Asianet Suvarna News Asianet Suvarna News

ತುಮಕೂರು: 2020ಕ್ಕೆ ಪ್ರವಾಸೋದ್ಯಮ ನೀತಿ ಜಾರಿ

ರಾಜ್ಯದ ಪ್ರವಾಸಿ ತಾಣಗಳನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಬರುವ ವರ್ಷ 2020ರಲ್ಲಿ ಪ್ರವಾಸೋದ್ಯಮ ನೀತಿಯನ್ನು ಜಾರಿಗೊಳಿಸಲಾಗುತ್ತದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸಿ.ಟಿ.ರವಿ ತಿಳಿಸಿದ್ದಾರೆ. ತುಮಕೂರಿನ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಬುಧವಾರ ಪ್ರವಾಸೋದ್ಯಮ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿ ಅವರು ಮಾತನಾಡಿದ್ದಾರೆ.

new tourism policy to be start from 2020 says ct ravi
Author
Bangalore, First Published Sep 26, 2019, 3:02 PM IST

ತುಮಕೂರು(ಸೆ.26): ರಾಜ್ಯದ ಪ್ರವಾಸಿ ತಾಣಗಳನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಬರುವ ವರ್ಷ 2020ರಲ್ಲಿ ಪ್ರವಾಸೋದ್ಯಮ ನೀತಿಯನ್ನು ಜಾರಿಗೊಳಿಸಲಾಗುವುದೆಂದು ಪ್ರವಾಸೋದ್ಯಮ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸಿ.ಟಿ.ರವಿ ತಿಳಿಸಿದ್ದಾರೆ

ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಬುಧವಾರ ಪ್ರವಾಸೋದ್ಯಮ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿ ಅವರು ಮಾತನಾಡಿ, ಪ್ರಧಾನಮಂತ್ರಿ ನರೇಂದ್ರ ಮೋದಿ ರಾಜ್ಯದ ಪ್ರಮುಖ ಪ್ರವಾಸಿ ತಾಣಗಳನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಅಭಿವೃದ್ಧಿಪಡಿಸುವ ಯೋಜನೆ ತಯಾರಿಸಿ ಕೇಂದ್ರಕ್ಕೆ ಪ್ರಸ್ತಾವನೆ ಕಳುಹಿಸಲು ನಿರ್ದೇಶನ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಅಲ್ಪಾವಧಿ ಹಾಗೂ ದೀರ್ಘಾವಧಿ ಪ್ರವಾಸೋದ್ಯಮ ಅಭಿವೃದ್ಧಿ ಯೋಜನೆಗಳನ್ನು ರೂಪಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಗಾಂಜಾ ಮಾಫಿಯಾ ನಿಯಂತ್ರಣಕ್ಕೆ ಸಚಿವ ಈಶ್ವರಪ್ಪ ಸೂಚನೆ

ಕೆಲವು ಪ್ರವಾಸಿ ಕ್ಷೇತ್ರಗಳನ್ನು ಖಾಸಗಿ ಸಹಭಾಗಿತ್ವದಲ್ಲಿ ಕೆಲವು ಕ್ಷೇತ್ರಗಳನ್ನು ಸ್ವಯಂ ಸೇವಾ ಸಂಘಗಳ ಸಹಕಾರದಲ್ಲಿ ಹಾಗೂ ಕೆಲವು ಪ್ರವಾಸಿ ತಾಣಗಳನ್ನು ಸರ್ಕಾರಿ ಅನುದಾನ ಬಳಸಿ ಅಭಿವೃದ್ಧಿಪಡಿಸಲಾಗುವುದಲ್ಲದೆ ಜಿಲ್ಲೆಯಲ್ಲಿ ಗುರುತಿಸಿರುವ 28 ಪ್ರವಾಸಿ ತಾಣಗಳನ್ನು ಪ್ರವಾಸೋದ್ಯಮ ಇಲಾಖೆಯಿಂದ ಅಭಿವೃದ್ಧಿಪಡಿಸಲು ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ.

