Asianet Suvarna News Asianet Suvarna News

ಕರ್ನಾಟಕದಲ್ಲಿ ಗ್ರೀನ್‌ ಹೈಡ್ರೋಜನ್‌ಗೆ ನೂತನ ನೀತಿ: ಜಾರ್ಜ್‌

ರಾಜ್ಯದಲ್ಲಿ ಗ್ರೀನ್‌ ಹೈಡ್ರೋಜನ್‌ ವಿದ್ಯುತ್‌ ಉತ್ಪಾದನೆಗೆ ರಾಜ್ಯದಲ್ಲಿ ನೂತನ ನೀತಿ ರೂಪಿಸಲಾಗುವುದು, ಇದರ ಪೈಲೆಟ್‌ ಪ್ರಾಜೆಕ್ಟ್‌ಗೆ ಮಂಗಳೂರನ್ನು ಆಯ್ಕೆ ಮಾಡಲು ಉದ್ದೇಶಿಸಲಾಗಿದೆ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್‌ ಹೇಳಿದ್ದಾರೆ.

New Policy for Green Hydrogen in Karnataka Says Minister KJ George grg
Author
First Published Feb 7, 2024, 12:00 AM IST

ಮಂಗಳೂರು(ಫೆ.07): ರಾಜ್ಯದಲ್ಲಿ ಗ್ರೀನ್‌ ಹೈಡ್ರೋಜನ್‌ ವಿದ್ಯುತ್‌ ಉತ್ಪಾದನೆಗೆ ರಾಜ್ಯದಲ್ಲಿ ನೂತನ ನೀತಿ ರೂಪಿಸಲಾಗುವುದು, ಇದರ ಪೈಲೆಟ್‌ ಪ್ರಾಜೆಕ್ಟ್‌ಗೆ ಮಂಗಳೂರನ್ನು ಆಯ್ಕೆ ಮಾಡಲು ಉದ್ದೇಶಿಸಲಾಗಿದೆ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್‌ ಹೇಳಿದ್ದಾರೆ. ನಗರದ ಮೆಸ್ಕಾಂ ಭವನದ ಸಭಾಂಗಣದಲ್ಲಿ ಸೋಮವಾರ ದ.ಕ. ಜಿಲ್ಲೆಯ ಚುನಾಯಿತ ಪ್ರತಿನಿಧಿಗಳು, ಮೆಸ್ಕಾಂ ಹಾಗೂ ಕೆಪಿಟಿಸಿಎಲ್‌ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಮಾತನಾಡಿದರು.

ರಾಜ್ಯದಲ್ಲಿ ಮುಂದಿನ ದಿನಗಳಲ್ಲಿ ವಿದ್ಯುತ್‌ ಬೇಡಿಕೆ ಹೆಚ್ಚಲಿದ್ದು, ಪರ್ಯಾಯ ನೂತನ ಇಂಧನವಾಗಿ ಗ್ರೀನ್‌ ಹೈಡ್ರೋಜನ್‌ ಉತ್ಪಾದನೆಗೆ ಚಿಂತನೆ ನಡೆಸಲಾಗಿದೆ. ಇದರ ಉತ್ಪಾದನೆಗೆ ಮಂಗಳೂರಿನಲ್ಲಿ ಪೂರಕ ಸೌಲಭ್ಯಗಳು ಇರುವ ಕಾರಣದಿಂದ ಇಲ್ಲೇ 300 ಕಿ.ವ್ಯಾ. ಸಾಮರ್ಥ್ಯದ ಪ್ರಾಯೋಗಿಕ ಯೋಜನೆ ರೂಪಿಸಲು ಚಿಂತನೆ ನಡೆಸಲಾಗಿದೆ. ಇದಕ್ಕಾಗಿ ಮುಂದೆ ಬರುವ ಕೈಗಾರಿಕೆಗಳಿಗೆ ಸೂಕ್ತ ವ್ಯವಸ್ಥೆ ಮಾಡಬೇಕಿದೆ ಎಂದು ತಿಳಿಸಿದರು.

ಮೊದಲಿನಿಂದಲೂ ಬಿಜೆಪಿ, ಜೆಡಿಎಸ್ ಎರಡೂ ಒಂದೇ: ಸಚಿವ ರಹೀಮ್ ಖಾನ್

ಕಲ್ಲಿದ್ದಲು ಆಮದಿಗೆ ಟೆಂಡರ್‌: 

ಕೊರೋನ ಕಾಲದಲ್ಲಿ ರಾಜ್ಯದಲ್ಲಿ 8-9 ಮೆ.ವ್ಯಾ. ವಿದ್ಯುತ್‌ ಬೇಡಿಕೆ ಇದ್ದರೆ ಈಗ ಅದು 16 ಮೆ.ವ್ಯಾ.ಗೆ ಏರಿಕೆಯಾಗಿದೆ. ವಿದ್ಯುತ್‌ ಬೇಡಿಕೆ ಪೂರೈಸಲು ಬೇರೆ ರಾಜ್ಯಗಳಿಂದ ಕಲ್ಲಿದ್ದಲು ಆಮದು ಮಾಡಿ ಬ್ಲೆಂಡ್‌ ಮಾಡಲು ಹಾಗೂ ರಾಜ್ಯದ ಕಲ್ಲಿದ್ದಲನ್ನು ಶುದ್ಧೀಕರಿಸಲು ಕಂಪೆನಿಗಳಿಗೆ ಟೆಂಡರ್‌ ನೀಡಲು ಉದ್ದೇಶಿಸಲಾಗಿದೆ. ಇದರಿಂದ ವಿದ್ಯುತ್‌ ಉತ್ಪಾದನೆ ಹೆಚ್ಚಲಿದೆ ಎಂದರು.

Follow Us:
Download App:
  • android
  • ios