Asianet Suvarna News Asianet Suvarna News

ಅಪಾಯದ ಮಟ್ಟ ಮೀರಿದ ನೇತ್ರಾವತಿ : ಜನರ ಸ್ಥಳಾಂತರಕ್ಕೆ DC ಆದೇಶ

ರಾಜ್ಯದಲ್ಲಿ ಭಾರೀ ಪ್ರಮಾಣದಲ್ಲಿ ಮಳೆಯಾಗುತ್ತಿದೆ. ಪ್ರವಾಹ ರಣ ಭೀಕರವಾಗಿ ಅಪ್ಪಳಿಸುತ್ತಿದೆ. ಇತ್ತ ಬೇಸಿಗೆಯಲ್ಲಿ ಕಾಲಿಯಾಗಿದ್ದ ನೇತ್ರಾವತಿ ಅಪಾಯದ ಮಟ್ಟ ಮೀರಿ ಧುಮ್ಮಿಕ್ಕುತ್ತಿದೆ. 

Netravati Overflows in Dakshina Kannada DC Orders Evacuation
Author
Bengaluru, First Published Aug 9, 2019, 1:31 PM IST

ಮಂಗಳೂರು[ಆ. 09] : ರಾಜ್ಯದಲ್ಲಿ ಭಾರೀ ಪ್ರಮಾಣದಲ್ಲಿ ಮಳೆಯಾಗುತ್ತಿದೆ. ಪ್ರವಾಹದಿಂದ ಜನಜೀವನ ತತ್ತರಿಸಿದೆ. ಹಲವು ಜಿಲ್ಲೆಗಳಲ್ಲಿ ವರುಣನ ಆರ್ಭಟ ಮುಂದುವರಿದಿದ್ದು, ಹಲವು ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. 

ಇತ್ತ ದಕ್ಷಿಣ ಕನ್ನಡದಲ್ಲಿಯೂ ಭಾರೀ ಪ್ರಮಾಣದಲ್ಲಿ ಮಳೆ ಸುರಿಯುತ್ತಿದ್ದು ನೇತ್ರಾವತಿ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ.  ನದಿ ಪಾತ್ರದ ಜನರಿಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಎಚ್ಚರಿಕೆ ನೀಡಿದ್ದಾರೆ.

ಕರ್ನಾಟಕ ಪ್ರವಾಹದ ಹೆಚ್ಚಿನ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಬೇಸಿಗೆಯಲ್ಲಿ ಸಂಪೂರ್ಣ ಕಾಲಿಯಾಗಿದ್ದ ನೇತ್ರಾವತಿ ನದಿ ಅಪಾಯದ ಮಟ್ಟ ಮೀರಿದ್ದು, ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸೂಚನೆ ನೀಡಲಾಗಿದೆ. ಉಪ್ಪಿನಂಗಡಿಯಿಂದ ಮಂಗಳೂರುವರೆಗೂ ಕೂಡ ನದಿ ಪಾತ್ರದಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. 

ನದಿಯಲ್ಲಿ ನೀರು ವೇಗವಾಗಿ ಹರಿಯುತ್ತಿದ್ದು,  ಎರಡೂ ಬದಿಯಲ್ಲಿ ವಾಸಿಸುವ ಜನರು ಸುರಕ್ಷಿತ ಪ್ರದೇಶಗಳಿಗೆ ತೆರಳಲು ಜಿಲ್ಲಾಧಿಕಾರಿ ಸೂಚಿಸಿದ್ದಾರೆ. 

Follow Us:
Download App:
  • android
  • ios