319 ತಾಣಗಳ ಗುರುತು:

ಪ್ರಾಕೃತಿಕ, ಐತಿಹಾಸಿಕ, ಸಾಂಸ್ಕೃತಿಕವಾಗಿ ಶ್ರೀಮಂತವಾಗಿರುವ ರಾಜ್ಯದಲ್ಲಿ ಪ್ರಾಕೃತಿಕವಾಗಿ 320 ಕಿ.ಮೀ. ಉದ್ದದ ಕಡಲತೀರ, ಹಂಪಿ, ಬಾದಾಮಿ-ಪಟ್ಟದಕಲ್ಲು, ಪಶ್ಚಿಮಘಟ್ಟಸೇರಿದಂತೆ ಯುನೆಸ್ಕೋ ಗುರುತಿಸಿರುವ 3 ವಿಶ್ವ ಪಾರಂಪರಿಕ ತಾಣ; 5 ರಾಷ್ಟ್ರೀಯ ಉದ್ಯಾನವನಗಳು, 30 ವನ್ಯಜೀವಿ ಅಭಯಾರಣ್ಯ, 15 ಗಿರಿಧಾಮಗಳು, ಅಂತಾರಾಷ್ಟ್ರ ಮಟ್ಟದ ಜೋಗ್‌ ಜಲಪಾತ ಹಾಗೂ ಶಿವನಸಮುದ್ರ ಸೇರಿ 40 ಜಲಪಾತಗಳು, 319 ಪ್ರಮುಖ ಪ್ರವಾಸಿ ತಾಣಗಳನ್ನು ಗುರುತಿಸಲಾಗಿದೆ ಎಂದು ವಿವರಿಸಿದ್ದಾರೆ.

ತುಮಕೂರು: ರೈತರಲ್ಲಿ ಆತಂಕ ಸೃಷ್ಟಿಸಿದ್ದ ಚಿರತೆಗಳು ಬೋನಿಗೆ

ಕರ್ನಾಟಕದಲ್ಲಿ ಮಾತ್ರ ಅಂತಾರಾಷ್ಟ್ರೀಯ ಹಾಗೂ ಅಂತಾರಾಜ್ಯ ಮಟ್ಟದಲ್ಲಿ ಗಮನ ಸೆಳೆಯಬಹುದಾದ 1500ಕ್ಕೂ ಹೆಚ್ಚು ಕೇಂದ್ರ ಹಾಗೂ ರಾಜ್ಯ ಪುರಾತತ್ವ ಕಟ್ಟಡಗಳನ್ನು ಕಾಣಸಿಗುತ್ತವೆ. ಸಾಂಸ್ಕೃತಿಕವಾಗಿ ಭಿನ್ನತೆಯಿಂದ ಕೂಡಿರುವ ರಾಜ್ಯವು ಭಾಷೆ ಮತ್ತು ಆಹಾರದಲ್ಲಿ ವೈವಿಧ್ಯತೆಯಿಂದ ಕೂಡಿದೆ. ಅಲ್ಲದೆ, ಪ್ರಾದೇಶಿಕ ಉತ್ಸವಗಳ ಪರಂಪರೆಗಳು ಪ್ರವಾಸೋದ್ಯಮವನ್ನು ಸೆಳೆಯುತ್ತಿರುವುದು ಮತ್ತೊಂದು ವಿಶೇಷ. ರಾಜ್ಯದಲ್ಲಿರುವ ಪ್ರವಾಸಿ ತಾಣಗಳ ಅಭಿವೃದ್ಧಿಯಲ್ಲಿ ಸಾರ್ವಜನಿಕರ ಕೊಡುಗೆಯು ಮುಖ್ಯವಾಗಿದೆ ಎಂದು ತಿಳಿಸಿದರು.

'ಡಿಕೆಶಿಗೆ ತಾಕತ್ತಿರಬಹುದು, ಅತಿಮಾನುಷ ಶಕ್ತಿ ಇಲ್ಲ'..!

Follow Us:
Download App:
  • android
  • ios