ಪ್ರಕರಣದಲ್ಲಿ ಇನ್ನೂ ನಾಲ್ಕು ಮಂದಿ ಇದ್ದಾರೆ ಎಂದು ನೇಹಾ ಅವರ ತಂದೆ ನಿರಂಜನಯ್ಯ ಅವರೇ ಹೇಳುತ್ತಿದ್ದಾರೆ. ಈವರೆಗೂ ಪೊಲೀಸರು ಅವರನ್ನು ಬಂಧಿಸಿಲ್ಲ. ಸಿಐಡಿ ಅಧಿಕಾರಿಗಳು ಸಹ ವಿಚಾರಣೆಗೆ ಒಳಪಡಿಸಿಲ್ಲ.  ಇದನ್ನೆಲ್ಲ ಗಮನಿಸಿದರೆ ಮುಂದಿನ ದಿನಗಳಲ್ಲಿ ತನಿಖೆ ಯಾವ ದಿಕ್ಕಿನಲ್ಲಿ ಸಾಗಬಹುದು ಎನ್ನುವ ಅನುಮಾನ ಹುಟ್ಟಿದೆ: ಬಿ.ವೈ.ವಿಜಯೇಂದ್ರ 

Neha Murder case should be hand over to the CBI Says BJP State President BY Vijayendra grg

ಹುಬ್ಬಳ್ಳಿ(ಏ.23):  ನೇಹಾ ಪ್ರಕರಣದ ತನಿಖೆಯ ಬೆಳವಣಿಗೆ ಹಾಗೂ ಮುಖ್ಯಮಂತ್ರಿ, ಗೃಹ ಸಚಿವರ ಹೇಳಿಕೆ ಗಮನಿಸಿದರೆ ಸಿಐಡಿ ತನಿಖೆಯಿಂದ ನ್ಯಾಯ ಸಿಗುವ ಭರವಸೆಯಿಲ್ಲ. ರಾಜ್ಯ ಸರ್ಕಾರ ತಕ್ಷಣ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕು ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಆಗ್ರಹಿಸಿದ್ದಾರೆ. 

ಇಂದು(ಮಂಗಳವಾರ) ನಗರದ ಬಿಡನಾಳದಲ್ಲಿರುವ ನೇಹಾನಿವಾಸಕ್ಕೆ ಭೇಟಿ ನೀಡಿ, ಕುಟುಂಬದವರಿಗೆ ಸಾಂತ್ವನ ನೀಡಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಬಿ.ವೈ.ವಿಜಯೇಂದ್ರ ಅವರು, ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಕಾಂಗ್ರೆಸ್ ಸರ್ಕಾರದ ಸಚಿವರ ಹೇಳಿಕೆಗಳನ್ನು ಗಮನಿಸಿದರೆ, ಪರೋಕ್ಷವಾಗಿ ಅಲ್ಪಸಂಖ್ಯಾತರಿಗೆ ಬೆಂಬಲ ನೀಡುತ್ತಿದ್ದಾರೆ ಎಂದು ಭಾಸವಾಗುತ್ತಿದೆ. ನೇಹಾ ಕೊಲೆ‌ ಪ್ರಕರಣದಲ್ಲಿ ಇನ್ನೂ ನಾಲ್ಕು ಮಂದಿ ಇದ್ದಾರೆ ಎಂದು ನೇಹಾ ಅವರ ತಂದೆ ನಿರಂಜನಯ್ಯ ಅವರೇ ಹೇಳುತ್ತಿದ್ದಾರೆ. ಈವರೆಗೂ ಪೊಲೀಸರು ಅವರನ್ನು ಬಂಧಿಸಿಲ್ಲ. ಸಿಐಡಿ ಅಧಿಕಾರಿಗಳು ಸಹ ವಿಚಾರಣೆಗೆ ಒಳಪಡಿಸಿಲ್ಲ.  ಇದನ್ನೆಲ್ಲ ಗಮನಿಸಿದರೆ ಮುಂದಿನ ದಿನಗಳಲ್ಲಿ ತನಿಖೆ ಯಾವ ದಿಕ್ಕಿನಲ್ಲಿ ಸಾಗಬಹುದು ಎನ್ನುವ ಅನುಮಾನ ಹುಟ್ಟಿದೆ. ಯಾರು ಕೂಡ ಈ ಪ್ರಕರಣವನ್ನು ಜಾತಿ, ಧರ್ಮಕ್ಕೆ ಬಳಸಿಕೊಳ್ಳಬಾರದು. ನೊಂದ ಹೆತ್ತರಿಗೆ ಸಮಾಧಾನವಾಗುವ ರೀತಿಯಲ್ಲಿ ವರ್ತಿಸಬೇಕು ಎಂದು ತಿಳಿಸಿದ್ದಾರೆ. 

