* ಬೆಂಗಳೂರಿನಲ್ಲಿ ನೈಟ್‌ ಕರ್ಫ್ಯೂ ಅವಧಿ ವಿಸ್ತರಣೆ* ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ಆದೇಶ* ಆಗಸ್ಟ್ 30ರ ವರೆಗೆ ನೈಟ್‌ ಕರ್ಫ್ಯೂ ವಿಸ್ತರಣೆ

ಬೆಂಗಳೂರು, (ಆ.17): ಸಿಲಿಕಾನ್‌ ಸಿಟಿ ಬೆಂಗಳೂರು ನಗರದಲ್ಲಿ ಆಗಸ್ಟ್ 30ರ ವರೆಗೆ ನೈಟ್‌ ಕರ್ಫ್ಯೂ ವಿಸ್ತರಿಸಿ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಆದೇಶ ಹೊರಡಿಸಿದ್ದಾರೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ಇಂದು (ಆಗಸ್ಟ್ 17) ಆದೇಶ ಹೊರಡಿಸಿದ್ದು, ಆಗಸ್ಟ್ 30ರ ರಾತ್ರಿ 9 ಗಂಟೆಯಿಂದ ಬೆಳಗ್ಗೆ 5 ಗಂಟೆಯ ವರೆಗೆ ನೈಟ್‌ ಕರ್ಫ್ಯೂ ಜಾರಿಯಲ್ಲಿ ಇರಲಿದೆ. 

ಕರ್ನಾಟಕದಲ್ಲಿ ಕೊರೋನಾ ಕೊಂಚ ಹೆಚ್ಚಳ: ಇಲ್ಲಿದೆ ಆ.17ರ ಅಂಕಿ-ಸಂಖ್ಯೆ

ಕೊರೋನಾ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯಾದಂತ ರಾತ್ರಿ ಕರ್ಫ್ಯೂ ನಿರ್ಬಂಧ ವಿಧಿಸಲಾಗಿತ್ತು. ಜೊತೆಗೆ, ಗಡಿಜಿಲ್ಲೆಗಳಲ್ಲಿ ವಾರಾಂತ್ಯ ಕರ್ಫ್ಯೂ ಹಾಕಲಾಗಿತ್ತು. ನೈಟ್ ಕರ್ಫ್ಯೂ ವಿಧಿಸಿರುವುದರಿಂದ ಮೆಟ್ರೋ ಸಂಚಾರ ಅವಧಿಯಲ್ಲಿ ಬದಲಾವಣೆ ಮಾಡಲಾಗಿತ್ತು. 

ಇದೀಗ, ರಾತ್ರಿ ಕರ್ಫ್ಯೂ ಆದೇಶವನ್ನು ಈ ತಿಂಗಳ ಅಂತ್ಯದ ವರೆಗೆ ಮುಂದುವರಿಸಿ ಆದೇಶ ಹೊರಡಿಸಲಾಗಿದೆ. ಹಾಗಾಗಿ, ಬಹುತೇಕ ಈಗಿರುವ ನಿಯಮಗಳು ಆಗಸ್ಟ್ 30ರ ವರೆಗೆ ಮುಂದುವರಿಯಲಿದೆ.