Asianet Suvarna News Asianet Suvarna News

ರೈತರಿಗೆ ಹೊಸ ಸಾಲ ನೀಡಲು 2 ದಿನಗಳಲ್ಲಿ ಆದೇಶ: ಸೋಮಶೇಖರ್‌

ರೈತರಿಗೆ ಹೊಸ ಸಾಲ ನೀಡಲು ನಿರ್ಧರಿಸಿದ್ದು, ಈ ಬಗ್ಗೆ ಇನ್ನು 2 ದಿನಗಳಲ್ಲೇ ಸರ್ಕಾರದಿಂದ ಅಧಿಕೃತ ಆದೇಶ ಹೊರಬೀಳಲಿದೆ ಎಂದು ಸಹಕಾರ ಸಚಿವ ಎಸ್‌.ಟಿ.ಸೋಮಶೇಖರ ಹೇಳಿದರು.

 

New loan to farmers says ST Somashekhar
Author
Bangalore, First Published Apr 19, 2020, 11:31 AM IST | Last Updated Apr 19, 2020, 11:31 AM IST

ದಾವಣಗೆರೆ(ಏ.19): ರೈತರಿಗೆ ಹೊಸ ಸಾಲ ನೀಡಲು ನಿರ್ಧರಿಸಿದ್ದು, ಈ ಬಗ್ಗೆ ಇನ್ನು 2 ದಿನಗಳಲ್ಲೇ ಸರ್ಕಾರದಿಂದ ಅಧಿಕೃತ ಆದೇಶ ಹೊರಬೀಳಲಿದೆ ಎಂದು ಸಹಕಾರ ಸಚಿವ ಎಸ್‌.ಟಿ.ಸೋಮಶೇಖರ ಹೇಳಿದರು.

ನಗರದ ಎಪಿಎಂಸಿಗೆ ಶನಿವಾರ ಭೇಟಿ ನೀಡಿದ್ದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೈತರ ಸಾಲ ಮನ್ನಾ ಬಗ್ಗೆ ಸೂಕ್ತ ಕ್ರಮ ಕೈಗೊಂಡಿದ್ದೇವೆ. ಸಾಲ ಮನ್ನಾ ಬಗ್ಗೆ ರಾಜ್ಯದಲ್ಲಿ 29800 ಅರ್ಜಿ ಇದ್ದು, ಈ ಪೈಕಿ 14629 ಅರ್ಜಿ ವಿಲೇವಾರಿ ಆಗಿಲ್ಲ. ಸಂಬಂಧಿಸಿದ ಅಧಿಕಾರಿಗಳಿಗೆ ಕ್ರಮಕ್ಕಾಗಿ ಸೂಚಿಸಿದ್ದೇನೆ ಎಂದರು.

ಶ್ರೀರಾಮುಲು, ಡಾ.ಸುಧಾಕರ್‌ ಮಧ್ಯೆ ಸಾಮರಸ್ಯ ಕೊರತೆ: ರೇವಣ್ಣ

ಸಾಲ ಮನ್ನಾ ವಿಚಾರವಾಗಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಜೊತೆಗೆ ಸಭೆ ನಡೆಸಲಿದ್ದೇವೆ. ಖಾಸಗಿ ಹಣಕಾಸು ಸಂಸ್ಥೆಗಳು ರೈತರಿಗೆ ನೋಟಿಸ್‌ ನೀಡುವಂತಿಲ್ಲ. ಸಾಲ ವಸೂಲು ಮಾಡುವಂತಿಲ್ಲ. ಟ್ರ್ಯಾಕ್ಟರ್‌ ಸೇರಿದಂತೆ ವಾಹನಗಳನ್ನು ಜಪ್ತಿ ಮಾಡುವಂತಿಲ್ಲ. ಹಣಕಾಸು ಸಂಸ್ಥೆಗಳ ಮುಖ್ಯಸ್ಥರೊಂದಿಗೆ ಸಿಎಂ ಮಾತುಕತೆ ನಡೆಸಿ, ಸುತ್ತೋಲೆ ಹೊರಡಿಸಲಿದ್ದಾರೆ. 3 ತಿಂಗಳ ಕಾಲ ಸಾಲ ವಸೂಲಿ ಮಾಡದಂತೆ ಖಾಸಗಿ ಕಂಪನಿಗಳು, ಹಣಕಾಸು ಸಂಸ್ಥೆಗಳಿಗೆ ಮನವರಿಕೆ ಮಾಡಿಕೊಡುತ್ತೇವೆ. ಈಗಿನ ವಾಸ್ತವ ಸ್ಥಿತಿಯನ್ನೂ ಎಲ್ಲರೂ ಅರ್ಥ ಮಾಡಿಕೊಳ್ಳುತ್ತಾರೆ ಎಂಬ ವಿಶ್ವಾಸವಿದೆ ಎಂದು ತಿಳಿಸಿದರು.

ದಾವಣಗೆರೆಯ ವಿವಿಧೆಡೆ ಆಲಿಕಲ್ಲು ಸಮೇತ ಗಾಳಿ-ಮಳೆ

ಕೊರೋನಾ ವೈರಸ್‌ ನಿಯಂತ್ರಣದ ಹಿನ್ನೆಲೆ ದೇಶಾದ್ಯಂತ ಲಾಕ್‌ ಡೌನ್‌ ಘೋಷಣೆ ಮಾಡಲಾಗಿದೆ. ಈ ಸ್ಥಿತಿಯಲ್ಲಿ ರಾಜ್ಯದ ಎಲ್ಲ ಎಪಿಎಂಸಿಗಳಿಗೂ ಭೇಟಿ ನೀಡುತ್ತಿದ್ದೇನೆ. ರೈತರು ಬೆಳೆದ ಬೆಳೆಗಳ ಮಾರಾಟಕ್ಕೆ ಯಾವುದೇ ತೊಂದರೆ ಆಗದಂತೆ ಸೂಚನೆ ಸಹ ನೀಡಿದ್ದೇವೆ ಎಂದು ವಿವರಿಸಿದರು.

ದಾವಣಗೆರೆ ಉತ್ತರ ಕ್ಷೇತ್ರ ಶಾಸಕ ಎಸ್‌.ಎ. ರವೀಂದ್ರನಾಥ, ಜಿಲ್ಲಾಧಿಕಾರಿ ಮಹಾಂತೇಶ ಜಿ.ಬೀಳಗಿ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಹನುಮಂತರಾಯ, ತಹಸೀಲ್ದಾರ್‌ ಗಿರೀಶ ಇತರರು ಇದ್ದರು.

Latest Videos
Follow Us:
Download App:
  • android
  • ios