ಬರ ಪರಿಹಾರ‌ದಲ್ಲೂ ಕಾಂಗ್ರೆಸ್ ರಾಜಕಾರಣ ಮಾಡುತ್ತಿದೆ: ಪ್ರಹ್ಲಾದ ಜೋಶಿ ಕಿಡಿ

ಸರ್ಕಾರ ಪ್ರಕರಣವನ್ನು ಗಂಭೀರವಾಗಿದುಕೊಂಡಿಲ್ಲ. ತನಿಖೆಯಲ್ಲಿ ಯಾವ ಪ್ರಗತಿಯೂ ಕಂಡಿಲ್ಲ. ರಾಜ್ಯದಲ್ಲಿ ಮಹಿಳೆಯರ ಸುರಕ್ಷತೆ ಬಗ್ಗೆ ಸವಾಲು ಎದ್ದಿದೆ. ಈ ಹಿನ್ನೆಲೆಯಲ್ಲಿ ಪ್ರಕರಣದ ತನಿಖೆಯನ್ನು ತಕ್ಷಣ ಸಿಐಡಿಯಿಂದ ಸಿಬಿಐ ಹಸ್ತಾಂತರಿಸಬೇಕು ಎಂದು ಆಗ್ರಹಿಸಿದ್ದಾರೆ. 

ಹಿಂದೂಗಳು ಕೊಲೆಯಾದರೆ ಬಿಜೆಪಿಗೆ ಹಬ್ಬ ಎನ್ನುವ ಸಚಿವ ಸಂತೋಷ ಲಾಡ್ ಹೇಳಿಕೆಗೆ ಪ್ರತಿಕ್ರಿಯಿಸಿದ ವಿಜಯೇಂದ್ರ, ಬೆಂಗಳೂರಿನ ಕಾಂಗ್ರೆಸ್ ಶಾಸಕ ಅಂಖಂಡ ಶ್ರೀನಿವಾಸ ಅವರ ನಿವಾಸಕ್ಕೆ ಬೆಂಕಿ ಹಚ್ಚಿದಾಗ, ಅಂದಿದ್ದ ಕಾಂಗ್ರೆಸ್ ಸರ್ಕಾರ ಅವರಿಗೆ ಸಾಂತ್ವನ ಸಹ ಹೇಳಲು ಹೋಗಿಲ್ಲ. ಮಾನವೀಯತೆ ಮರೆತು ವರ್ತಿಸುವುದು ಕಾಂಗ್ರೆಸ್ ಸಂಸ್ಕೃತಿ. ಇಂಥ ಪ್ರಕರಣದಲ್ಲಿ‌ ರಾಜಕೀಯ ಬಿಟ್ಟು ಮನುಷ್ಯತ್ವದ ಆಧಾರದಲ್ಲಿ ಧೈರ್ಯ ತುಂಬಬೇಕು.‌ ದಿಕ್ಕು ತಪ್ಪಿಸುವ ಹೇಳಿಕೆ ನೀಡಿದಾಗಲೂ‌ ನಾವು ಸುಮ್ಮನರ ಕೂರಬೇಕೆ ಎಂದು ವಿಜಯೇಂದ್ರ ಪ್ರಶ್ನಿಸಿದ್ದಾರೆ. 

Latest Videos
Follow Us:
Download App:
  • android
  • ios