ರಾಜ್ಯದಲ್ಲ ಭಾನುವಾರ ಕೆಲ ಜಿಲ್ಲೆಗಳಲ್ಲಿ ಮಳೆಯಾಗಿದ್ದು  25ರವೆಗೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೆಲ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ ನೀಡಲಾಗಿದೆ. 

ಬೆಂಗಳೂರು (ಮಾ.22): ಭೂಮಿ ಮೇಲ್ಮೈನಲ್ಲಿ ಹೆಚ್ಚಾದ ಗಾಳಿಯ (ಸ್ಟ್ರಫ್‌) ತೀವ್ರತೆಯಿಂದ ಮಾ.25ರವರೆಗೆ ರಾಜ್ಯದಲ್ಲಿ ಕೆಲವು ಜಿಲ್ಲೆಗಳಲ್ಲಿ ಅಲ್ಲಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. 

ಬಿಸಿಲು ಹೆಚ್ಚೆಚ್ಚು ಕಂಡು ಬಂದ ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್‌, ಧಾರವಾಡ, ಕಲಬುರಗಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಹಗುರ ಮಳೆ ಹಾಗೂ ಮೋಡ ಕವಿದ ವಾತಾವರಣ ಕಂಡು ಬರಲಿದೆ. 

ಮಳೆ ನೀರು ಹಿಡಿಯಲು ಮೋದಿ ಆಂದೋಲನ .

ಇದರ ಜತೆಗೆ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಕೊಡುಗು, ಹಾಸನ, ಮೈಸೂರು ಮತ್ತು ಶಿವಮೊಗ್ಗ ಹಾಗೂ ಕರಾವಳಿಯ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಲವು ಕಡೆಗಳಲ್ಲಿ ತುಂತುರು ಮಳೆ ಆಗಲಿದೆ. ಭೂಮೇಲ್ಮೈ ಸ್ಟ್ರಫ್‌ನ ಪ್ರಭಾವ ಮಾ. 25ರ ವರೆಗೆ ಉತ್ತರ ಒಳನಾಡು ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ತುಸು ಹೆಚ್ಚಿರಲಿದೆ. 

ಭಾನುವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಹಿಂದಿನ 24 ಗಂಟೆಯಲ್ಲಿ ರಾಜ್ಯದ ಗರಿಷ್ಠ ತಾಪಮಾನ ಕಲಬುರಗಿಯಲ್ಲಿ 37.2 ಡಿಗ್ರಿ ಸೆಲ್ಸಿಯಸ್‌ ಮತ್ತು ಕನಿಷ್ಠ ತಾಪಮಾನ ದಾವಣಗೆರೆಯಲ್ಲಿ 14.3 ಡಿ.ಸೆ. ದಾಖಲಾಗಿದೆ.