ಮಂಗಳೂರು(ಮಾ.01): 445 ಕೋಟಿ ರು. ಅಂದಾಜು ವೆಚ್ಚದಲ್ಲಿ ಪಂಪ್‌ವೆಲ್‌ ಬಳಿ ಖಾಸಗಿ ಬಸ್‌ ನಿಲ್ದಾಣ ನಿರ್ಮಾಣ ಪ್ರಸ್ತಾವನೆಯನ್ನು ಅನುಮೋದನೆಗಾಗಿ ಸಂಪುಟದ ಮುಂದೆ ಇಡಲಾಗುವುದು ಎಂದು ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ ಹೇಳಿದ್ದಾರೆ.

ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಶನಿವಾರ ಅಭಿವೃದ್ಧಿ ಕಾರ್ಯಗಳ ಪರಿಶೀಲನೆ ನಡೆಸಿ ನಂತರ ಮಾತನಾಡಿದ ಅವರು, ಮುಂದಿನ ಸಚಿವ ಸಂಪುಟದಲ್ಲಿ ಈ ಪ್ರಸ್ತಾವನೆ ಬರಲಿದೆ ಎಂದು ಭರವಸೆ ನೀಡಿದ್ದಾರೆ.

ಮೀನುಗಾರರಿಗೆ ಬಂಪರ್: ಸೀಮೆ ಎಣ್ಣೆ ವಿತರಣೆಯಲ್ಲಿ ಹೆಚ್ಚಳ.?

2017-18ರ ಎಸ್‌ಎಫ್‌ಸಿ ಅನುದಾನದಡಿ 40 ಕಾಮಗಾರಿಗಳು ಇನ್ನೂ ಪೂರ್ಣಗೊಂಡಿಲ್ಲ ಎಂದು ಪಾಲಿಕೆಯ ಸೂಪರಿಂಟೆಂಡೆಂಟ್‌ ಎಂಜಿನಿಯರ್‌ ಗಣೇಶ್‌ ತಿಳಿಸಿದಾಗ, ಸಚಿವರು ಅವರನ್ನು ಕಾರ್ಯಕ್ಕೆ ತೆಗೆದುಕೊಂಡರು. ಮಾಚ್‌ರ್‍ 31 ರೊಳಗೆ ಕಾಮಗಾರಿ ಪೂರ್ಣಗೊಳಿಸುವುದಾಗಿ ಅಧಿಕಾರಿ ಭರವಸೆ ನೀಡಿದರು.