Breaking: ನೆಲಮಂಗಲ ಹೆದ್ದಾರಿಯಲ್ಲಿ ಕಾರ್‌ನ ಮೇಲೆ ಬಿದ್ದ ಕಂಟೇನರ್‌ ಲಾರಿ, 6 ಮಂದಿ ಅಪ್ಪಚ್ಚಿ!

ನೆಲಮಂಗಲ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿನ ಮೇಲೆ ಕಂಟೇನರ್ ಲಾರಿ ಬಿದ್ದು 6 ಮಂದಿ ಸಾವನ್ನಪ್ಪಿದ್ದಾರೆ. ತುಮಕೂರು-ಬೆಂಗಳೂರು ಹೆದ್ದಾರಿಯಲ್ಲಿ ಎರಡು ಕಾರು, ಎರಡು ಲಾರಿ ಮತ್ತು ಸ್ಕೂಲ್ ಬಸ್ ನಡುವೆ ಸರಣಿ ಅಪಘಾತ ಸಂಭವಿಸಿದೆ.

nelamangala Accident Container lorry falls on car feared dead

ಬೆಂಗಳೂರು (ಡಿ.21): ನೆಲಮಂಗಲ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಸರಣಿ ಅಪಘಾತ ಸಂಭವಿಸಿದೆ. ಕಾರ್‌ನ ಮೇಲೆ ಕಂಟೇನರ್‌ ಲಾರಿ ಬಿದ್ದಿದ್ದರಿಂದ ಕಾರ್‌ನಲ್ಲಿದ್ದ 6 ಮಂದಿ ಸಂಪೂರ್ಣವಾಗಿ ಅಪ್ಪಚ್ಚಿಯಾಗಿ ಸಾವು ಕಂಡಿದ್ದಾರೆ. ಕಾರಿನ ಮೇಲೆ ಕಂಟೇನರ್ ಲಾರಿ ಬಿದ್ದಿದ್ದರಿಂದಲೇ ಈ ಸಾವು ಸಂಭವಿಸಿದೆ. ತುಮಕೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಅಪಘಾತ ನಡೆದಿದ್ದು,ಎರಡು ಕಾರು, ಎರಡು ಲಾರಿ, ಸ್ಕೂಲ್ ಬಸ್ ನಡುವೆ ಸರಣಿ ಅಪಘಾತ ನಡೆದಿದೆ. ನೆಲಮಂಗಲ ತಾಲೂಕಿನ ಟಿ.ಬೇಗೂರು ಬಳಿ ಘಟನೆ ನಡೆದಿದ್ದು, ವಿಜಯಪುರ ಮೂಲದ ಇಂಜಿನಿಯರ್‌ ಕುಟುಂಬದ 6 ಮಂದಿ ಸಾವು ಕಂಡಿದ್ದಾರೆ. ಅಪಘಾತದಿಂದಾಗಿ ತುಮಕೂರು ಬೆಂಗಳೂರು ರಸ್ತೆಯಲ್ಲಿ ಬಾರಿ  ಟ್ರಾಫಿಕ್ ಜಾಮ್ ಆಗಿದೆ. ಸ್ಥಳಕ್ಕೆ ನೆಲಮಂಗಲ ಟ್ರಾಫಿಕ್ ಪೊಲೀಸರು ಆಗಮಿಸಿದ್ದು, ಕಂಟೇನರ್ ಲಾರಿ ಬಿದ್ದ ಪರಿಣಾಮವಾಗಿ ಕಾರಿನಲ್ಲಿ ಅಪ್ಪಚ್ಚಿಯಾಗಿರುವ ಮೃತದೇಹಗಳನ್ನು ಹೊರತೆಗೆಯುವ ಕೆಲಸ ನಡೆಯುತ್ತಿದೆ. ಕಂಟೇನರ್‌ ಲಾರಿ ಬಿದ್ದ ರಭಸಕ್ಕೆ ಕಾರು ಸಂಪೂರ್ಣವಾಗಿ ಅಪ್ಪಚ್ಚಿಯಾಗಿದ್ದು, ಅದರಲ್ಲಿದ್ದರ ದೇಹಗಳು ಕೂಡ ಛಿದ್ರವಾಗಿದೆ. ಕಾರ್‌ನ ನಂಬರ್‌ಅನ್ನು KA 01 ND 1536 ಎಂದು ಗುರುತಿಸಲಾಗಿದೆ.

