Tumakuru: ಶಿಕ್ಷಕರಿಗೆ ಸೂಕ್ತ ತರಬೇತಿ ನೀಡದೇ ಎನ್‌ಇಪಿ ಜಾರಿ ಬೇಡ
ಅಖಿಲ ಭಾರತ ಶಿಕ್ಷಕರ ಫೆಡರೇಷನ್ ನೇತೃತ್ವದಲ್ಲಿ ಶಿಕ್ಷಕರ ಬಹುದಿನಗಳ ಬೇಡಿಕೆಯನ್ನು ಈಡೇರಿಸಲು ಕ್ರಮವಹಿಸುವಂತೆ ಒತ್ತಾಯಿಸಿ ಅಪರ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಶಿಕ್ಷಕರು ಮನವಿ ಸಲ್ಲಿಸಿದರು.
ತುಮಕೂರು (ಸೆ.07): ಅಖಿಲ ಭಾರತ ಶಿಕ್ಷಕರ ಫೆಡರೇಷನ್ ನೇತೃತ್ವದಲ್ಲಿ ಶಿಕ್ಷಕರ ಬಹುದಿನಗಳ ಬೇಡಿಕೆಯನ್ನು ಈಡೇರಿಸಲು ಕ್ರಮವಹಿಸುವಂತೆ ಒತ್ತಾಯಿಸಿ ಅಪರ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಶಿಕ್ಷಕರು ಮನವಿ ಸಲ್ಲಿಸಿದರು. ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತುಮಕೂರು ಜಿಲ್ಲಾಶಾಖೆಯ ಅಧ್ಯಕ್ಷ ಆರ್.ಪರಶಿವಮೂರ್ತಿ ನೇತೃತ್ವದಲ್ಲಿ ಪದಾಧಿಕಾರಿಗಳು ಹಾಗೂ ಸಮಿತಿಯ ಸದಸ್ಯರು ಮನವಿ ಸಲ್ಲಿಸಿದರು.
ಆರ್.ಪರಶಿವಮೂರ್ತಿ ಮಾತನಾಡಿ, ಇಡೀ ದೇಶದಲ್ಲಿ ರಾಜ್ಯದಲ್ಲಿಯೇ ಪ್ರಥಮವಾಗಿ ಜಾರಿಗೆ ತಂದಿರುವ ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿಗೊಳಿಸಲು ಮುಂದಾಗಿರುವ ಸರ್ಕಾರ, ಶಿಕ್ಷಕರಿಗೆ ತರಬೇತಿಯನ್ನು ನೀಡದೇ ಎನ್‌ಇಪಿ ಜಾರಿಗೊಳಿಸಲು ಮುಂದಾಗಿರುವುದರಿಂದ ಶಿಕ್ಷಕರಿಗೆ ಒತ್ತಡ ನಿರ್ಮಾಣವಾಗಿದೆ. ದೇಶದ ಬೇರೆ ರಾಜ್ಯಗಳಲ್ಲಿ ಎನ್‌ಇಪಿ ತುರ್ತಾಗಿ ಜಾರಿಗೊಳಿಸದೇ, ಶಿಕ್ಷಕರಿಗೆ ಸೂಕ್ತ ತರಬೇತಿಯನ್ನು ನೀಡುವ ಮೂಲಕ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಸಮರ್ಪಕವಾಗಿ ಜಾರಿಗೊಳಿಸಲು ತಯಾರಿ ನಡೆಸಿವೆ. ಆದರೆ ನಮ್ಮ ರಾಜ್ಯದಲ್ಲಿ ಮಾತ್ರ ಯಾವುದೇ ಮುಂಜಾಗ್ರತೆಯನ್ನು ವಹಿಸದೇ, ಶಿಕ್ಷಕರಿಗೆ ತರಬೇತಿಯನ್ನು ನೀಡದೇ ಈ ರೀತಿ ತರಾತುರಿಯಲ್ಲಿ ಜಾರಿಗೊಳಿಸದೇ ಶಿಕ್ಷಕರಿಗೆ ತರಬೇತಿಯನ್ನು ನೀಡಿ, ಎನ್‌ಇಪಿ ಅನುಷ್ಠಾನಕ್ಕೆ ಅಗತ್ಯ ತಯಾರಿ ಮಾಡಬೇಕೆಂದು ಒತ್ತಾಯಿಸಿದರು.
