ಗೃಹಲಕ್ಷ್ಮಿ ಹಣ ಇನ್ನೂ ಬಂದಿಲ್ವಾ?: ಫಲಾನುಭವಿಗಳಿಗೆ ದುಡ್ಡು ತಲುಪಲು ಹೊಸ ಪ್ಲಾನ್..!
ರಾಜ್ಯದಲ್ಲಿ ಗೃಹಲಕ್ಷ್ಮಿ ಯೋಜನೆಯನ್ನು ಎಲ್ಲಾ ಫಲಾನುಭವಿಗಳಿಗೆ ತಲುಪಿಸುವ ನಿಟ್ಟಿನಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮುಂದಾಗಿದ್ದು. ಆದರೆ ಅಂಗನವಾಡಿ ಕಾರ್ಯಕರ್ತಯರು ಮುಂಬರುವಂತಹ ಲೋಕಸಭಾ ಚುನಾವಣೆಗೆ ಈಗಾಗಲೇ ಅಂಗನವಾಡಿ ಕಾರ್ಯಕರ್ತೆಯರು ಚುನಾವಣೆ ಕೆಲಸ ಮಾಡುತ್ತಿದ್ದು, ಇದರ ಜೊತೆ ಗೃಹಲಕ್ಷ್ಮಿ ಯೋಜನೆಯನ್ನು ತಲುಪಿಸುವ ಮಹಾ ಕೆಲಸಕ್ಕೆ ಮುಂದಾಗಿರುವುದು ನಿಜಕ್ಕೂ ಶ್ಲಾಘನೆ ಮಾಡಬೇಕಾಗಿದೆ.
ವರದಿ- ಜಗದೀಶ್ ಏಷ್ಯಾನೆಟ್ ಸುವರ್ಣ ನ್ಯೂಸ್, ರಾಮನಗರ
ರಾಮನಗರ(ನ.29): ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಅವರು ಪ್ರಣಾಳಿಕೆಯಲ್ಲಿ ನೀಡಿದಂತಹ ಐದು ಗ್ಯಾರಂಟಿ ಯೋಜನೆಯ ಕಾರಣ. ರಾಜ್ಯದಲ್ಲಿ ಕಾಂಗ್ರೆಸ್ 136 ಶಾಸಕರನ್ನು ಗೆಲ್ಲಿಸುವ ಮುಖಾಂತರ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂತು, ಅವರು ಕೊಟ್ಟಿದ್ದ 5 ಯೋಜನೆಗಳಲ್ಲಿ ಪ್ರಮುಖವಾಗಿ ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ತಲುಪದ ಕಾರಣ ರಾಜ್ಯ ಸರ್ಕಾರ ಮತ್ತೊಂದು ಕೆಲಸಕ್ಕೆ ಮುಂದಾಗಿದೆ
ಇನ್ನೂ ರಾಜ್ಯದಲ್ಲಿ ಗೃಹಲಕ್ಷ್ಮಿ ಯೋಜನೆಯ ಎಲ್ಲಾ ಫಲಾನುಭವಿಗಳಿಗೆ ಕೇಂದ್ರ ಕಚೇರಿಯಿಂದಲೇ ಹಣ ನೀಡಲು ಮುಂದಾಗಿದೆ. ರಾಜ್ಯದಲ್ಲಿ ಗೃಹಲಕ್ಷ್ಮಿ ಯೋಜನೆ ಜಾರಿಗೆ ಬಂದಾಗಿನಿಂದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕೇಂದ್ರ ಕಚೇರಿಯಿಂದ ರಾಜ್ಯ ಎಲ್ಲಾ ಜಿಲ್ಲೆಯ ಇಲಾಖೆ ಉಪ ನಿರ್ದೇಶಕರ ಖಾತೆಗೆ ಹಣ ವರ್ಗಾವಣೆ ಮಾಡುತ್ತಿದ್ದು ಜಿಲ್ಲಾ ಮಟ್ಟದಲ್ಲಿ ಉಪ ನಿರ್ದೇಶಕರು ಖಜಾನೆ 2 ಮೂಲಕ ಫಲಾನುಭವಿಗಳ ಖಾತೆಗೆ ವರ್ಗಾವಣೆ ಮಾಡುತ್ತಿದ್ದರು. ಇನ್ನು ಮುಂದೆ ಕೇಂದ್ರ ಕಚೇರಿಯಿಂದಲೇ ಗೃಹಲಕ್ಷ್ಮಿ ಯೋಜನೆ ಹಣ ವರ್ಗಾವಣೆ ಮಾಡಲು ಸಿದ್ಧತೆಗೆ ಮುಂದಾಗಿದೆ.