Belagavi: ಇನ್ನೊಂದು ವಾರದಲ್ಲಿ ಮಗುವಿಗೆ ಜನ್ಮ ನೀಡಬೇಕಿದ್ದ ಗರ್ಭಿಣಿಯ ದಾರುಣ ಹತ್ಯೆ!

2 ಕಾರು, 2 ಲಾರಿ, ಶಾಲಾ ವಾಹನದ ನಡುವೆ ಅಪಘಾತ ಸಂಭವಿಸಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಡಿಕ್ಕಿಯ ರಭಸಕ್ಕೆ ಕಂಟೇನರ್‌ ಹೆದ್ದಾರಿಯಲ್ಲೇ ಪಲ್ಟಿಯಾಗಿದೆ. ಈ ವೇಳೆ ಪಕ್ಕದಲ್ಲೇ ಹೋಗುತ್ತಿದ್ದ ಕಾರ್‌ನ ಮೇಲೆ ಬಿದ್ದಿದ್ದರಿಂದ ಇಬ್ಬರು ಮಹಿಳೆಯರು, ಇಬ್ಬರು ಪುರುಷರು, ಮಗು ಸೆರಿ ಒಟ್ಟು 6 ಮಂದಿ ಸ್ಥಳದಲ್ಲೇ ಸಾವು ಕಂಡಿದ್ದಾರೆ. 

ವೋಲ್ವೋ ಕಂಪನಿಯ ಕಾರು ಇದಾಗಿದ್ದು, ಮೃತರನ್ನು 42 ವರ್ಷದ ಗೌರಾಬಾಯಿ, 12 ವರ್ಷದ ದೀಕ್ಷಾ, 16 ವರ್ಷದ ಧ್ಯಾನ್‌ ಮತ್ತು 2 ವರ್ಷದ ಆರ್ಯ ಎಂದು ಗುರುತಿಸಲಾಗಿದ್ದು, ಇನ್ನುಳಿದವರ ಗುರುತನ್ನು ಪತ್ತೆಹಚ್ಚಲಾಗುತ್ತಿದೆ. ವಿಜಯಪುರ ಮೂಲದ ಇಂಜಿನಿಯರ್‌ ಕುಟುಂಬ ಎನ್ನುವ ಮಾಹಿತಿ ಸಿಕ್ಕಿದ್ದು, ವೀಕೆಂಡ್‌ ಹಿನ್ನೆಲೆಯಲ್ಲಿ ಬೆಂಗಳೂರಿಗೆ ಬರುತ್ತಿದ್ದರು ಎನ್ನಲಾಗಿದೆ. ಎಲ್ಲರೂ ಒಂದೇ ಕುಟುಂಬದವರಾಗಿದ್ದು, ವೀಕೆಂಡ್‌ ಪ್ರವಾಸಕ್ಕೆ ಕುಟುಂಬ ಹೊರಟಿತ್ತು. ಆರು ತಿಂಗಳ ಹಿಂದೆಯಷ್ಟೇ ಕಾರು ಖರೀದಿ ಮಾಡಿದ್ದರು ಎನ್ನಲಾಗಿದೆ. ಸ್ಥಳಕ್ಕೆ ಬೆಂಗಳೂರು ಗ್ರಾಮಾಂತರ ಎಸ್‌ಪಿ ಸಿ ಕೆ ಬಾಬಾ ಭೇಟಿ ನೀಡಿ ಪರಿಶೀಲನೆ ಮಾಡುತ್ತಿದ್ದಾರೆ.

'ನನ್ನ ಗರ್ಲ್‌ಫ್ರೆಂಡ್‌ ನಿಂಗೆ, ನಿಂದು ನನಗೆ..' ಬೆಂಗ್ಳೂರಲ್ಲಿ ಹೊಸ ವರ್ಷಕ್ಕೆ ನಡೀತಾ ಇದೆ ಸ್ವ್ಯಾಪಿಂಗ್ ದಂಧೆ!

ಸುದ್ದಿ ಅಪ್‌ಡೇಟ್‌ ಆಗುತ್ತಿದೆ

Latest Videos
Follow Us:
Download App:
  • android
  • ios