Tumakuru: ಶಿಕ್ಷಣಕ್ಕೆ ಬಜೆಟ್‌ನಲ್ಲಿ 500 ಕೋಟಿ ಮೀಸಲು ಸಾಲದು: ಶಾಸಕ ಶ್ರೀನಿವಾಸ್
ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲ ಶಿಕ್ಷಕರಿಗೆ ಕೇಂದ್ರ ಸರ್ಕಾರದ ಮಾದರಿಯ ವೇತನವನ್ನು ನೀಡಬೇಕು, ರಾಜ್ಯದಲ್ಲಿ ಕಾರ್ಯನಿರ್ವಹಿಸುವ ಶಿಕ್ಷಕರಿಗೆ, ಕೇಂದ್ರದ ಶಿಕ್ಷಕರಿಗೂ ಸಮಾನ ವೇತನವನ್ನು ನೀಡಬೇಕೆಂದು ಆಗ್ರಹಿಸಿದ ಅವರು, ಶಿಕ್ಷಕರ ವರ್ಗಾವಣೆ, ಬಡ್ತಿ, ವೇತನ ಸಮಸ್ಯೆಗಳನ್ನು ಬಗೆಹರಿಸಬೇಕು. ಶಿಕ್ಷಕರ ವರ್ಗಾವಣೆಯಲ್ಲಿ ಕನಿಷ್ಠ 7 ವರ್ಷ ಸೇವೆಯನ್ನು ಪೂರೈಸಿರಬೇಕು ಎಂಬ ನಿಯಮವನ್ನು ಸಡಿಲಿಸಿ, ಕನಿಷ್ಠ ಕಾಯಂ ಪೂರ್ಣ ಸೇವಾವಧಿಯನ್ನು ಪೂರೈಸಿದ ಅರ್ಹ ಶಿಕ್ಷಕರಿಗೆ ಯಾವುದೇ ನಿಬಂಧನೆಗಳಿಲ್ಲದೆ ಪರಸ್ಪರ ವರ್ಗಾವಣೆಗೆ ಅವಕಾಶ ಕಲ್ಪಿಸಬೇಕು.
ಅವಧಿ ಪೂರೈಸಿರುವ ಸಿಆರ್‌ಪಿ/ಬಿಆರ್‌ಪಿ/ಇಸಿಒಗಳು ಸ್ಥಳ ಲಭ್ಯತೆ ಇಲ್ಲದೆ, ಅನಾನುಕೂಲವಾದ ಸ್ಥಳಗಳಿಗೆ ನಿಯುಕ್ತಿಗೊಳಿಸಿರುವ ವರ್ಗಾವಣೆಗೆ ಅವಕಾಶ ಕಲ್ಪಿಸಬೇಕೆಂದು ಮನವಿ ಸಲ್ಲಿಸಿದರು. ಈ ವೇಳೆ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತುಮಕೂರು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಚಿಕ್ಕಣ್ಣ, ಜಿ.ಆರ್.ಜಯರಾಂ, ತಿಮ್ಮೇಗೌಡ, ಎನ್.ಟಿ.ಪ್ರಕಾಶ್, ಎಚ್.ಎಂ.ಸುರೇಶ್, ಟಿ.ಕೆ.ಪಟ್ಟಾಭಿರಾಮ, ಮಹದೇವಯ್ಯ,ಜಯಲಕ್ಷ್ಮಮ್ಮ, ನೇತಾವತಿ, ಶಮಂತ, ಎಚ್.ಸಿ.ಓಂಕಾರಮೂರ್ತಿ, ಸಿ.ಎಸ್.ನಾಗರಾಜು, ಮಂಜುಳಾ, ಮಂಜಣ್ಣ ಸೇರಿದಂತೆ ಸಂಘದ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.
Tumakuru: ಮುದ್ದಹನುಮೇಗೌಡರ ಮನವೊಲಿಸುತ್ತೇವೆ: ಎಂ.ಬಿ.ಪಾಟೀಲ್
ರಾಜ್ಯದಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಗುತ್ತಿಗೆ ಆಧಾರದ ಮೇಲೆ ಶಿಕ್ಷಕರ/ಅತಿಥಿ ಶಿಕ್ಷಕರ ನೇಮಕಾತಿಯನ್ನು ಮಾಡುವ ಬದಲಾಗಿ ನೇರ ನೇಮಕಾತಿ ಮಾಡಿಕೊಳ್ಳುವ ಮೂಲಕ ಗುಣಮಟ್ಟದ ಶಿಕ್ಷಣ ನೀಡಲು ಕ್ರಮವಹಿಸಬೇಕು, ಗುತ್ತಿಗೆ ಮತ್ತು ಅತಿಥಿ ಶಿಕ್ಷಕರ ನೇಮಕದಿಂದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಸಾಧ್ಯವಿಲ್ಲ ಎನ್ನುವುದನ್ನು ಅರಿಯಬೇಕು.
-ಆರ್.ಪರಶಿವಮೂರ್ತಿ ಅಧ್ಯಕ್ಷ, ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