ಪುಲ್ವಾಮಾ ದಾಳಿಯಾಗದಿದ್ದರೆ ಮೋದಿ ಗೆಲ್ಲುತ್ತಿರಲಿಲ್ಲ: ಶಾಸಕ ಬಾಲಕೃಷ್ಣ ಕೀಳು ಹೇಳಿಕೆ
ಹಾಗಾಗಿ ಅಂಗನವಾಡಿ ಕಾರ್ಯಕರ್ತರನ್ನು ಈ ಯೋಜನೆಗೆ ಕೆಲಸ ಮಾಡಲು ಪ್ರೇರೇಪಿಸುತ್ತಿದೆ. ರಾಜ್ಯದ ಎಲ್ಲಾ ಜಿಲ್ಲೆಗಳ ಅಂಗನವಾಡಿ ಕಾರ್ಯಕರ್ತಯರನ್ನು ಗೃಹ ಬೇಟೆಗೆ ಸೂಚಿಸಿದ್ದಾರೆ. ಇದರಿಂದ ಫಲಾನುಭವಿಗಳಿಗೆ ಆಗಿರುವ ಅನಾನುಕೂಲದ ಸರಿಪಡಿಸಿ ಯೋಜನೆ ಹಣ ಕೊಡಿಸುವುದಕ್ಕೆ ಮುಂದಾಗಿದೆ.
ಇನ್ನೂ ರಾಜ್ಯ ಸರ್ಕಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿಗೆ ಇಲಾಖೆ ಅಧಿಕಾರಿಗಳು ಸೂಚನೆ ನೀಡಿದ್ದು ಗೃಹಲಕ್ಷ್ಮಿ ಯೋಜನೆ ಹಣವನ್ನು ಫಲಾನುಭವಿಗಳಿಗೆ ತಿಂಗಳ 20ನೇ ತಾರೀಖಿನೊಳಗೆ ಹಣ ವರ್ಗಾವಣೆ ಮಾಡುವಂತೆ ಸೂಚಿಸಿದೆ. ಪ್ರತಿ ತಿಂಗಳ 20ನೇ ತಾರೀಖಿನ ಒಳಗೆ ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಹಣ ಸಿಗಲಿದೆ.
ಅಂದಹಾಗೆ ಗೃಹಲಕ್ಷ್ಮಿ ಯೋಜನೆಯ ಹಣ ಪಡೆಯಲು ತಾಂತ್ರಿಕ ಸಮಸ್ಯೆಯಿಂದ ಹಿನ್ನಡೆಯಾಗುತ್ತಿದೆ, ಹಾಗಾಗಿ ಜಿಲ್ಲೆಯ ಅಂಗನವಾಡಿ ಕಾರ್ಯಕರ್ತಯರಿಗೆ ಪ್ರತಿ ಮನೆ ಮನೆಗೆ ಭೇಟಿ ನೀಡಿ ಯೋಜನೆ ಕುರಿತು ಮಾಹಿತಿ ನೀಡಿ ಫಲಾನುಭವಿಗಳಿಗೆ ಹಣ ಬಾರದೆ ಇದ್ದರೆ, ಅವರ ಬ್ಯಾಂಕ್ ಖಾತೆ, ಆಧಾರ್ ಜೋಡಣೆ, ತಾಂತ್ರಿಕ ಸಮಸ್ಯೆ,ರೇಷನ್ ಕಾರ್ಡ್ ಪತಿಯ ಹೆಸರು ಬದಲಾವಣೆಯಾಗಿರುವುದು, ಇನ್ನು ಯೋಜನೆ ಸಮಸ್ಯೆಗಳನ್ನು ಬಗೆಹರಿಸುವಂತೆ ಸೂಚಿಸಿದ್ದಾರೆ
ಒಟ್ಟಾರೆ ರಾಜ್ಯದಲ್ಲಿ ಗೃಹಲಕ್ಷ್ಮಿ ಯೋಜನೆಯನ್ನು ಎಲ್ಲಾ ಫಲಾನುಭವಿಗಳಿಗೆ ತಲುಪಿಸುವ ನಿಟ್ಟಿನಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮುಂದಾಗಿದ್ದು. ಆದರೆ ಅಂಗನವಾಡಿ ಕಾರ್ಯಕರ್ತಯರು ಮುಂಬರುವಂತಹ ಲೋಕಸಭಾ ಚುನಾವಣೆಗೆ ಈಗಾಗಲೇ ಅಂಗನವಾಡಿ ಕಾರ್ಯಕರ್ತೆಯರು ಚುನಾವಣೆ ಕೆಲಸ ಮಾಡುತ್ತಿದ್ದು, ಇದರ ಜೊತೆ ಗೃಹಲಕ್ಷ್ಮಿ ಯೋಜನೆಯನ್ನು ತಲುಪಿಸುವ ಮಹಾ ಕೆಲಸಕ್ಕೆ ಮುಂದಾಗಿರುವುದು ನಿಜಕ್ಕೂ ಶ್ಲಾಘನೆ ಮಾಡಬೇಕಾಗಿದೆ.